ರಾಜ್ಯದಲ್ಲಿ ಬೈ ಎಲೆಕ್ಷನ್ ದಿನಾಂಕ ಘೋಷಣೆ: ಅಭ್ಯರ್ಥಿ ಕುರಿತು ವಿಜಯೇಂದ್ರ ಹೇಳಿದ್ದೇನು?
ದಕ್ಷಿಣ ಕನ್ನಡ, ಅಕ್ಟೋಬರ್ 15: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಅಭ್ಯರ್ಥಿ ಆಯ್ಕೆ ಕುರಿತು ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದರು.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರಕಾರ ಅತ್ಯಂತ ಭ್ರಷ್ಟತೆಯಿಂದ ಕೂಡಿದ್ದು, ಇದರ ಹಗರಣಗಳು ಒಂದೊಂದಾಗಿ ಹೊರಕ್ಕೆ ಬರುತ್ತಿವೆ.
ಕಾಂಗ್ರೆಸ್ ಪಕ್ಷದವರಿಗೆ ಮುಖ್ಯಮಂತ್ರಿಗಳ ಬಗ್ಗೆ ವಿಶ್ವಾಸ ಇಲ್ಲವಾಗಿದೆ. ತಮ್ಮ ಸರಕಾರದ ಬಗ್ಗೆಯೂ ಕಾಂಗ್ರೆಸ್ ಪಕ್ಷದವರಿಗೆ ವಿಶ್ವಾಸ ಇಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರ ಸರಕಾರ ಇದ್ದಾಗ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವಧನ ಹೆಚ್ಚಿಸಿತ್ತು ಎಂದು ನೆನಪಿಸಿದರು. ಕಾಂಗ್ರೆಸ್ ಸರಕಾರ ಬಂದ ಬಳಿಕ ಗ್ರಾಮ ಪಂಚಾಯಿತಿಗಳು, ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವವೇ ಇಲ್ಲವಾಗಿದೆ. ಮುಡಾ ಹಗರಣದ ಸಂಬಂಧ ಬಿಜೆಪಿ- ಜೆಡಿಎಸ್ ಪಾದಯಾತ್ರೆ, ನಿರಂತರ ಹೋರಾಟದ ಬಳಿಕ ಸಿದ್ದರಾಮಯ್ಯನವರ ಕುಟುಂಬಕ್ಕೆ ಕೊಟ್ಟಿದ್ದ 14 ನಿವೇಶನಗಳನ್ನು ವಾಪಸ್ ಕೊಟ್ಟಿದ್ದಾರೆ. ಖರ್ಗೆಯವರ ಕುಟುಂಬವೂ ತಮಗೆ ಮಂಜೂರಾದ ಭೂಮಿಯನ್ನು ವಾಪಸ್ ಕೊಟ್ಟಿದೆ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆಗಿಯೇ ಇಲ್ಲ ಎನ್ನುತ್ತಿದ್ದ ಮುಖ್ಯಮಂತ್ರಿಗಳು 187 ಕೋಟಿಯ ಹಗರಣ ನಡೆದಿಲ್ಲ; 87 ಕೋಟಿಯ ದುರುಪಯೋಗ ಆಗಿದೆ ಎಂದು ಸದನದಲ್ಲೇ ಒಪ್ಪಿಕೊಂಡಿದ್ದನ್ನು ಪ್ರಸ್ತಾಪಿಸಿದರು. ತಮಗೆ ಮತ್ತು ತಮ್ಮ ತಂದೆಯವರಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜೊತೆಗಿನ ಆತ್ಮೀಯ ಸಂಬಂಧವನ್ನೂ ಅವರು ತಿಳಿಸಿದರು. ಹುಬ್ಬಳ್ಳಿಯ ದೇಶದ್ರೋಹಿ ಕೃತ್ಯದ ಆರೋಪಿಗಳ ಕೇಸು ಹಿಂಪಡೆದ ರಾಜ್ಯದ ಕಾಂಗ್ರೆಸ್ ಸರಕಾರದ ಕ್ರಮವನ್ನು ಅವರು ತೀವ್ರವಾಗಿ ಖಂಡಿಸಿದರು.
ಯಡಿಯೂರಪ್ಪ ಅವರ ನೇತೃತ್ವದ ಹಿಂದಿನ ಬಿಜೆಪಿ ಸರಕಾರವು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 2 ಸಾವಿರ ಕೋಟಿ, 3 ಸಾವಿರ ಕೋಟಿ ಅನುದಾನವನ್ನು ನೀಡಿತ್ತು. ಪಾಪ, ಸಿದ್ದರಾಮಯ್ಯನವರಿಗೆ ದಕ್ಷಿಣ ಕನ್ನಡ ಅಂದರೆ ಅಲರ್ಜಿ. ದಕ್ಷಿಣ ಕನ್ನಡದ ಜನರು ಎಂದರೆ ಅವರಿಗೆ ಆಸಕ್ತಿಯಿಲ್ಲ. ಯಾಕೆಂದರೆ, ದಕ್ಷಿಣ ಕನ್ನಡದ ಪ್ರತಿಯೊಬ್ಬ ಜನರ ಕಣಕಣದಲ್ಲೂ ಹಿಂದುತ್ವ ಇದೆ. ಅದಕ್ಕೋಸ್ಕರ ಸಿದ್ದರಾಮಯ್ಯನವರ ಸರಕಾರ ನಿಮ್ಮನ್ನು ವಿರೋಧಿಸುತ್ತಿದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡದ ಅಭಿವೃದ್ಧಿಗೆ ಒಂದು ರೂಪಾಯಿ ಅನುದಾನ ನೀಡುವ ಯೋಗ್ಯತೆ ಕಾಂಗ್ರೆಸ್ ಸರಕಾರಕ್ಕೆ ಇಲ್ಲ ಎಂದು ಆಕ್ಷೇಪಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಬಿಟ್ಟರೆ ಬೇರೆ ಸಚಿವರು ಈ ಜಿಲ್ಲೆಗೆ ಬರುತ್ತಿಲ್ಲ ಎಂದು ಆರೋಪಿಸಿದರು. ಕಾಂಗ್ರೆಸ್‍ಗೆ ಇಲ್ಲಿನ ಜನರು ಮತ ಕೊಡುವುದಿಲ್ಲ ಎಂಬ ಕಾರಣಕ್ಕೆ ಅನುದಾನವೂ ಇಲ್ಲ. ಮಂತ್ರಿಗಳೂ ಬರುವುದಿಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ ಶಾಸಕ ರಾಜು ಕಾಗೆಯವರು ರಾಜ್ಯದಲ್ಲಿ ಅಭಿವೃದ್ಧಿಯೇ ಇಲ್ಲವಾಗಿದೆ. ಇಂಥ ಸರಕಾರದಲ್ಲಿ ಶಾಸಕರಾಗಿರುವ ಬದಲು ಆತ್ಮಹತ್ಯೆ ಮಾಡಿಕೊಳ್ಳುವುದೇ ಒಳಿತೆಂದು ಹೇಳಿದ್ದಾಗಿ ವಿವರಿಸಿದರು. ಅದೇ ಪಕ್ಷದ ಆರ್.ವಿ.ದೇಶಪಾಂಡೆಯವರು ಅಭಿವೃದ್ಧಿ ಇಲ್ಲದ ಕಾರಣ ಕ್ಷೇತ್ರದಲ್ಲಿ ತಲೆ ಎತ್ತಿಕೊಂಡು ಓಡಾಡಲು ಸಾಧ್ಯವಾಗುತ್ತಿಲ್ಲ ಎಂದಿರುವುದಾಗಿ ತಿಳಿಸಿದರು.
ಕರ್ನಾಟಕ ರಾಜ್ಯ ಸಹ-ಉಸ್ತುವಾರಿ ಸುಧಾಕರ್ ರೆಡ್ಡಿ ಅವರು ಮಾತನಾಡಿ, ಹರಿಯಾಣ ಮತ್ತು ಜಮ್ಮು- ಕಾಶ್ಮೀರದ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಫಲಿತಾಂಶ ಪಡೆದಿದೆ ಎಂದು ಮೆಚ್ಚುಗೆ ಸೂಚಿಸಿದರು. ಭಾರತ ಮಾತೆಯು ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ವಿಶ್ವ ನಾಯಕನಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಸಿದ್ದರಾಮಯ್ಯರಿಗೆ ಹೋಗೋ ಕಾಲ ಬಂದಿದೆ. ಅದು ಅವರ ನಡವಳಿಕೆಗಳಿಂದ ಅರ್ಥವಾಗುತ್ತಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ಟವೆಲ್ ಹಾಕಿಕೊಂಡು ಬಹಳಷ್ಟು ಜನರು ಕಾಯುತ್ತಿದ್ದಾರೆ. ಹೊಡೆದಾಟ, ಗುದ್ದಾಟ, ಕಿತ್ತಾಟ ಶುರುವಾಗಿದೆ. ಈ ಸರಕಾರ ಆರು ತಿಂಗಳಿರುತ್ತೋ, ಒಂದು ವರ್ಷ ಇರುತ್ತದೋ ಗ್ಯಾರಂಟಿ ಇಲ್ಲ ಎಂದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶಪ್ರೇಮಿಗಳು, ಭಾರತ್ ಮಾತಾಕಿ ಜೈ ಎನ್ನುವವರು ದೇಶದ್ರೋಹಿಗಳು ಎಂಬ ಸ್ಥಿತಿ ಇದೆ. ಯಾರು ಬಾಂಬ್ ಹಾಕುತ್ತಾರೋ, ಬೆಂಕಿ ಹಾಕುತ್ತಾರೋ, ಕಾನೂನು ಕೈಗೆ ತೆಗೆದುಕೊಳ್ಳುವವರು ದೇಶಪ್ರೇಮಿಗಳು ಎಂಬಂತಾಗಿದೆ ಎಂದು ಟೀಕಿಸಿದರು.
ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ತುಷ್ಟೀಕರಣ ನೀತಿ ತುತ್ತತುದಿಗೆ ಮುಟ್ಟಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಇಂಥ ಆಡಳಿತದ ವಿರುದ್ಧ ಸೆಟೆದು ನಿಲ್ಲಬೇಕಿದೆ ಎಂದು ತಿಳಿಸಿದರು.
ಸಂಸದ ಬ್ರಿಜೇಶ್ ಚೌಟ ಅವರು ಮಾತನಾಡಿ, ಇದು ಕಾರ್ಯಕರ್ತರಿಗೆ ಹುಮ್ಮಸ್ಸು ಮತ್ತು ಪ್ರೇರಣೆ ಕೊಡುವ ಚುನಾವಣೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಉಪ ಚುನಾವಣೆ ನಡೆಯಲಿದೆ. ಕಿಶೋರ್ ಕುಮಾರ್ ಪುತ್ತೂರು ಅವರನ್ನು ಗೆಲ್ಲಿಸಿ ಕಳುಹಿಸೋಣ ಎಂದು ಮನವಿ ಮಾಡಿದರು.
ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಮಾತನಾಡಿ, ಗ್ರಾಮ ಪಂಚಾಯಿತಿಗಳಿಗೆ ಹೆಚ್ಚು ಅನುದಾನ, ಜವಾಬ್ದಾರಿ ಕೊಡುವ ಕೆಲಸವನ್ನು ನಮ್ಮ ಕೇಂದ್ರ- ರಾಜ್ಯ ಸರಕಾರಗಳು ಮಾಡಿವೆ. ಕೋಟ ಶ್ರೀನಿವಾಸ ಪೂಜಾರಿ ಅವರು ಪಂಚಾಯಿತಿಯಿಂದ ಬಂದು ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅನುಭವ ಇದ್ದವರು. ಬಳಿಕ ವಿಧಾನಪರಿಷತ್ತಿನಲ್ಲಿ ಕೆಲಸ ಮಾಡಿದ್ದು, ಅವರು ಅದ್ಭುತವಾದ ಗ್ರಾಮ ಚಿಂತನೆ ಹೊಂದಿದವರು ಎಂದು ಹೇಳಿದರು.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.










Click it and Unblock the Notifications