Bengaluru Traffic Advisory: ಆಗಸ್ಟ್ 26 ಬೆಂಗಳೂರಿಗೆ ಮೋದಿ ಆಗಮನ; ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ!
ಬೆಂಗಳೂರು, ಆಗಸ್ಟ್ 25: ಚಂದ್ರಯಾನ-3 ಮಿಷನ್ ಯಶಸ್ವಿಯಾದ ಹಿನ್ನೆಲೆ (ಶನಿವಾರ) ಆಗಸ್ಟ್ 26 ರಂದು ಬೆಂಗಳೂರಿನ ಇಸ್ರೊ ಕೇಂದ್ರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ಸೂಚನೆ ನೀಡಿದ್ದಾರೆ.
ಹೌದು, ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆ ನಗರದ ಕೆಲ ರಸ್ತೆಗಳಲ್ಲಿ ಆಗಸ್ಟ್ 26ರಂದು ಸಂಚಾರ ಮಾರ್ಗ ಬದಲಾವಣೆ ಮಾಡಿ ಟ್ರಾಫಿಕ್ ಪೊಲೀಸರು ಸೂಚನೆ ನೀಡಿದ್ದಾರೆ.

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಪ್ರಸ್ತುತ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿದ್ದು, ಶನಿವಾರ ಬೆಳಗ್ಗೆ ನೇರವಾಗಿ ಬೆಂಗಳೂರಿಗೆ ಬರಲಿದ್ದಾರೆ. ಆಗಸ್ಟ್ 26 ಬೆಳಗ್ಗೆ 4:30 ರಿಂದ ಬೆಳಗ್ಗೆ 9:30 ರವರೆಗೆ ಕೆಳಕಂಡ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಪೋಲಿಸರ ಮನವಿ ಮಾಡಿದ್ದಾರೆ.
ಓಲ್ಡ್ ಏರ್ಪೋರ್ಟ್ ರಸ್ತೆ, ಓಲ್ಡ್ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ,ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ ಬಳಸದಿರುವಂತೆ ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಸಿವಿ ರಾಮನ್ ರಸ್ತೆ, ಯಶವಂತಪುರ ಫ್ಲೈ ಓವರ್,ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ), ಮಾಗಡಿ ರಸ್ತೆ, ಹೊರವರ್ತುಲ ರಸ್ತೆ (ಗೊರಗುಂಟೆ ಪಾಳ್ಯ ಜಂಕ್ಷನ್ನಿಂದ ಸುಮನಹಳ್ಳಿ)ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ.
ಕೆಲ ಮಾರ್ಗಗಳ ಸಂಚಾರ ನಿರ್ಬಂಧ ಮಾತ್ರವಲ್ಲದೆ. ಬೆಂಗಳೂರು ನಗರದೊಳಗೆ ಆಗಸ್ಟ್ 26ರ ಬೆಳಗಿನ ಜಾವ 04.00 ಗಂಟೆಯಿಂದ ಬೆಳಗ್ಗೆ 11.00 ಗಂಟೆಯವರೆಗೆ ಭಾರೀ ಸರಕು ಸಾಗಾಣಿಕೆ ವಾಹನಗಳ ಸಂಚಾರ ನಿರ್ಬಂಧ ವಿಧಿಸಲಾಗಿದೆ.












Click it and Unblock the Notifications