ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಮಗೆ ದ್ವೇಷ ನನ್ನ ಮೇಲಲ್ಲವೇ ಯಡಿಯೂರಪ್ಪನವರೇ?

|
Google Oneindia Kannada News

Recommended Video

'ನಾಚಿಕೆಗೇಡಿನ ರಾಜಕೀಯ' ಮಾಡಬೇಡಿ ಎಂದ ಕುಮಾರಣ್ಣ | HD Kumaraswamy | Oneindia Kannada

ಬೆಂಗಳೂರು, ಸೆಪ್ಟೆಂಬರ್ 20 : "ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿದ್ದ ನೀವು ಅಧಿಕಾರ ವಹಿಸಿಕೊಂಡ ಬಳಿಕ ಮಾಡುತ್ತಿರುವುದು ಏನು?" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಪಶ್ನಿಸಿದ್ದಾರೆ.

ಎಚ್. ಡಿ. ಕುಮಾರಸ್ವಾಮಿ ಶುಕ್ರವಾರ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದ್ವೇಷ ರಾಜಕಾರಣದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ನಾಚಿಕೆಗೇಡಿನ ರಾಜಕೀಯ' ಮಾಡುವುದು ಬಿಡಿ ಎಂದು ಸಲಹೆ ಕೊಟ್ಟಿದ್ದಾರೆ.

ಯಡಿಯೂರಪ್ಪ ದ್ವೇಷ ರಾಜಕೀಯಕ್ಕೆ ಉದಾಹರಣೆ ಕೊಟ್ಟ ಎಚ್‌ಡಿಕೆಯಡಿಯೂರಪ್ಪ ದ್ವೇಷ ರಾಜಕೀಯಕ್ಕೆ ಉದಾಹರಣೆ ಕೊಟ್ಟ ಎಚ್‌ಡಿಕೆ

ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಬಡವರ ಬಂಧು' ಕಾರ್ಯಕ್ರಮವನ್ನು ಕೊಲ್ಲುತ್ತಿರುವ ನೀವು ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ ಯಡಿಯೂರಪ್ಪನವರೇ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಪರ ಪ್ರತಿಭಟನೆ : ಎಚ್‌ಡಿಕೆ ಗೈರಾಗಿದ್ದು ಏಕೆ?ಡಿ.ಕೆ. ಶಿವಕುಮಾರ್ ಪರ ಪ್ರತಿಭಟನೆ : ಎಚ್‌ಡಿಕೆ ಗೈರಾಗಿದ್ದು ಏಕೆ?

"ನನ್ನ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ಮಾಡಿದ್ದೆಲ್ಲವೂ ಸೇಡಿನ ಕ್ರಮ. ಬಡವರ ಬಂಧು ಯೋಜನೆಯನ್ನು ನಿರ್ಲಕ್ಷಿಸಿ ನೀವು ಬಡವರ ವಿರೋಧಿಯಾಗಿದ್ದೀರಿ" ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಯಡಿಯೂರಪ್ಪ ಬೆಂಗಳೂರು ಪ್ರದಕ್ಷಿಣೆ ನಾಟಕ: ಎಚ್‌ಡಿಕೆಯಡಿಯೂರಪ್ಪ ಬೆಂಗಳೂರು ಪ್ರದಕ್ಷಿಣೆ ನಾಟಕ: ಎಚ್‌ಡಿಕೆ

ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ

ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ

"ಆಪರೇಷನ್ ಕಮಲ ಕುಖ್ಯಾತಿಯ ಬಿ. ಎಸ್. ಯಡಿಯೂರಪ್ಪ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ ಮಾಡಿ ತಮ್ಮ 'ಪಕ್ಷಪಾತಿ' ನಿಲುವನ್ನು ಪ್ರತಿಪಾದಿಸಿದ್ದಾರೆ. ಅಗತ್ಯವಿದ್ದರೆ ಮತ್ತಷ್ಟು ನೀಡಲಿ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ? ಇದು 'ನಾಚಿಕೆಗೇಡಿನ ರಾಜಕೀಯ" ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಬಡವರ ವಿರೋಧಿಯಾಗಿದ್ದೀರಿ

ಬಡವರ ವಿರೋಧಿಯಾಗಿದ್ದೀರಿ

"ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ ಯಡಿಯೂರಪ್ಪನವರೇ? ಆದರೆ ಬಡವರ ಮೇಲೇಕೆ ನಿಮ್ಮ ಕೋಪ? ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿದ್ದ ನೀವು ಅಧಿಕಾರ ವಹಿಸಿಕೊಂಡ ನಂತರ ನನ್ನ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ಮಾಡಿದ್ದೆಲ್ಲವೂ ಸೇಡಿನ ಕ್ರಮ. 'ಬಡವರ ಬಂಧು' ಯೋಜನೆಯನ್ನು ನಿರ್ಲಕ್ಷಿಸಿ ನೀವು ಬಡವರ ವಿರೋಧಿಯಾಗಿದ್ದೀರಿ" ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ

ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ

ಬಡವರ ಬಂಧು ಕಾರ್ಯಕ್ರಮ ಅಶಕ್ತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದ್ದ ಈ ಯೋಜನೆಯನ್ನು ಕೊಲ್ಲುತ್ತಿರುವ ನೀವು ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ ಯಡಿಯೂರಪ್ಪನವರೇ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಫಲವಾಗಬಾರದು

ವಿಫಲವಾಗಬಾರದು

"ಬಡವರ ಬಂಧು ಯೋಜನೆ ವಿಫಲವಾಗಬಾರದು. ಇದರಲ್ಲಿ ಜಾತಿ, ಧರ್ಮ, ಪಕ್ಷಗಳಿಲ್ಲ. ಅಶಕ್ತರನ್ನು ಸಬಲರನ್ನಾಗಿಸಿ ದೇಶದ ಅಭಿವೃದ್ಧಿಯಲ್ಲಿ ಅವರನ್ನೂ ಒಳಗೊಳ್ಳುವಂತೆ ಮಾಡುವ ಪ್ರಮುಖ ಅರ್ಥಿಕ ಚಟುವಟಿಕೆ‌" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

English summary
In a tweet Karnataka former chief minister H.D.Kumaraswamy upset with Chief Minister B.S.Yediyurappa for sideline the Badavara Bandhu project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X