ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆ ತೀರ್ಪು : ಕರ್ನಾಟಕದ ರಾಜಕೀಯ ನಾಯಕರ ಪ್ರತಿಕ್ರಿಯೆ

|
Google Oneindia Kannada News

Recommended Video

Ayodhya Verdict : Karnataka BJP leaders tweet about Ayodhya Judgement| Oneindia Kannada

ಬೆಂಗಳೂರು, ನವೆಂಬರ್ 09 : ದಶಕಗಳ ಕಾಲದ ಅಯೋಧ್ಯೆ ಭೂ ವಿವಾದದ ತೀರ್ಪು ಪ್ರಕಟವಾಗಿದೆ. ವಿವಾದಿತ 2.77 ಎಕರೆ ಜಾಗವನ್ನು ಟ್ರಸ್ಟ್‌ಗೆ ನೀಡಲಾಗಿದೆ. ಮೂರು ತಿಂಗಳಿನಲ್ಲಿ ಟ್ರಸ್ಟ್‌ ರಚನೆ ಮಾಡಬೇಕು ಎಂದು ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಶನಿವಾರ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿದೆ. ಆದೇಶ ಪ್ರಕಟವಾಗುತ್ತಿದ್ದಂತೆ ಕರ್ನಾಟಕದ ರಾಜಕೀಯ ನಾಯಕರಯ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಅಯೋಧ್ಯೆ ತೀರ್ಪು; ಐವರು ನ್ಯಾಯಮೂರ್ತಿಗಳ ಪರಿಚಯಅಯೋಧ್ಯೆ ತೀರ್ಪು; ಐವರು ನ್ಯಾಯಮೂರ್ತಿಗಳ ಪರಿಚಯ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಚಿವರಾದ ಸಿ. ಟಿ. ರವಿ, ಸುರೇಶ್ ಕುಮಾರ್, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಅಯೋಧ್ಯ ವಿವಾದ: ಲೆಕ್ಕವಿಲ್ಲದಷ್ಟು ಸಂಧಾನ, ಎಲ್ಲವೂ ವಿಫಲ!ಅಯೋಧ್ಯ ವಿವಾದ: ಲೆಕ್ಕವಿಲ್ಲದಷ್ಟು ಸಂಧಾನ, ಎಲ್ಲವೂ ವಿಫಲ!

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, "ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ. ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ . ಉದ್ವೇಗಕ್ಕೆ ಒಳಗಾಗಬೇಡಿ , ಯಾರೂ ವಿಜೃಂಭಿಸಬೇಡಿ. ಸಮಾಜದ ಸಾಮರಸ್ಯ ಕದಡದೆ, ಶಾಂತಿ ಕಾಪಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, "ರಾಮ ಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಈ ದೇಶದ ಸಿದ್ಧಾಂತವನ್ನು ಪಾಲಿಸೋಣ. ನಾವೆಲ್ಲರೂ ಎಂದಿನಂತೆ ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ" ಎಂದು ಕರೆ ನೀಡಿದ್ದಾರೆ.

ಶಾಂತಿ ಕಾಪಾಡಿಕೊಳ್ಳಿ

ಶಾಂತಿ ಕಾಪಾಡಿಕೊಳ್ಳಿ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, "ಅಯೋಧ್ಯೆ ವಿವಾದದ ಕುರಿತು ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ. ಸಮಾಜದ ಸಾಮರಸ್ಯ ಕದಡದೆ ಶಾಂತಿ ಕಾಪಾಡಿಕೊಳ್ಳಿ" ಎಂದು ಟ್ವೀಟ್ ಮಾಡಿದ್ದಾರೆ.

ಎಂ. ಬಿ. ಪಾಟೀಲ್ ಟ್ವೀಟ್

ಎಂ. ಬಿ. ಪಾಟೀಲ್ ಟ್ವೀಟ್

"ಭಾರತ ಸುಪ್ರೀಂಕೋರ್ಟ್‌ ತೀರ್ಪನ್ನು ಗೌರವಿಸುತ್ತದೆ ಮತ್ತು ಅಭಿನಂದಿಸುತ್ತದೆ. ದಶಕಗಳ ಕಾಲದ ವಿವಾದಕ್ಕೆ ತೆರೆ ಬಿದ್ದಿದೆ" ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎಂ. ಬಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಬಿ. ಶ್ರೀರಾಮುಲು ಪ್ರತಿಕ್ರಿಯೆ

ಬಿ. ಶ್ರೀರಾಮುಲು ಪ್ರತಿಕ್ರಿಯೆ

ಆರೋಗ್ಯ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, "ಅಯೋಧ್ಯೆ ಇನ್ನು ವಿವಾದವಲ್ಲ. ಅಯೋಧ್ಯೆ ಹಿಂದೂಗಳದ್ದು. ಅಯೋಧ್ಯೆ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ. ಈ ತೀರ್ಪಿನಿಂದ ಭಾರತೀಯರ ಪುರಾಣ, ನಂಬಿಕೆ, ಆಚರಣೆಗಳಿಗೆ ನ್ಯಾಯಾಂಗದಲ್ಲೂ ಮಾನ್ಯತೆ ಇದೆ ಎಂಬುದು ಸ್ಪಷ್ಟವಾಗಿದೆ. ಅಯೋಧ್ಯೆಯಲ್ಲಿ ರಾಮನ ಜನ್ಮಸ್ಥಳ, ಅಲ್ಲಿ ಮಂದಿರ ಇದ್ದದ್ದೂ ಹೌದು, ಮಸೀದಿ ನಿರ್ಮಿಸಿದ್ದೂ ಹೌದು. ಆದರೆ, ಮೊದಲು ಇದ್ದದ್ದು ಮಂದಿರ. ಹೀಗಾಗಿ ಅಯೋಧ್ಯೆಯ ರಾಮಜನ್ಮಭೂಮಿಯನ್ನು ಹಿಂದೂಗಳಿಗೆ ನೀಡಿ, ಮುಸ್ಲಿಮರಿಗೆ ಅಯೋಧ್ಯೆಯಲ್ಲೇ ಪರ್ಯಾಯ ಜಮೀನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳುವ ಮೂಲಕ ನ್ಯಾಯಾಂಗವೂ ಭಾರತವೆಂದರೆ ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದೆ" ಎಂದು ಹೇಳಿದ್ದಾರೆ.

ಸ್ವಾಗತಾರ್ಹ ತೀರ್ಪು

ಸ್ವಾಗತಾರ್ಹ ತೀರ್ಪು

"ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದ್ದು ಇದನ್ನು ಇಡೀ ಭಾರತ ದೇಶ ಸ್ವಾಗತಿಸಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ,ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡ ಹಾಗೂ ಆರ್‌ಎಸ್‌ಎಸ್‌ನ ಸರಸಂಚಾಲಕ ಮೋಹನ್ ಭಾಗತ್ ಏನು ತೀರ್ಮಾನಿಸುತ್ತಾರೋ ಅದರಂತೆ ನಾವು ನಡೆದುಕೊಳ್ಳಲಿದ್ದೇವೆ" ಎಂದು ಕೆ. ಎಸ್. ಈಶ್ವರಪ್ಪ ಹೇಳಿದರು.

English summary
Ayodhya Verdict : Karnataka leaders tweet about verdict. In a order Supreme Court directed to setting up of trust in a disputed land.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X