ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಸಲ್ಲಿಸಿ

Posted By:
Subscribe to Oneindia Kannada

ಬಾಗಲಕೋಟೆ, ಅಕ್ಟೋಬರ 05: ಪ್ರಸಕ್ತ ಸಾಲಿಗೆ ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯಕ್ಕಾಗಿ ಕೈಗಾರಿಕಾ, ಸೇವಾ ಘಟಕಗಳನ್ನು ಸ್ಥಾಪಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಕೈಗಾರಿಕಾ ಕೇಂದ್ರದಿಂದ 16, ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ 13, ಖಾದಿ ಮತ್ತು ವಿಲೇಜ್ ಇಂಡಸ್ಟ್ರೀಜ್ ಕಮಿಷನ್‍ದಿಂದ 13 ಭೌತಿಕ ಗುರಿ ನಿಗದಿಪಡಿಸಲಾಗಿದೆ.

ಭೌತಿಕ ಗುರಿಯಲ್ಲಿ ಶೇ.50 ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಾಂಗಕ್ಕೆ ಮೀಸಲಿಡಲಾಗಿದೆ. ಉಳಿದ ಶೇ.50 ರಷ್ಟು ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಅಂಗವಿಕಲರು, ಮಹಿಳೆಯರು ಹಾಗೂ ಇತರರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವವರು ಕನಿಷ್ಟ 18 ವರ್ಷ ವಯಸ್ಸಾಗಿದ್ದು, 8ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಯೋಜನಾ ವೆಚ್ಚ ಉತ್ಪಾದಕ ಘಟಕಗಳಿಗೆ 10 ಲಕ್ಷ ರೂ. ಮತ್ತು ಸೇವಾ ಘಟಕಗಳಿಗೆ 5 ಲಕ್ಷ ರೂ. ಮೇಲ್ಪಟ್ಟ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.


ಈ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗಕ್ಕೆ ಶೇ.15, ಗ್ರಾಮೀಣ ಪ್ರದೇಶದವರಿಗೆ ಶೇ.25 ಹಾಗೂ ಪ.ಜಾತಿ, ಪ.ಪಂ, ಓಬಿಸಿ, ಅಲ್ಪ ಸಂಖ್ಯಾತ, ಮಹಿಳೆಯರು, ಮಾಜಿ ಸೈನಿಕರು, ಅಂಗವಿಕಲರಿಗೆ ಪಟ್ಟಣ ಪ್ರದೇಶದಲ್ಲಿ ಶೇ.25 ಮತ್ತು ಗ್ರಾಮೀಣ ಪ್ರದೇಶದವರಿಗೆ ಶೇ.35 ರಷ್ಟು ಸಹಾಯಧನ ನೀಡಲಾಗುತ್ತದೆ.

ಆಸಕ್ತರು ವೆಬ್ ಸೈಟ್ www.kviconline.gov.in/pmegpeportal ನಲ್ಲಿ ಅಕ್ಟೋಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಅಧಿಕಾರಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಬಾಗಲಕೋಟ ಹಾಗೂ ಖಾದಿ ಮತ್ತು ವಿಲೇಜ್ ಇಂಡಸ್ಟ್ರೀಜ್ ಕಮಿಷನ್ ಬೆಂಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ.

PMEG ಇ ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಈ ಲಿಂಕ್ ಕ್ಲಿಕ್ ಮಾಡಿ ವಿಡಿಯೋ ಮೂಲಕ ತಿಳಿದುಕೊಳ್ಳಿ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Bagalkot : Application invited under Prime Minister Employment Generation Programme (PMEGP) scheme which is under Ministry of Micro, Small and Medium Enterprises, Govt. of India. Last date for submission October 18, 2016.
Please Wait while comments are loading...