ಯತ್ನಾಳ್, ಜಾರಕಿಹೊಳಿ ಟೀಂ ಗೆ ಪ್ರತಾಪ್ ಸಿಂಹ ಎಂಟ್ರಿ: ವಿಜಯೇಂದ್ರ ವಿರುದ್ಧ ಬಿಗ್ ಪ್ಲಾನ್ ರೆಡಿ ನಾ?
ಬೆಂಗಳೂರು, ಆಗಸ್ಟ್ 02: ಬಿಜೆಪಿಯ ಅತೃಪ್ತ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರು ಕೇಸರಿ ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಂಡಾಯ ಎಬ್ಬಿಸಲು ಸಮಾನ ಮನಸ್ಕ ನಾಯಕರ ತಂಡವನ್ನು ಕಟ್ಟುವ ಪ್ರಯತ್ನಕ್ಕೆ ಗುರುವಾರ ಚಾಲನೆ ನೀಡಿದ್ದಾರೆ.
ಗುರುವಾರ ಬಿಜೆಪಿಯ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಅವರ ನಿವಾಸದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್, ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಮಹತ್ವದ ಸಭೆ ನಡೆಸಿದ್ದಾರೆ. ಇನ್ನೂ ಬಿಜೆಪಿ ಹೇಗೆ ಅಪ್ಪ-ಮಕ್ಕಳ ಪಕ್ಷವಾಯಿತು ಎಂದು ನಾವು ಚರ್ಚಿಸಿದ್ದೇವೆ. ಅವರ ಹಿಡಿತದಿಂದ ಪಕ್ಷವನ್ನು ಮುಕ್ತಗೊಳಿಸಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಸುದ್ದಿಗಾರರಿಗೆ ತಿಳಿಸಿದರು.

ಇನ್ನೂ ಇತ್ತೀಚ್ಚೆಗೆ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ "ಪಕ್ಷ ವಿರೋಧಿ ಚಟುವಟಿಕೆ" ನಡೆಸಿದ್ದಾರೆ ಎಂದು ಆರೋಪಿಸಿದ್ದರು. ನಾವು ಈ ಎಲ್ಲ ವಿಷಯಗಳ ಕುರಿತು ಹೈಕಮಾಂಡ್‌ಗೆ ಒಪ್ಪಿಸುತ್ತೇವೆ ಎಂದು ಹೇಳಿದ್ದಾರೆ.
ಇತ್ತ ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಯ ಮೊದಲು ಕರ್ನಾಟಕದಲ್ಲಿ ಪಕ್ಷದ ಭವಿಷ್ಯದ ಬಗ್ಗೆ ಚರ್ಚಿಸಲು ಸಮಾನ ಮನಸ್ಕರ ನಾಯಕರೊಂದಿಗೆ ಒಂದು ವಾರದಲ್ಲಿ ದೊಡ್ಡ ಸಭೆ ನಡೆಸಲಾಗುವುದು ಎಂದು ಯತ್ನಾಳ್ ಹೇಳಿದರು. ಪಕ್ಷದೊಳಗೆ ಇಷ್ಟೊಂದು ಅಸಮಾಧಾನವಿದೆ ಎಂದು ನನಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಸೋತ ಅಭ್ಯರ್ಥಿಗಳನ್ನು ಹಾಲಿ ರಾಜ್ಯ ನಾಯಕತ್ವ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಚುನಾವಣಾ ಸಮಯದಲ್ಲಿ ಅಭ್ಯರ್ಥಿಗಳಿಗೆ ದ್ರೋಹ ಬಗೆದಿದ್ದಾರೆ ಎಂಬ ವ್ಯಾಪಕ ಅಭಿಪ್ರಾಯವಿದೆ ಎಂದು ಆರೋಪಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಟು ಮೈಸೂರು ಬಿಜೆಪಿ ಪಾದಯಾತ್ರೆ ಬಗ್ಗೆ ನಡೆಯುತ್ತಿರುವ ಗೊಂದಲದ ಬೆಳವಣಿಗೆ ನಡುವೆ ಬಿಜೆಪಿ ಶಾಸಕರ ಒಂದು ತಂಡ ಪ್ರತ್ಯೇಕ ಮೀಟಿಂಗ್ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಪಾದಯಾತ್ರೆಗೆ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧ ವ್ಯಕ್ತಪಡಿಸಿದ್ದರು. ಇತ್ತ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆಯಂತೆ ಪಾದಯಾತ್ರೆ ನಡೆಸಲಾಗ್ತಿದೆ ಎಂಬ ಗಂಭೀರ ಆರೋಪವನ್ನು ಯತ್ನಾಳ್ ಮಾಡಿದ್ದರು.
ಮೈಸೂರು ನಿವೇಶನ ಹಂಚಿಕೆ ಹಗರಣದಲ್ಲಿ ಬಿಜೆಪಿ ಗಮನಹರಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ರಮೇಶ್ ಜಾರಕಿಹೊಳಿ ಅವರು ಎಸ್‌ಟಿ ಅಭಿವೃದ್ಧಿ ನಿಗಮದ ಹಣದ ದುರುಪಯೋಗವನ್ನು ಎತ್ತಿ ಹಿಡಿಯಲು ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ಪಕ್ಷದ ಹೈಕಮಾಂಡ್ ಅನುಮತಿ ಕೋರಿದ್ದಾರೆ.
ಇನ್ನೂ ಸಭೆಯ ಬಳಿಕ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟದ ಬಗ್ಗೆ ಹಾಗೂ ಪಕ್ಷದಲ್ಲಿ ಇರುವ ಅಸಮಾಧಾನದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಪಕ್ಷ ಎಲ್ಲರನ್ನೂ, ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ಆರೋಪ ಇದೆ. ಈ ವಿಚಾರವಾಗಿ ಎಲ್ಲಾ ಕಡೆಗಳಿಂದಲೂ ನಮಗೆ ಕರೆ ಬರುತ್ತಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲ್ಲ. ಉಪ ಮುಖ್ಯಮಂತ್ರಿ ಹುದ್ದೆ ಸಂವಿಧಾನಾತ್ಮಕ ಅಲ್ಲ ಹಾಗಿದ್ದರೂ ರಾಜ್ಯಪಾಲರ ನೋಟಿಸ್ ವಿರುದ್ಧ ನಿರ್ಣಯ ಮಾಡಲಾಗಿದೆ. ಇದು ಸಂವಿಧಾನಾತ್ಮಕ ಅಲ್ಲ. ಈ ಎಲ್ಲಾ ಹಿನ್ನೆಲೆಯಲ್ಲಿ ಸಮಾನ ಮನಸ್ಕರು ಸೇರಿ ಬಿಜೆಪಿಯನ್ನು ಪಿತ್ರಾರ್ಜಿತ ಪಕ್ಷವಾಗಿರದೆ, ಎಲ್ಲರ ಪಕ್ಷವಾಗಿ ಮಾಡಲು ಹೋರಾಟ ಮಾಡಲಾಗುವುದು ಎಂದು ಹೇಳಿದರು.
-
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್‌ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್












Click it and Unblock the Notifications