Get Updates
Get notified of breaking news, exclusive insights, and must-see stories!

ಶಾಸಕ ಮಾಡಾಳ್ ವಿರುದ್ಧ ಕ್ರಮ ಕುರಿತು ಕೇಂದ್ರಕ್ಕೆ ಪತ್ರ: ಸಿಎಂ ನೀಡದ ಭರವಸೆಯನ್ನು ಬಿಎಸ್‌ವೈ ನೀಡಿದರು- ಏನದು?

ಸರ್ಕಾರಿ ಗುತ್ತಿಗೆಗಾಗಿ ಲಂಚ ಪಡೆದಿದ್ದ ಪುತ್ರ ಪ್ರಶಾಂತ್‌ನನ್ನು ಲೋಕಾಯುಕ್ತ ಪೊಲೀಸರು ಹಿಡಿದ ನಂತರ ತಲೆಮರೆಸಿಕೊಂಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕೇಂದ್ರ ಸಂಸದೀಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರ

ಬೆಂಗಳೂರು, ಮಾರ್ಚ್‌ 06: ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್‌ ಅವರು ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಅಧಿಕಾರಿಗಳು ಕೈಗೆ ಸಿಕ್ಕುಬಿದ್ದಿದ್ದಾರೆ. ನಂತರ ಅವರ ನಿವಾಸವನ್ನು ಶೋಧಿಸಿರುವ ಅಧಿಕಾರಿಗಳು ಆರು ಕೋಟಿಗೂ ಅಧಿಕ ಮೌಲ್ಯದ ನಗದನ್ನು ವಶಪಡಿಸಿಕೊಂಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಕಲ್ಲೋಲವನ್ನು ಸೃಷ್ಟಿಸಿದೆ. ಸಿಎಂ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯಿಸಿದೆ. ಇದು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರು ತಂದಿದೆ.

ಈ ಕುರಿತು ಜೇವರ್ಗಿಯಲ್ಲಿ ಸೋಮವಾರ ಮಾತನಾಡಿರುವ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು, 'ಸರ್ಕಾರಿ ಗುತ್ತಿಗೆಗಾಗಿ ಲಂಚ ಪಡೆದಿದ್ದ ಪುತ್ರ ಪ್ರಶಾಂತ್‌ನನ್ನು ಲೋಕಾಯುಕ್ತ ಪೊಲೀಸರು ಹಿಡಿದ ನಂತರ ತಲೆಮರೆಸಿಕೊಂಡಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕೇಂದ್ರ ಸಂಸದೀಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ' ಎಂದು ಹೇಳಿದ್ದಾರೆ.

B S Yediyurappa promises action against MLA Madal Virupakshappa

ಜೇವರ್ಗಿಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವ ಮುನ್ನ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಮಾಡಾಳ್‌ ಅವರು ಅಕ್ಷಮ್ಯ ಅಕ್ರಮ ಎಸಗಿದ್ದಾರೆ. ಲಂಚ ಪ್ರಕರಣದಲ್ಲಿ ಅವರನ್ನು ಬಂಧಿಸಬೇಕು. ಶಾಸಕ ಮಾಡಾಳ್‌ ವಿರುಪಾಕ್ಷಪ್ಪನ ವಿರುದ್ಧ ಬಿಜೆಪಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

40 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾಡಾಳ್‌ ಅವರ ಪುತ್ರನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಸಾಬೂನು ಮತ್ತು ಡಿಟರ್ಜೆಂಟ್ ಉತ್ಪಾದನೆಗೆ ಕೆಎಸ್‌ಡಿಎಲ್‌ಗೆ ಅಗತ್ಯವಿರುವ ರಾಸಾಯನಿಕಗಳನ್ನು ಪೂರೈಸಿದ ಗುತ್ತಿಗೆದಾರರಿಂದ ಅವರು ಲಂಚ ಕೇಳಿದ್ದರು. ಲೋಕಾಯುಕ್ತ ಪೊಲೀಸರು ಶಾಸಕರ ಪುತ್ರನ ನಿವಾಸದಿಂದ 6 ಕೋಟಿ ರೂ ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 'ಲಂಚದ ಆರೋಪ ಎದುರಿಸುತ್ತಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ 'ಎಂದು ಹೇಳಿದ್ದಾರೆ. ಪ್ರಕರಣದ ತನಿಖೆಗೆ ಲೋಕಾಯುಕ್ತರಿಗೆ ಮುಕ್ತ ಹಸ್ತ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ

B S Yediyurappa promises action against MLA Madal Virupakshappa

ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲು ಲೋಕಾಯುಕ್ತರಿಗೆ ಸಂಪೂರ್ಣ ಅಧಿಕಾರ ನೀಡುವುದು ನಮ್ಮ ನೈತಿಕತೆ. ಮಾಡಿದ ತಪ್ಪುಗಳನ್ನು ಮುಚ್ಚಿ ಹಾಕುವುದು ಕಾಂಗ್ರೆಸ್ ನೈತಿಕತೆ ಎಂದು ಬೊಮ್ಮಾಯಿ ಟೀಕಿಸಿದರು.

ವಿರೂಪಾಕ್ಷಪ್ಪ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜೀನಾಮೆಗೆ ಒತ್ತಾಯಿಸಿದ್ದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 'ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಸಿ ಪುಟ್ಟರಂಗಶೆಟ್ಟಿ ಅವರು ವಿಧಾನಸೌಧದಲ್ಲಿ 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದರು. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಾ? ಆಗ ಲೋಕಾಯುಕ್ತ ಇದ್ದಿದ್ದರೆ ಸಚಿವರ ಬಂಧನವಾಗುತ್ತಿತ್ತು. ಆದರೆ, ಇಂತಹ ಪ್ರಕರಣಗಳನ್ನು ಮುಚ್ಚಿ ಹಾಕಲು ಭ್ರಷ್ಟಾಚಾರ ನಿಗ್ರಹ ಸಂಸ್ಥೆಯನ್ನು ಅವರು ದುರ್ಬಲಗೊಳಿಸಿದ್ದಾರೆ' ಎಂದು ಸಿಎಂ ಆರೋಪಿಸಿದ್ದಾರೆ.

ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಮತ್ತು ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದು ಜನರಿಗೆ ಚೆನ್ನಾಗಿ ತಿಳಿದಿದೆ. ಪಕ್ಷವು ಮತ್ತೆ ಅಧಿಕಾರಕ್ಕೆ ಬರಲು ಮತ್ತು ತನ್ನ ತಪ್ಪುಗಳನ್ನು ಮುಚ್ಚಿಹಾಕಲು ಇದನ್ನು ಮಾಡುತ್ತಿದೆ. ಕಾಂಗ್ರೆಸ್ ನಾಯಕರ ಲೋಪ ಮತ್ತು ಕಮಿಷನ್‌ಗಳನ್ನು ಜನ ಮರೆತಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

'ಅವರು (ಕಾಂಗ್ರೆಸ್ ನಾಯಕರು) ಕೊಲೆ, ಸುಲಿಗೆ, ಭ್ರಷ್ಟಾಚಾರ ಮತ್ತು ಲೂಟಿಯಲ್ಲಿ ತೊಡಗಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರದ 59 ಪ್ರಕರಣಗಳನ್ನು ಲೋಕಾಯುಕ್ತಕ್ಕೆ ನೀಡಲಾಗಿದ್ದು ಸತ್ಯ ಹೊರಬರಲಿದೆ,' ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+