B Nagendra Profile: ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಗೆದ್ದ ನಾಗೇಂದ್ರ ಅವರಿಗೆ ಸಿಕ್ಕಿತು ಸಚಿವ ಸ್ಥಾನ
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ತೊಡೆತಟ್ಟಿ ಗೆಲುವು ಸಾಧಿಸಿದ್ದ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಸಿದ್ದರಾಮಯ್ಯ ಅವರ ಸಂಪುಟ ಸೇರುವಲ್ಲಿ ಅವರು ಯಶಸ್ವಿಯಾಗಿದ್ದು, ಮೇ 27ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
2008, 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಅವರು 2018ರ ಚುನಾವಣೆಗೆ ಮುನ್ನ ಕಾಂಗ್ರೆಸ್ ಸೇರಿದ್ದರು. 2018, ಮತ್ತು 2023ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವ ಅವರು ಸಚಿವ ಸಂಪುಟ ಸೇರಿಕೊಂಡಿದ್ದಾರೆ.

2008 ಮತ್ತು 2013 ರಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು, 2018ರಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. 2018ರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅವರು, ಬಿಜೆಪಿ ಅಭ್ಯರ್ಥಿ ಸಣ್ಣ ಫಕೀರಪ್ಪ ವಿರುದ್ಧ 2679 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಶ್ರೀರಾಮುಲು ಸ್ಪರ್ಧೆ ಮಾಡಿದ್ದರು. ಆದರೂ ನಾಗೇಂದ್ರ ಅವರು ಬರೋಬ್ಬರಿ 103,836 ಮತಗಳನ್ನು ಪಡೆಯುವ ಮೂಲಕ ಶ್ರೀರಾಮುಲು ವಿರುದ್ಧ 29,300 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ನಾಗೇಂದ್ರ ಅವರ ವಿದ್ಯಾರ್ಹತೆ, ಆಸ್ತಿ
ಬಿ ನಾಗೇಂದ್ರ ಸೆಪ್ಟೆಂಬರ್ 15, 1971ರಲ್ಲಿ ಜನಿಸಿದರು. ಅವರ ತಂದೆ - ಬಿ ಆಂಜನೇಯಲು, ತಾಯಿ - ಬಿ ಲಕ್ಷ್ಮೀದೇವಿ, ಬಿ ಮಂಜುಶ್ರೀ ಎನ್ನುವವರನ್ನು ಮದುವೆಯಾಗಿದ್ದು, ವಿಷ್ಣು ತಾರಕ್, ರಾಣಕ್ ರತ್ನಾ ಇಬ್ಬರು ಮಕ್ಕಳಿದ್ದಾರೆ. ಇವರ ಸಹೋದರ ಸಂಬಂಧ ಗುಮ್ಮನೂರು ಜಯರಾಂ ಸಧ್ಯ ಆಂಧ್ರಪ್ರದೇಶದ ಕಾರ್ಮಿಕ ಸಚಿವರಾಗಿದ್ದಾರೆ.
ಗುಲ್ಬರ್ಗ ವಿಶ್ವವಿದ್ಯಾಲಯದ ಬಳ್ಳಾರಿಯ ವೀರಶೈವ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದುಕೊಂಡಿದ್ದಾರೆ. ಇನ್ನು ನಾಗೇಂದ್ರ ಅವರು ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ತಾವು 17.6 ಕೋಟಿ ರುಪಾಯಿ ಆಸ್ತಿ ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ. 12.5 ಕೋಟಿ ಚರ ಆಸ್ತಿ ಮತ್ತು 5.1 ಕೋಟಿ ಸ್ಥಿರಾಸ್ತಿ ಸೇರಿದೆ. ಅವರ ಒಟ್ಟು ಘೋಷಿತ ಆದಾಯ 6.1 ಲಕ್ಷ ರೂ. ಅದರಲ್ಲಿ 6.1 ಲಕ್ಷ ಸ್ವಯಂ ಆದಾಯ. ಬಿ ನಾಗೇಂದ್ರ ಅವರ ಒಟ್ಟು ಹೊಣೆಗಾರಿಕೆ 3.8 ಕೋಟಿ ರು ಅಫಿಡಿವಿಟ್‌ನಲ್ಲಿ ತಿಳಿಸಿದ್ದಾರೆ. ಇನ್ನು ನಾಗೇಂದ್ರ ಅವರ ಮೇಲೆ 42 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications