ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಹಿಸುದ್ದಿ: ಕೊರೊನಾ ಸೋಂಕಿಗೆ ಬಂತು ಆಯುರ್ವೇದ ಔಷಧಿ

|
Google Oneindia Kannada News

ಬೆಂಗಳೂರು, ಜುಲೈ 2: ಕೊರೊನಾ ಸೋಂಕಿನ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಸಿಹಿಸುದ್ದಿಯೊಂದು ಬಂದಿದೆ. ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ ಅವರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ 10 ಸೋಂಕಿತರ ಮೇಲೆ ನಡೆಸಿದ ಆಯುರ್ವೇದ ಮಾತ್ರೆಗಳು, ಔಷಧಿ ಪ್ರಯೋಗ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 100 ಮಂದಿಗೆ ಆಯುರ್ವೇದ ಔಷಧ ನೀಡುವ ಪ್ರಯತ್ನ ನಡೆದಿದೆ.

Recommended Video

India Should let Japan , Australia and US into Andaman and Nicobar | Oneindia Kannada

ಡಾ.ಗಿರಿಧರ ಅವರು ಸೋಂಕಿತರ ಸಂಪರ್ಕಕ್ಕೆ ಬಂದ ಸುಮಾರು 42 ಸಾವಿರ ಮಂದಿಗೆ ಉಚಿತವಾಗಿ ಆಯುರ್ವೇದ ಔಷಧ ನೀಡುವುದಾಗಿ ತಿಳಿಸಿದ್ದಾರೆ. ಈ ಕುರಿತು ಇತ್ತೀಚಿಗೆ ವಿಶೇಷ ಕಾರ್ಯಪಡೆ ಸಭೆಯಲ್ಲಿ ಚರ್ಚಿಸಲಾಗಿದೆ. ಆಯುರ್ವೇದದ ಮೂಲಕ ಕೊರೊನಾ ಸೋಂಕಿತರನ್ನು ಗುಣಪಡಿಸಿದ ಡಾ.ಗಿರಿಧರ ಕಜೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ 23 ವರ್ಷದಿಂದ 65 ವರ್ಷದವರೆಗಿನ ಕೊರೊನಾ ಸೋಂಕಿತರಿಗೆ ಈ ಆಯುರ್ವೇದ ಚಿಕಿತ್ಸೆ ನೀಡಿದ್ದರು. ಚಿಕಿತ್ಸೆ ಪಡೆದ ಸೋಂಕಿತರು ಗುಣಮುಖರಾಗಿದ್ದಾರೆ.

ಕೊರೊನಾವನ್ನು ಆಯುರ್ವೇದದ ಮೂಲಕ ಗುಣಪಡಿಸಬಲ್ಲೆ: ಖ್ಯಾತ ಆಯುರ್ವೇದ ತಜ್ಞ, ಡಾ.ಕಜೆಕೊರೊನಾವನ್ನು ಆಯುರ್ವೇದದ ಮೂಲಕ ಗುಣಪಡಿಸಬಲ್ಲೆ: ಖ್ಯಾತ ಆಯುರ್ವೇದ ತಜ್ಞ, ಡಾ.ಕಜೆ

ಚಿಕಿತ್ಸೆಯಲ್ಲಿ ಆಯುರ್ವೇದ ಬಳಕೆ ಮಾಡುವ ಕುರಿತು ವರದಿ ನೀಡುವಂತೆ ಆರ್‌ಜಿಯುಎಚ್‌ಎಸ್‌ ಕುಲಪತಿ ಅವರಿಗೆ ತಿಳಿಸಲಾಗಿದೆ ಎಂದು ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ.

ವಿವಿಧ ಕಾಯಿಲೆಯಿದ್ದವರೂ ಗುಣಮುಖ

ವಿವಿಧ ಕಾಯಿಲೆಯಿದ್ದವರೂ ಗುಣಮುಖ

ಹೃದ್ರೋಗ, ಕ್ಷಯ ರೋಗ, ಮಧುಮೇಹ ಇದ್ದ ರೋಗಿಗಳು ಈ ಆಯುರ್ವೇದ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಅತ್ಯಂತ ಕಡಿಮೆ ವೆಚ್ಚದ ಚಿಕಿತ್ಸೆ ಇದಾಗಿದ್ದು, ಡಾ. ಗಿರಿಧರ್ ಕಜೆಯವರ ಈ ಪ್ರಯೋಗ ಯಶಸ್ಸು ಕಂಡಿದೆ. ಬೇರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವವರು ಸೇರಿ 10 ಜನ ಸೋಂಕಿತರು ಆಯುರ್ವೇದ ಮಾತ್ರೆಗಳನ್ನು ಸೇವಿಸಿ ಗುಣಮುಖರಾಗಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟ್ರಯಲ್

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟ್ರಯಲ್

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕ್ಲಿನಿಕಲ್‌ ಟ್ರಯಲ್ಸ್‌ ನಡೆಸಲು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಅಧೀನ ಸಂಸ್ಥೆಯಾದ ಕ್ಲಿನಿಕಲಿ ಟ್ರಯಲ್‌ ರಿಜಿಸ್ಟರಿ ಆಫ್ ಇಂಡಿಯಾ ಅನುಮತಿ ನೀಡಿತ್ತು. ಜೂ.7 ರಿಂದ 25ರವರೆಗೂ ಈ ಪ್ರಯೋಗ ನಡೆದಿತ್ತು ಎಂಬ ಮಾಹಿತಿ ಲಬ್ಯವಾಗಿದೆ.

ಆಯುರ್ವೇದ ಚಿಕಿತ್ಸೆ ವಿಧಾನ ಮುಂದಿನ ಹಂತಕ್ಕೆ

ಆಯುರ್ವೇದ ಚಿಕಿತ್ಸೆ ವಿಧಾನ ಮುಂದಿನ ಹಂತಕ್ಕೆ

ಈ ಆಯುರ್ವೇದ ಚಿಕಿತ್ಸೆ ವಿಧಾನವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಬಂಧ ರಾಜೀವ್‌ ಗಾಂಧಿ ಆರೋಗ್ಯ ವಿವಿ ಕುಲಪತಿಗೆ ವರದಿ ನೀಡಲು ತಿಳಿಸಲಾಗಿದೆ.

ಔಷಧಿಗೆ 90 ರಿಂದ 180 ರೂ.

ಔಷಧಿಗೆ 90 ರಿಂದ 180 ರೂ.

ಆಯುರ್ವೇದದ ಈ ಔಷಧಿಗೆ 90ರೂ. ನಿಂದ 180 ರೂ. ತಗುಲುತ್ತದೆ. ಇನ್ನು ಮುಂದಿನ ಹಂತದಲ್ಲಿ ಹೆಚ್ಚಿನ ಸೋಂಕಿತರಿಗೆ ಮತ್ತು ಮುಂಜಾಗ್ರತಾ ದೃಷ್ಟಿಯಿಂದ ಸೋಂಕಿತ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಈ ಔಷಧ ನೀಡಬಹುದು. ಈ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಡಾ.ಗಿರಿಧರ ಕಜೆ ತಿಳಿಸಿದ್ದಾರೆ.

English summary
Scientists all over the world are immersed in finding a cure for the dreaded coronavirus disease. However, the clinical trial that is held in Bengaluru has proved that it is possible to cure this pandemic through ancient Indian medical therapy of Ayurveda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X