ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

100% ಬಹುಮತ ಸಾಬೀತು ಮಾಡಿಯೇ ತೀರುತ್ತೇನೆ: ಯಡಿಯೂರಪ್ಪ ಶಪಥ

By Manjunatha
|
Google Oneindia Kannada News

ಬೆಂಗಳೂರು, ಮೇ 17: ಬಹುಮತ ಸಾಬೀತು ಮಾಡಲು 15 ದಿನಗಳ ಕಾಲಾವಕಾಶ ನೀಡಿದ್ದಾರೆ ಆದರೆ ಅಷ್ಟು ದಿನ ಅವಶ್ಯಕತೆ ಇಲ್ಲ ಇನ್ನೂ ಬೇಗ ಬಹುಮತವನ್ನು ಸಾಬೀತು ಮಾಡುತ್ತೇವೆ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸದಿಂದ ನುಡಿದರು.

ಸಸ್ಪೆನ್ಸ್ ಥ್ರಿಲ್ಲರ್ : ಬಹುಮತ ಸಾಬೀತುಪಡಿಸಲು ಬಿಜೆಪಿ ಮಾಸ್ಟರ್ ಪ್ಲಾನ್ಸಸ್ಪೆನ್ಸ್ ಥ್ರಿಲ್ಲರ್ : ಬಹುಮತ ಸಾಬೀತುಪಡಿಸಲು ಬಿಜೆಪಿ ಮಾಸ್ಟರ್ ಪ್ಲಾನ್

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಮೇಲೆ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, 100% ಶತಾಯಗತಾಯ ಬಹುಮತ ಸಾಬೀತು ಮಾಡಿಯೇ ತೀರುತ್ತೇನೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪ ಪ್ರಮಾಣ ವಚನ : ಲಾಭವೂ ಇದೆ, ದೋಷವೂ ಇದೆಯಡಿಯೂರಪ್ಪ ಪ್ರಮಾಣ ವಚನ : ಲಾಭವೂ ಇದೆ, ದೋಷವೂ ಇದೆ

ಕಾಂಗ್ರೆಸ್‌-ಜೆಡಿಎಸ್‌ ಶಾಸಕರ ರೆಸಾರ್ಟ್‌ ರಾಜಕಾರಣದ ಬಗ್ಗೆ ಮಾತನಾಡಿದ ಅವರು, ಎರಡೂ ಪಕ್ಷದ ಶಾಸಕರನ್ನು ಕೂಡಿ ಹಾಕಿ ಅವರಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ, ಅವರ ಮೊಬೈಲ್ ಕಿತ್ತುಕೊಳ್ಳಲಾಗಿದೆ, ಅವರ ಕುಟುಂಬದವರೊಂದಿಗೂ ಮಾತನಾಡಲು ಅವಕಾಶ ನೀಡಲಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

B S Yeddyurappa says he will defnetly prove majority

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಗೂಂಡಾ ರಾಜಕೀಯ ನಡೆಸುತ್ತಿದೆ, ಇದನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ, ನಾನೂ ಗಮನಿಸುತ್ತಿದ್ದೇನೆ ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಬಿಎಸ್‌ವೈ ಮಾರ್ಮಿಕವಾಗಿ ನುಡಿದರು.

24ನೇ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿರುವ ಸವಾಲುಗಳು24ನೇ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿರುವ ಸವಾಲುಗಳು

ಬಿಜೆಪಿಯನ್ನು ಗೆಲ್ಲಿಸಿದಕ್ಕೆ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸಿದ ಯಡಿಯೂರಪ್ಪ ಅವರು, ಮೋದಿ, ಅಮಿತ್ ಶಾ ಸೇರಿದಂತೆ ರಾಜ್ಯದ ಬಿಜೆಪಿ ಪ್ರಮುಖ ನಾಯಕರು ಮತ್ತು ಉಸ್ತುವಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು. ಜೊತೆಗೆ ಈ ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿಗಳಿಗೆ ಧೈರ್ಯದಿಂದಿರುವಂತೆ ಸೂಚಿಸಿದರು.

ಕರ್ನಾಟಕದ ಸಿಎಂ #24: ಜನನಾಯಕ ಯಡಿಯೂರಪ್ಪ ವ್ಯಕ್ತಿ ಚಿತ್ರಕರ್ನಾಟಕದ ಸಿಎಂ #24: ಜನನಾಯಕ ಯಡಿಯೂರಪ್ಪ ವ್ಯಕ್ತಿ ಚಿತ್ರ

ರೈತರ ಸಾಲ ಮನ್ನಾದ ಬಗ್ಗೆ ಮಾತನಾಡಿದ ಯಡಿಯೂರಪ್ಪ ಅವರು, ಅಂಕಿ ಅಂಶಗಳನ್ನು ಕ್ರೂಡೀಕರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ, ಅವೆಲ್ಲಾ ಅಂತಿಮವಾದ ಕೂಡಲೇ ಇನ್ನೆರಡು ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗುವುದು ಎಂದರು.

ಬಿಜೆಪಿ ಶಾಸಕರಿಗೆ ತಮ್ಮ ಕ್ಷೇತ್ರಗಳಿಗೆ ವಾಪಾಸ್ಸು ತೆರಳಲು ಹೇಳಿದ ಯಡಿಯೂರಪ್ಪ ಅವರು 'ಎಲ್ಲ ಶಾಸಕರು ಪಕ್ಷದ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ ತುರ್ತು ಅಧಿವೇಶನ ಕರೆಯಬಹುದು, ಹಾಗೆ ಕರೆದ ಕೂಡಲೆ ತಡ ಮಾಡದೆ ಹೊರಟು ಬನ್ನಿ' ಎಂದು ಸೂಚನೆ ನೀಡಿದರು.

English summary
New CM BS Yeddyurappa says 'He will 100% prove majority as soon as possible'. He said Congress and JDS trying to form government from back door.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X