ಗುರುವಾರ ರೈಲ್ವೆ ಬಂದ್, ಪೊಲೀಸರಿಂದ ಅಗತ್ಯ ಭದ್ರತೆ

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 14 : ಕನ್ನಡ ಒಕ್ಕೂಟ ಸೆಪ್ಟೆಂಬರ್ 15ರಂದು ಕರ್ನಾಟಕದಲ್ಲಿ ರೈಲ್ವೆ ಬಂದ್‌ಗೆ ಕರೆ ನೀಡಿದೆ. ಸುಮಾರು 1 ಲಕ್ಷ ಜನರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆದ್ದರಿಂದ, ಗುರುವಾರ ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಸೆಪ್ಟೆಂಬರ್ 15ರ ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿಲ್ಲ. ಆದರೆ, ಮೊದಲೇ ಘೋಷಣೆ ಮಾಡಿದಂತೆ ರೈಲ್ವೆ ಬಂದ್ ನಡೆಯಲಿದೆ' ಎಂದು ಹೇಳಿದ್ದಾರೆ. [ರೈಲು ಟಿಕೆಟ್ ಕೊಳ್ಳಲು ಆಧಾರ್ ಕಡ್ಡಾಯ]

indian railways

ಕಾವೇರಿ ನದಿ ನೀರು ಹಂಚಿಕೆ ಮತ್ತು ಮಹದಾಯಿ ವಿವಾದದಲ್ಲಿ ಬಂದ ತೀರ್ಪನ್ನು ಖಂಡಿಸಿ ರೈಲ್ವೆ ಬಂದ್ ನಡೆಸಲಾಗುತ್ತಿದೆ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ರೈಲ್ವೆ ಬಂದ್ ಕರೆ ನೀಡಲಾಗಿದೆ. ಆದ್ದರಿಂದ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುರುವಾರ ರೈಲ್ವೆ ಸಂಚಾರ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.[ಮಹದಾಯಿ ನೀರು ಹಂಚಿಕೆ : ಅಂದಿನಿಂದ ಇಂದಿನವರೆಗೆ]

ಮಹದಾಯಿ ಮತ್ತು ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಬಂದ್ ಕರೆ ನೀಡಲಾಗಿದೆ. ಸುಮಾರು 1 ಲಕ್ಷ ಜನರು ಈ ಬಂದ್‌ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ವಿವಿಧ ಜಿಲ್ಲೆಗಳಲ್ಲಿ ರೈಲು ಸಂಚಾರವನ್ನು ತಡೆಯಲಿದ್ದಾರೆ.[ಬೆಂಗಳೂರು ರೈಲ್ವೆ ನಿಲ್ದಾಣದಲ್ಲೇ ಸಿಗಲಿದೆ ಓಲಾ ಕ್ಯಾಬ್]

ಸೋಮವಾರ ಬೆಂಗಳೂರಿನಲ್ಲಿ ಗಲಭೆ ನಡೆದಿರುವ ಹಿನ್ನಲೆಯಲ್ಲಿ, ಸೆ.15ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ಪೊಲೀಸರು ಹೆಚ್ಚಿನ ಬಂದೋಬಸ್ತ್ ಮಾಡಿದ್ದಾರೆ. ಈಗಾಗಲೇ ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ತನಕ ಕರ್ಪ್ಯೂ ಜಾರಿಯಲ್ಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Nearly 1 lakh people are expected to participate in the Rail Rokho or Railway bandh programme to be held on September 15, 2016 by pro Kannada activists. The rail rokho programme is being organised in protest against the Cauvery and Mahadevi verdicts.
Please Wait while comments are loading...