ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ನನಗೆ ಸಚಿವ ಸ್ಥಾನ ನೀಡಲು ಮುಂದಾಗಿತ್ತು: ಬಿ.ಸಿ ಪಾಟೀಲ್

By Nayana
|
Google Oneindia Kannada News

Recommended Video

ಸಚಿವ ಸ್ಥಾನ ಕೈ ತಪ್ಪುತ್ತಿದಂತೆಯೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಬಿಸಿ ಪಾಟೀಲ್

ಬೆಂಗಳೂರು, ಜೂನ್ 6: ಸಚಿವ ಸ್ಥಾನದಿಂದ ವಂಚಿತರಾಗಿರುವ ಬಿ.ಸಿ. ಪಾಟೀಲ್ ತಮ್ಮ ಅಸಮಾಧಾನ ಹೊರ ಹಾಕಿದ್ದು, ಹಾವೇರಿ ಜಿಲ್ಲೆಯಿಂದ ಆಯ್ಕೆಯಾಗಿರುವ ಏಕೈಕ್ ಕಾಂಗ್ರೆಸ್ ಶಾಸಕ ತಾವಾಗಿದ್ದು, ಪಕ್ಷ ಅನ್ಯಾಯ ಮಾಡಿದೆ ಎಂದರು.

ಕಾಂಗ್ರೆಸ್‌ನ ಸಂಭಾವ್ಯ ಸಚಿವರ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ, ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಸಿ ಪಾಟೀಲ್ ನನ್ನ ಬಳಿ ಹಣವಿಲ್ಲ, ನನಗೆ ಗಾಡ್‌ ಫಾದರ್ ಇಲ್ಲ ಎಂದು ನೋವಿನಿಂದ ಹೇಳಿಕೊಂಡಿದ್ದಾರೆ.

'ಕೈ'ತಪ್ಪಿದ ಸಚಿವ ಸ್ಥಾನ: ಶಾಸಕರ ಅಸಮಾಧಾನ, ಬೆಂಬಲಿಗರ ಪ್ರತಿಭಟನೆ 'ಕೈ'ತಪ್ಪಿದ ಸಚಿವ ಸ್ಥಾನ: ಶಾಸಕರ ಅಸಮಾಧಾನ, ಬೆಂಬಲಿಗರ ಪ್ರತಿಭಟನೆ

ಬಿಜೆಪಿಯವರು ಸಚಿವ ಸ್ಥಾನ, ಆಸೆ, ಆಮಿಷವೊಡ್ಡಿದ್ದರು, ಆದರೆ ನಾನು ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ. ಬಹುಷಃ ನಾನು ನಿಷ್ಠೆಯಿಂದ ಮಾಡಿದ ಕೆಲಸಕ್ಕೆ ಸಿಕ್ಕ ಪ್ರತಿಫಲ ಇದಾಗಿದೆ ಎಂದು ಸ್ಫೋಟಕ ಸತ್ಯವನ್ನು ಬಾಯ್ಬಿಟ್ಟಿದ್ದಾರೆ.

B.C.Patil says Bjp was offered me ministry

ಹಣಕ್ಕಾಗಿ, ಅಧಿಕಾರಕ್ಕಾಗಿ ಆಸೆ ಪಡುವ ವ್ಯಕ್ತಿ ನಾನಲ್ಲ, ಅಂತಹ ಭಾವನೆಗಳೂ ನನಗೆ ಇಲ್ಲ, ಆದರೆ ನನಗೆ ನ್ಯಾಯವಾಗಿ ಸಿಗಬೇಕಾದ ಸ್ಥಾನ ಸಿಕ್ಕಿಲ್ಲ, ಇದರಿಂದ ನೋವಾಗಿದೆ, ನನ್ನ ಬೆಂಬಲಿಗರಿಗೂ ನೋವಾಗಿದ ಎಂದು ತಿಳಿಸಿದ್ದಾರೆ.

ಸಚಿವ ಸ್ಥಾನ ಗಿಟ್ಟಿಸಿಕೊಂಡವರ ಫೈನಲ್ ಲಿಸ್ಟ್ ಇಲ್ಲಿದೆ ನೋಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡವರ ಫೈನಲ್ ಲಿಸ್ಟ್ ಇಲ್ಲಿದೆ ನೋಡಿ

ಕಾಂಗ್ರೆಸ್‌ನ ಸಂಭಾವ್ಯ ಸಚಿವರ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ, ಸಚಿವ ಸ್ಥಾನ ಕೈತಪ್ಪಿದ ಆಕಾಂಕ್ಷಿಗಳ ಬೆಂಬಲಿಗರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೈತ್ರಿ ಸರ್ಕಾರ ರಚನೆ ಆದಾಗಿನಿಂದ ತೀವ್ರ ಕುತೂಹಲ ಕೆರಳಿಸಿದ್ದ ಸಂಪುಟ ವಿಸ್ತರಣೆ ಇಂದು ಒಂದು ಹಂತಕ್ಕಷ್ಟೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಪಕ್ಷ ಇನ್ನೂ 7 ಖಾತೆಗಳನ್ನು ಖಾಲಿ ಇಟ್ಟುಕೊಂಡಿದ್ದರೆ. ಜೆಡಿಎಸ್ 4 ಸ್ಥಾನಗಳನ್ನು ಖಾಲಿ ಇಟ್ಟುಕೊಂಡಿದೆ.

English summary
Hirekerur Congress MLA B.C. Patil said despite cabinet birth offered by Bjp I was stood with Congress but it was unfortunate that party has induced me in the cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X