B Khata: ಬಿ - ಖಾತಾದಿಂದ ಎ - ಖಾತಾ ಪರಿವರ್ತನೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ಸರ್ಕಾರ!
B Khata: ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ ಆಸ್ತಿಗಳಿಗೆ ಇ - ಖಾತಾ ಪರಿಚಯಿಸಲಾಗಿತ್ತು. ಇದಾದ ನಂತರ ಕರ್ನಾಟಕದಾದ್ಯಂತ ಆಸ್ತಿಗಳಿಗೆ ಇ - ಖಾತಾ ಪರಿಚಯಿಸಲಾಗಿದೆ. ಅಲ್ಲದೇ ಮುಂದುವರಿದು ಆಸ್ತಿದಾರರು ಹಲವು ವರ್ಷಗಳಿಂದ ಕಾಯುತ್ತಿದ್ದ ಬಿ - ಖಾತಾದಿಂದ ಎ ಖಾತಾ ಪರಿವರ್ತನೆಗೂ ಅವಕಾಶ ನೀಡಲಾಗಿದೆ. ಇದೀಗ ಬಿ ಖಾತಾಗೆ ಸಂಬಂಧಿಸಿದಂತೆ ಮತ್ತೊಂದು ಬಿಗ್ ಗುಡ್ನ್ಯೂಸ್ ಕೊಟ್ಟಿದೆ.
ರಾಜ್ಯದ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದ, ಅನಧಿಕೃತ ಬಡಾವಣೆಗಳ ಸ್ವತ್ತುಗಳಿಗೆ ಬಿ ಖಾತಾದಿಂದ ಎ-ಖಾತಾ ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದಾರೆ. ವಿಧಾನಪರಿಷತ್ನಲ್ಲಿ ಕಾಂಗ್ರೆಸ್ನ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಮಹತ್ವದ ಅಪ್ಡೇಟ್ಸ್ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಬಿ ಖಾತಾದಿಂದ ಎ ಖಾತಾಗೆ ಆಸ್ತಿಗಳನ್ನು ಪರಿವರ್ತನೆ ಮಾಡಿಕೊಳ್ಳಬೇಕು ಎಂದು ಲಕ್ಷಾಂತರ ಜನ ಆಸ್ತಿದಾರರು ಕಾಯುತ್ತಿದ್ದಾರೆ. ಈ ರೀತಿ ಆಸ್ತಿ ಖಾತೆ ಸರಿಪಡಿಸಿಕೊಳ್ಳಬೇಕು ಎನ್ನುವ ನಿರೀಕ್ಷೆಯಲ್ಲಿರುವ ಆಸ್ತಿದಾರರಿಗೆ ಬಂಪರ್ ಗುಡ್ನ್ಯೂಸ್ ಕೊಡಲಾಗಿದೆ. ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದ ವಿನ್ಯಾಸಗಳು, ವಿವಿಧ ಯೋಜನೆಗಳಲ್ಲಿ ಮಂಜೂರಾದ ನಿವೇಶನಗಳಿಗೆ ಈಗಾಗಲೇ ಬಿ-ಖಾತಾ ನೀಡಲಾಗುತ್ತಿದ್ದು, ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗುತ್ತಿದೆ. ಎ-ಖಾತಾ ನೀಡಲು ಬೇಡಿಕೆ ಇದೆ ಎಂದು ಸರ್ಕಾರ ತಿಳಿಸಿದೆ.
ಇನ್ನು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದ ವಿನ್ಯಾಸಗಳ, ಗ್ರಾಮೀಣ, ವಿವಿಧ ಯೋಜನೆಯಡಿ ಮಂಜೂರಾದ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡಲಾಗುತ್ತಿದೆ. ಇದರಿಂದಾಗಿ ಭೂ-ಪರಿವರ್ತನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ. ಅಧಿಕೃತ ನಿವೇಶನ ಕಟ್ಟಡಗಳಿಗೆ ನಮೂನೆ -3 ಮತ್ತು ಅನುಮೋದನೆ ಪಡೆಯದ ಸ್ವತ್ತುಗಳಿಗೆ ನಮೂನೆ 3-ಎ ಕೊಡಲಾಗುತ್ತಿದೆ ಎಂದೂ ಹೇಳಿದ್ದಾರೆ.
ಅಲ್ಲದೇ ಕಟ್ಟಡ ಪರವಾನಿಗೆ ಕೋರಿ ವಾಸ್ತುಶಿಲ್ಪ ಶಾಸ್ತ್ರಜ್ಞರ ಮೂಲಕ ಅಗತ್ಯ ದಾಖಲೆಗಳ ಜತೆ ಅರ್ಜಿ ಸಲ್ಲಿಸಿದರೆ, 15 ದಿನಗಳ ಒಳಗಾಗಿ ಕಟ್ಟಡ ಲೈಸೆನ್ಸ್ ನೀಡಲಾಗುತ್ತಿದೆ. ಖಾತಾ ಪಡೆಯಲು ಅನುಸರಿಸಬೇಕಾದ ಕ್ರಮಗಳನ್ನು ತಿಳಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಲಕ್ಷಾಂತರ ಬಿ ಖಾತಾ ಆಸ್ತಿದಾರರಿಗೆ ಅನುಕೂಲ: ಇನ್ನು ರಾಜ್ಯ ಸರ್ಕಾರವು ಬಿ ಖಾತಾ ವಿಚಾರದಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವುದರಿಂದ ರಾಜ್ಯದಲ್ಲಿ ಬಿ ಖಾತಾ ಹೊಂದಿರುವ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ರಾಜ್ಯದಲ್ಲಿ ಅಂದಾಜು 30 ರಿಂದ 40 ಲಕ್ಷಕ್ಕೂ ಹೆಚ್ಚು ಬಿ ಖಾತಾ ಆಸ್ತಿಗಳಿದ್ದು. ಈ ಆಸ್ತಿದಾರರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications