ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ- ಬಿ.ಎಲ್.ಸಂತೋಷ್ ವಿಶ್ ಹೇಗಿತ್ತು ಗೊತ್ತಾ?
ಬೆಂಗಳೂರು, ನವೆಂಬರ್, 10: ಇಷ್ಟು ದಿನ ರಾಜ್ಯ ಬಿಜೆಪಿಯಲ್ಲಿ ರಾಜ್ಯಧ್ಯಕ್ಷರ ಪಟ್ಟಕ್ಕಾಗಿ ಸಾಕಷ್ಟು ಫೈಟ್‌ಗಳು ನಡೆದಿದ್ದವು. ಇದೀಗ ಕೊನೆಗೂ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಈ ಬೆಳವಣಿಗೆ ಆದ ತಕ್ಷಣವೇ ವಿಜಯೇಂದ್ರ ಅವರಿಗೆ ಅಭಿನಂದನೆಗಳ ಮಾಹಾಪೂರವನ್ನೇ ಹರಿಸಿದ್ದಾರೆ. ಹಾಗೆಯೇ ಬಿ.ಎಲ್.ಸಂತೋಷ್ ಅವರು ಏನು ಹೇಳಿದ್ದಾರೆನ್ನುವ ಕುತೂಹಲ ಎಲ್ಲರಲ್ಲೂ ಇದ್ದೇ ಇರುತ್ತದೆ. ಹಾಗಾದರೆ ಇಲ್ಲಿದೆ ನೋಡಿ ವಿವರ.

ಪಕ್ಷವನ್ನು ವಿಜಯದ ಹಾದಿಯಲ್ಲಿ ನಡೆಸುವಲ್ಲಿ ಯಶಸ್ಸು ನಿಮ್ಮದಾಗಲಿ ಎಂದು ಟ್ವೀಟ್ ಮೂಲಕ ಬಿ.ಎಲ್. ಸಂತೋಷ್ ಅವರು ಬಿ.ವೈ.ವಿಜಯೇಂದ್ರ ಅವರಿಗೆ ಅಭಿನಂದಿಸಿದ್ದಾರೆ.
ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬಿ.ವೈ.ವಿಜಯೇಂದ್ರ ಅವರು ಶಿಕಾರಿಪುರ ಕ್ಷೇತ್ರದ ಶಾಸಕರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರರಾಗಿದ್ದಾರೆ.
ಅಭಿನಂದನೆಗಳು …..
— B L Santhosh (@blsanthosh) November 10, 2023
ಪಕ್ಷವನ್ನು ವಿಜಯದ ಹಾದಿಯಲ್ಲಿ ನಡೆಸುವಲ್ಲಿ ಯಶಸ್ಸು ನಿಮ್ಮದಾಗಲಿ … pic.twitter.com/Df9N27jL4i
"ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಶ್ರೀ ಬಿ.ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ," ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.
ಹೆಚ್.ಡಿ.ಕೆಯಿಂದ ಶುಭಹಾರೈಕೆ
"ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು" ಎಂದು ಮಾಜಿ ಸಿಎಂ ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.
"ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ವಿಜಯೇಂದ್ರ ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ," ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಮಹೇಶ್ ಟೆಂಗಿನಕಾಯಿ ಹೇಳಿದ್ದೇನು
ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದೆ. ಹೈಕಮಾಂಡ್ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹುಬ್ಬಳ್ಳಿಯಲ್ಲಿ ಹೇಳಿದರು.
ಯುವ ನಾಯಕತ್ವಕ್ಕೆ ಆದ್ಯತೆ ಕೊಟ್ಟಿದ್ದಾರೆ. ರಾಷ್ಟ್ರೀಯ ನಾಯಕರು ಒಳ್ಳೆಯ ನಿರ್ಣಯ ಕೈಗೊಂಡಿದ್ದಾರೆ. ಬಿ.ವೈ.ವಿಜಯೇಂದ್ರ ನಾಯಕತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಎದುರಿಸಲಿದ್ದೇವೆ. ನಂತರ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಎದುರಿಸುತ್ತೇವೆ. ಒಂದು ತಂಡವಾಗಿ ಪಕ್ಷವನ್ನು ಸದೃಢ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದು ಹೇಳಿದ್ದಾರೆ.












Click it and Unblock the Notifications