Get Updates
Get notified of breaking news, exclusive insights, and must-see stories!

ಕರ್ನಾಟಕ | ವಿಮಾನ ನಿಲ್ದಾಣಕ್ಕೆ ಆಸ್ಟ್ರಿಯಾದಿಂದ ಬಂದಿಳಿದ 2 ಅಗ್ನಿಶಾಮಕ ವಾಹನ

ಬೆಂಗಳೂರು, ಸೆಪ್ಟಂಬರ್ 23: ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಯಾಗಿರುವ ವಿಜಯಪುರದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಉದ್ಘಾಟನೆಗೆ ಸಜ್ಜಾಗುತ್ತಿರುವ ವಿಜಯಪುರದ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ ಬಂದಿಳಿದಿದೆ. ಇವು ಹೆಚ್ಚಿನ ಸಾಮರ್ಥ್ಯ ಹೊಂದಿದ ವಾಹನಗಳಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದರು.

ಈ ಅಗ್ನಿಶಾಮಕ ವಾಹನಗಳು ಕಂಪ್ಯೂಟರೀಕೃತವಾಗಿದ್ದು, ಜಾಗತಿಕ ಟೆಂಡರ್ ಅಡಿಯಲ್ಲಿ ಆಸ್ಟ್ರಿಯಾದಿಂದ ಪೂರೈಕೆಯಾಗಿವೆ. ಇವು ತುರ್ತು ಸಂದರ್ಭಗಳಲ್ಲಿ 160 ಮೀಟರಿನವರೆಗೂ ನೀರನ್ನು ಹಾಯಿಸಿ, ಬೆಂಕಿಯನ್ನು ನಂದಿಸುವ ಸಾಮರ್ಥ್ಯ ಹೊಂದಿವೆ. ಇದರೊಂದಿಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹೇಳಿದ್ದ ಮತ್ತೊಂದು ಅಗತ್ಯ ಪೂರೈಸಲಾಗಿದೆ.

Austria-Made 2 Firefighting Vehicles Arrive for Vijayapura Airport MB Patil

ಹಡಗಿನಲ್ಲಿ ಬಂದ ಅಗ್ನಿಶಾಮಕ ವಾಹನಗಳು

ಈ ಅಗ್ನಿಶಾಮಕ ವಾಹನಗಳು ನೆಲದ ಮೇಲಿನ‌ ಬೆಂಕಿಯನ್ನು ನಂದಿಸಿಕೊಂಡು ವೇಗದಿಂದ ಮುನ್ನುಗ್ಗಬಲ್ಲವು. ವಿಜಯಪುರ ವಿಮಾನ ನಿಲ್ದಾಣದ ಮೂಲ ವಿನ್ಯಾಸದಲ್ಲಿ ಈ ಸೌಲಭ್ಯಗಳು ಇರಲಿಲ್ಲ. ಆಮೇಲೆ ಇದರ ಜತೆಗೆ ಇನ್ನೂ ಹಲವು ಅನುಕೂಲಗಳನ್ನು ಸೇರಿಸಲಾಯಿತು. ಆಸ್ಟ್ರಿಯಾದಿಂದ ಹಡಗಿನಲ್ಲಿ ಮುಂಬೈಗೆ ಬಂದಿಳಿದ ಈ ವಾಹನಗಳನ್ನು, ಅಲ್ಲಿಂದ ಟ್ರಕ್ ಮೂಲಕ ವಿಜಯಪುರಕ್ಕೆ ಸಾಗಿಸಿಕೊಂಡು ಬರಲಾಗಿದೆ.

ಎಂದು ಅವರು ವಿವರಿಸಿದ್ದಾರೆ.

ಅಗ್ನಿಶಾಮಕ ವಾಹನಗಳು ಬಂದಿರುವುದರಿಂದ ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಯತ್ತ ಮತ್ತೊಂದು ಹೆಜ್ಜೆ ಮುಂದಿಡಲಾಗಿದೆ. ಪರಿಸರ ಸಂಬಂಧಿ ಅನುಮತಿ ಮಾತ್ರ ಬಾಕಿ ಇದ್ದು, ಅದನ್ನು ಪಡೆದುಕೊಳ್ಳಲು ಕೂಡ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.

ಏರ್‌ಪೋರ್ಟ್‌ಗೆ ಹೆಚ್ಚುವರಿ ಅನುದಾನಕ್ಕೆ ಒಪ್ಪಿಗೆ

ಸದರಿ ವಿಜಯಪುರದ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270 ಕೋಟಿ ರೂಪಾಯಿ ಒದಗಿಸಲು ಇತ್ತೀಚೆಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಹಾಗೂ ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ಈ ಅನುದಾನ ಬಳಸಿಕೊಳ್ಳಲಾಗುತ್ತದೆ ಎಂದು ಇತ್ತೀಚೆಗೆ ಸಚಿವರು ತಿಳಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+