ಗಣೇಶೋತ್ಸವದಲ್ಲಿ ವಿದ್ಯಾರ್ಥಿಗಳು ಭಾಗಿ ವಿಚಾರ: ತುಮಕೂರು ವಿವಿಗೆ ವಿಜಯೇಂದ್ರ ವಿಶೇಷ ಆಗ್ರಹ
ಬೆಂಗಳೂರು, ಸೆಪ್ಟೆಂಬರ್ 21: ಇತ್ತೀಚಿಗಷ್ಟೇ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಭಾರೀ ಗಲಭೆ ಉಂಟಾಗಿತ್ತು. ಈ ಘಟನೆ ಮಾಸುವ ಮುನ್ನವೇ ದಾವಣಗೆರೆ ವೆಂಕಾ ಭೋವಿ ಕಾಲೋನಿಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದೆ. ಜೊತೆಗೆ ಅಲ್ಲಲ್ಲಿ ಚಾಕು ಇರಿತದಂತಹ ಘಟನೆಗಳು ನಡೆದಿದೆ. ಈ ಹಿನ್ನೆಲೆಯಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರು ತುಮಕೂರಿನ ಗಣೇಶೋತ್ಸವದ ಮೆರವಣಿಗೆಗಳಲ್ಲಿ ವಿದ್ಯಾರ್ಥಿಗಳು ಒತ್ತಾಯ ಪೂರಕವಾಗಿ ಭಾಗವಹಿಸದಂತೆ ನಿರ್ಬಂಧಿಸಿದ್ದಾರೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದೆಂದೂ ಘಟಿಸದ ರೀತಿಯಲ್ಲಿ ರಾಜ್ಯದಲ್ಲಿ ಗಣೇಶ ಉತ್ಸವದ ಮೆರವಣಿಗೆಗಳ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ, ಹಿಂದೂ ವಿರೋಧಿ ಶಕ್ತಿಗಳು ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗ ತಂದು ಅಶಾಂತಿಯ ವಾತಾವರಣ ಸೃಷ್ಟಿಸಲು ವ್ಯವಸ್ಥಿತವಾಗಿ ತೊಡಗಿವೆ.

ಸರಣಿ ಘಟನೆಗಳನ್ನು ಗಮನಿಸಿದರೆ ಹಿಂದೂ ಧಾರ್ಮಿಕ ಆಚಾರ-ವಿಚಾರಗಳನ್ನು ದಮನ ಮಾಡಲು ಒಂದು ವ್ಯವಸ್ಥಿತ ಷಡ್ಯಂತ್ರ ಈ ರಾಜ್ಯದಲ್ಲಿ ನಡೆಯುತ್ತಿರುವಂತೆ ಕಾಣುತ್ತಿದೆ. ಕಣ್ಣು, ಕಿವಿ ಇವೆರಡನ್ನು ಮುಚ್ಚಿಕೊಂಡಿರುವ ಕಾಂಗ್ರೆಸ್ ಸರ್ಕಾರದ ಕಾನೂನು ಸುವ್ಯವಸ್ಥೆ ತಿಳಿಗೇಡಿಗಳ ವ್ಯೂಹವನ್ನು ಭೇದಿಸಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸುವ ನಿಟ್ಟಿನಲ್ಲಿ ಗಮನ ನೀಡುವ ಬದಲು ಧಾರ್ಮಿಕ ಶ್ರದ್ಧೆಯ ಗಣೇಶೋತ್ಸವದ ಮೆರವಣಿಗೆಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ಕ್ರಮವಾಗಿದೆ.
ಎಷ್ಟರಮಟ್ಟಿಗೆ ಪೊಲೀಸ್ ವ್ಯವಸ್ಥೆ ಪಕ್ಷಪಾತಿ ಹಾಗೂ ನಿಷ್ಕ್ರಿಯವಾಗಿದೆ ಎಂದರೆ, ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರು ತುಮಕೂರಿನ ಗಣೇಶೋತ್ಸವದ ಮೆರವಣಿಗೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸದಂತೆ ನಿರ್ಬಂಧಿಸುವ ಹೇಡಿತನವನ್ನು ಪ್ರದರ್ಶಿಸಿದ್ದಾರೆ.

ವಿದ್ಯೆಗೆ ಅಧಿಪತಿ ಗಣಪತಿ, ವಿದ್ಯೆ ದಯಪಾಲಿಸುವ ಗಣೇಶನನ್ನು ಶಾಲಾ-ಕಾಲೇಜುಗಳಲ್ಲಿ ಪೂಜಿಸುವುದು, ಮೆರವಣಿಗೆ ನಡೆಸುವುದು ಶತಮಾನಗಳಿಂದ ನಡೆದು ಬಂದಿರುವ ಪ್ರತೀತಿ. ವಿದ್ಯಾರ್ಥಿಗಳ ಧಾರ್ಮಿಕ ನಂಬಿಕೆ ಶೈಕ್ಷಣಿಕ ಶ್ರದ್ಧೆಯನ್ನು ವಿಚಲಿತಗೊಳಿಸಲು ಯತ್ನಿಸುವ ಕ್ರಮ ಇದಾಗಿದೆ.
ಒಂದು ಕಡೆ ಧಾರ್ಮಿಕ ಆಚರಣೆಯಲ್ಲಿ ತೊಡಗುವವರಿಗೆ ರಕ್ಷಣೆ ನೀಡಲಾಗದೆ, ಮತ್ತೊಂದು ಕಡೆ ಹಿಂದೂ ವಿರೋಧಿ ದುಷ್ಕರ್ಮಿಗಳ ಷಡ್ಯಂತ್ರವನ್ನು ಪರೋಕ್ಷವಾಗಿ ಬೆಂಬಲಿಸುವಂತೆ ಪೊಲೀಸ್ ವ್ಯವಸ್ಥೆ ನಡೆದುಕೊಳ್ಳುತ್ತಿದೆ. ಈ ನಡವಳಿಕೆಯನ್ನು ನಾವು ಸಹಿಸಿಕೊಳ್ಳುತ್ತಿದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯವಲ್ಲ ಎಂಬ ಅಂಶ ಸರ್ಕಾರದ ವ್ಯವಸ್ಥೆಗೆ ತಿಳಿದಿರಲಿ. ತಾಳ್ಮೆ, ಸಂಯಮ ನಮ್ಮ ಸಂಸ್ಕಾರ ಹೌದು, ಅಂತೆಯೇ ದಬ್ಬಾಳಿಕೆಯನ್ನು ಹೆಮ್ಮೆಟ್ಟಿಸುವುದು ನಮ್ಮ ಸ್ವಾಭಿಮಾನದ ಸಂಕೇತವೂ ಎಂಬುದು ಈ ಸರ್ಕಾರಕ್ಕೆ ತಿಳಿದಿರಲಿ.
ಮುಗ್ಧ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಪರೋಕ್ಷವಾಗಿ ದ್ವೇಷದ ಭಾವನೆ ಬಿತ್ತುವ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರು ಹೊರಡಿಸಿರುವ ಸುತ್ತೋಲೆ ಶಾಂತಿ ಮೂಡಿಸುವ ಬದಲಾಗಿ ವಿದ್ಯಾರ್ಥಿಗಳ ಸಂಯಮಕ್ಕೆ ಭಂಗ ತರುತ್ತದೆ, ಅಸಹನೆಯನ್ನು ಹುಟ್ಟು ಹಾಕುತ್ತದೆ ಎಂಬ ವಿವೇಚನೆ ವಿ.ವಿ. ಆಡಳಿತ ಬಳಸದಿರುವುದು ವಿಪರ್ಯಾಸವೆನಿಸಿದೆ. ಈ ಕೂಡಲೇ ವಿಶ್ವವಿದ್ಯಾನಿಲಯವು ಸುತ್ತೋಲೆಯನ್ನು ವಾಪಾಸ್ ತೆಗೆದುಕೊಳ್ಳಲಿ. ಸ್ವ ಇಚ್ಛೆಯಿಂದ ಹಾಗೂ ಧಾರ್ಮಿಕ ಶ್ರದ್ಧೆಯಿಂದ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸುವುದನ್ನು ತಡೆಯುವ ಪ್ರಯತ್ನವನ್ನು ಈ ಕೂಡಲೇ ನಿಲ್ಲಿಸಲಿ ಎಂದು ಆಗ್ರಹಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications