ಬಾಗಲಕೋಟೆ: ಶಿಕಾರಿಪುರದಿಂದಲೇ ಸ್ಪರ್ಧಿಸುವೆ ಎಂದ ಯಡಿಯೂರಪ್ಪ
Recommended Video

ಬಾಗಲಕೋಟೆ, ಅಕ್ಟೋಬರ್ 06 : 'ಜನಾಭಿಪ್ರಾಯಕ್ಕೆ ಮನ್ನಣೆ ಕೊಟ್ಟು, ನಾನು ಶಿಕಾರಿಪುರದಿಂದಲೇ ಸ್ಪರ್ಧಿಸುವೆ, ತೇರದಾಳ ಕ್ಷೇತ್ರದಿಂದ ಸ್ಪರ್ಧೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ಬೆಳಗ್ಗೆ ಘೋಷಿಸಿದರು.
ತೇರದಾಳ ಕ್ಷೇತ್ರದಲ್ಲಿಯಾರು ಸ್ಪರ್ಧಿಸಲಿದ್ದಾರೆ ಎಂಬ ಸುಳಿವು ನೀಡದಿದ್ದರೂ, ಬಾಗಲಕೋಟೆ ಬಿಜೆಪಿ ಜಿಲ್ಲಾದ್ಯಕ್ಷ ಸಿದ್ದು ಸವದಿ ಅವರಿಗೆ ಟಿಕೆಟ್ ನೀಡುವುದು ಖಚಿತವಾಗಿದೆ.

'ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಚರ್ಚೆ ಈಗಾಗಲೆ ಆಗಿದೆ ಇದರಲ್ಲಿ ಯಾವುದೇ ಗೊಂದಲ ಬೇಡ. ಉತ್ತರಕರ್ನಾಟಕದ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚನೆ ನೀಡಿದ್ದು ನಿಜ.
ಬಿಜಾಪುರ, ಬಾಗಲಕೋಟೆಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡ ಬಂದಿತ್ತು'. ಈ ಬಗ್ಗೆ ಇಲ್ಲಿನ ಮುಖಂಡರ ಜತೆ ಸಮಾಲೋಚನೆ ನಡೆಸಿದ್ದೇನೆ. ತೇರದಾಳ ದಲ್ಲಿ ನಿಲ್ಲುವುದು ಎಂದು ನಿಶ್ಚಯವಾಗಿದ್ದು, ಆದರೆ, ನನ್ನ ರಾಜಕೀಯ ಅಸ್ತಿತ್ವಕ್ಕೆ ದಾರಿ ಮಾಡಿಕೊಟ್ಟ ಶಿಕಾರಿಪುರದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು, ಕ್ಷೇತ್ರದ ಜನತೆ ಬಯಸಿದ್ದಾರೆ.
ಆದರೆ, ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುವ ನಿಟ್ಟಿನಲ್ಲಿ ಹೈಕಮಾಂಡ್ ಮನವೊಲಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ, ಶೋಭಾ ಕರಂದ್ಲಾಜೆ ಮುಂತಾದವರಿದ್ದರು.












Click it and Unblock the Notifications