ಪಂಚಮಸಾಲಿ ಮೀಸಲಾತಿಗೆ ಹಿಂದುಳಿದ ಜಾತಿ ವಿರೋಧ: ಸರ್ಕಾರಕ್ಕೆ ಎಚ್ಚರಿಕೆ
ಬೆಂಗಳೂರು, ಡಿಸೆಂಬರ್ 12: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಪ್ರವರ್ಗ '2ಎ'ಗೆ ಸೇರ್ಪಡೆ ಮಾಡಬಾರದು. ಒಂದೊಮ್ಮೆ ಸೇರ್ಪಡೆ ಮಾಡಲು ಮುಂದಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬುಧವಾರ ಕಾವೇರಿ ನಿವಾಸದ ಮುಂದೆ ಭೇಟಿ ಮಾಡಿದ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ. ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್.ವೆಂಕಟರಾಮಯ್ಯ ನೇತೃತ್ವದ ನಿಯೋಗ, 'ಪಂಚಮಸಾಲಿ ಸಮುದಾಯದ ಬೇಡಿಕೆಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಬಾರದು. ಒಂದೊಮ್ಮೆ ಬೇಡಿಕೆ ಈಡೇರಿಸಲು ಮುಂದಾದರೆ ಒಕ್ಕೂಟದಿಂದ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ' ಎಂದು ಸ್ಪಷ್ಟಪಡಿಸಿದರು.

ನಮ್ಮ ರಾಜ್ಯದಲ್ಲಿ 2002ರಿಂದ ಹಿಂದುಳಿದ ವರ್ಗಗಳನ್ನು "ಪ್ರವರ್ಗ-1", "ಪ್ರವರ್ಗ-2ಎ", "ಪ್ರವರ್ಗ-2ಬಿ", "ಪ್ರವರ್ಗ-3ಎ" ಮತ್ತು "ಪ್ರವರ್ಗ-3ಬಿ" ಎಂಬುದಾಗಿ ವಿಂಗಡಿಸಿ, ಉದ್ಯೋಗ ಮತ್ತು ಶಿಕ್ಷಣದಲ್ಲಿ "ಪ್ರವರ್ಗ-1ಕ್ಕೆ ಶೇಕಡಾ 4%". "ಪ್ರವರ್ಗ-2ಎಗೆ ಶೇಕಡಾ 15%", "ಪ್ರವರ್ಗ-2ಬಿಗೆ ಶೇಕಡಾ 4%", "ಪ್ರವರ್ಗ-3ಎಗೆ ಶೇಕಡಾ 4%" ಹಾಗೂ "ಪ್ರವರ್ಗ-3ಬಿಗೆ ಶೇಕಡಾ 5%" ರಷ್ಟು ಒಟ್ಟು ಮೀಸಲಾತಿಯ ಶೇಕಡಾ 32% ರಷ್ಟು ಮೀಸಲಾತಿಯನ್ನು ಹಿಂದುಳಿದ ವರ್ಗಗಳಿಗೆ ನಿಗಧಿಪಡಿಸಲಾಗಿದೆ. 2002ರಿಂದ ಈವರೆವಿಗೂ ಅದೇ ರೀತಿ ಮೀಸಲಾತಿಯನ್ನು ಹಿಂದುಳಿದ ವರ್ಗಗಳು ರಾಜ್ಯದಲ್ಲಿ ಪಡೆಯುತ್ತಿವೆ.
ರಾಜ್ಯದಲ್ಲಿನ ಪಂಚಮಸಾಲಿ ಅಂಗಾಯತರು ಉಲ್ಲೇಖ-2ರ ಸರ್ಕಾರದ ಆದೇಶದ ಅನ್ವಯ ಪ್ರವರ್ಗ-3ಬಿ ಮೀಸಲಾತಿಯನ್ನು ಪಡೆಯುತ್ತಿದ್ದು, ಇತ್ತಿಚೆಗೆ ಈ ಸಮುದಾಯವನ್ನು ಪ್ರವರ್ಗ-3ಬಿ ಯಿಂದ ಪ್ರವರ್ಗ-2ಎಗೆ ಬದಲಾಯಿಸಿ ಶೇಕಡಾ 15%ರ ಮೀಸಲಾತಿಯಡಿಯಲ್ಲಿ ಪ್ರವರ್ಗ-2ಎ ನಲ್ಲಿ ಮೀಸಲಾತಿ ಕೊಡಲು ಒತ್ತಾಯಿಸಿ ಸರ್ಕಾರಕ್ಕೆ ಬೇಡಿಕೆಯನ್ನು ಸಲ್ಲಿಸಿದ್ದು, ಧರಣಿಗಳನ್ನು ಮಾಡಿತ್ತಿದ್ದಾರೆ. ಹಾಗೂ ಸರ್ಕಾರದ ಮೇಲೆ ಒತ್ತಡವನ್ನು ತರುತ್ತಿದ್ದಾರೆ.
2022-23ರಲ್ಲಿ ಬಿ.ಜೆ.ಪಿ ಸರ್ಕಾರದಲ್ಲಿ ಪ್ರವರ್ಗ-2ಬಿರಲ್ಲಿ ಬರುವ ಮುಸ್ಲಿಂರ ಶೇಕಡಾ 4%ರ ಮೀಸಲಾತಿಯನ್ನು ರದ್ದುಪಡಿಸಿ, ಹೊಸದಾಗಿ ಪ್ರವರ್ಗ-2ಸಿ ಮತ್ತು ಪ್ರವರ್ಗ-2ಡಿ ಎಂದು ಹೊಸದಾಗಿ ವರ್ಗಿಕರಿಸಿ ಪ್ರವರ್ಗ-2ಸಿಗೆ ಶೆಕಡಾ 2% ಮತ್ತು ಪ್ರವರ್ಗ-2ಡಿಗೆ ಶೇಕಡಾ 24ರಷ್ಟು ಮೀಸಲಾತಿಯನ್ನು ನೀಡಲಾಗಿರುತ್ತದೆ ಎಂದು ಆದೇಶವನ್ನು ಹೊರಡಿಸಲಾಗಿತ್ತು. ಈ ಹಿಂದೆ ಪ್ರವರ್ಗ-3ಎನಲ್ಲಿ ಬರುವ ಜಾತಿಗಳನ್ನು ಪ್ರವರ್ಗ-2ಸಿಗೆ ಸೇರಿಸಿ ಮತ್ತು ಪ್ರವರ್ಗ-3ಬಿ ನಲ್ಲಿ ಬರುವ ಜಾತಿಗಳನ್ನು ಪ್ರವರ್ಗ-2ಡಿಗೆ ಸೇರಿಸಿ ಈ ಹಿಂದೆ ಪ್ರವರ್ಗ-3ರ ಮೀಸಲಾತಿ ಶೇಕಡಾ 4% ಮತ್ತು ಹೊಸ ಆದೇಶದ ಮೀಸಲಾತಿ ಶೇಕಡಾ 2% ಒಟ್ಟು ಸೇರಿ ಪ್ರವರ್ಗ-2ಸಿಗೆ ಒಟ್ಟು ಶೇಕಡಾ 6% ಮತ್ತು ಪ್ರವರ್ಗ-2ಡಿಗೆ ಶೇಕಡಾ 7% ರಷ್ಟು ಮೀಸಲಾತಿಯನ್ನು ನಿಗಧಿಪಡಿಸಿ ಆದೇಶವನ್ನು ಹೊರಡಿಸಲಾಗಿರುತ್ತದೆ.
ಬಿ.ಜೆ.ಪಿ ಸರ್ಕಾರದ ಈ ಆದೇಶವನ್ನು ಮುಸ್ಲಿಂ ಸಮುದಾಯದವರು ಸರ್ವೋಚ್ಚ ನ್ಯಾಯಾಲಯದಲ್ಲ ಅರ್ಜಿಯನ್ನು ಸಲ್ಲಿಸಿರುತ್ತಾರೆ. ಈ ಬಗ್ಗೆ ಅಂದಿನ ಬಿ.ಜೆ.ಪಿ ಸರ್ಕಾರದ ವಕೀಲರು ಸರ್ವೋಚ್ಚ ನ್ಯಾಯಾಲಯದಲ್ಲಿ 2002ರ ಆದೇಶವನ್ನು ಪಾಲನೆ ಮಾಡುವುದಾಗಿ ಹೇಳಿಕೆಯನ್ನು ನೀಡಿದ್ದು, ಬಿ.ಜೆ.ಪಿ ಸರ್ಕಾರದ ಆದೇಶವು ಹಾರಿಯಾಗಿರುವುದಿಲ್ಲ. ಇದರ ಜೊತೆಗೆ ಸರ್ಕಾರದ ಆದೇಶ ಸಂಖ್ಯೆ: ಹಿ.ವ.ಕ/35/22-2023 27.032023(ಹೊಸದಾಗಿ ಸೃಜಿಸಲಾಗಿರುವ ಪ್ರವರ್ಗ 2ಸಿ ಮತ್ತು ಪ್ರವರ್ಗ 20 ಆದೇಶ)ಹಾಗೂ ಸರ್ಕಾರದ ಸಂಖ್ಯೆ: ಹಿಂ.ವ.ಕ/133/5.4.2/2023., ದಿನಾಂಕ:27.03.2023 (ಮುಸ್ಲಿಂ ಸಮುದಾಯಕ್ಕೆ ಆರ್ಥಿಕವಾಗಿ ದುರ್ಬಲ ವರ್ಗ(ಇ.ಡಬ್ಲ್ಯೂ.ಸಿ) ಗುಂಪಿಗೆ ಸೇರ್ಪಡೆ ಮಾಡಿದ ಆದೇಶ) ಆದೇಶಗಳನ್ನು ಪ್ರಶ್ನಿಸಿ "ಡಬ್ಲ್ಯೂ.ಪಿ ಸಂಖ್ಯೆ:435/2023" ಹಾಗೂ "ಡಬ್ಲ್ಯೂಪಿ ಸಂಖ್ಯೆ:458/2023" ಪ್ರಕರಣಗಳನ್ನು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಿಸಲಾಗಿರುತ್ತದೆ.
ಸದರಿ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಸಾಲಟರಿ ಜನರಲ್‌ರವರು ದಿನಾಂಕ:04.08.2023ರಂದು ನಡೆದ ವಿಚಾರಣೆಯಲ್ಲಿ ಪರಿಷ್ಕೃತ ಮನರ್ ವರ್ಗೀಕರಣದ ಆದೇಶ ಹಿ.ವ.ಕ/135/ಬಿ.ಸಿ.ಎ/2023, ದಿನಾಂಕ:27.03.2023ರ ಆದೇಶವನ್ನು ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಆಳವಡಿಸಿಕೊಳ್ಳಲಾಗುವುದಿಲ್ಲವೆಂದು ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಆದೇಶ :.5.9/225/ 5.5.2/2000, 20:03.03.2002 ಎಂದು ಹೇಳಿಕೆಯನ್ನು ದಾಖಲಿಸಿರುತ್ತಾರೆ. (ಸ್ಪೆಟೈಂಟ್ ಆನ್ ರೇಕಾರ್ಡ್) ಪ್ರಕರಣವು ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.












Click it and Unblock the Notifications