ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಗೆಲುವಿಗೆ 5 ಪ್ರಮುಖ ಕಾರಣಗಳು

Bagalkot By Election Result: ಬಾಗಲಕೋಟೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರು ಗೆಲುವು ಸಾಧಿಸಿದ್ದಾರೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಬಹುಮತ ಪಡೆದಿದ್ದು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಸೋಲಾಗಿದೆ. ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್.ವೈ. ಮೇಟಿ ಅವರ ನಿಧನದಿಂದಾಗಿ ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ ನಡೆದಿತ್ತು.

ಟಿಕೆಟ್‌ಗಾಗಿ ಎಚ್.ವೈ. ಮೇಟಿ ಅವರ ಮಕ್ಕಳಲ್ಲಿ ಭಾರೀ ಪೈಪೋಟಿ ನಡೆದಿತ್ತು. ಅಂತಿಮವಾಗಿ ಎಚ್.ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡಿತ್ತು. ಅನುಕಂಪ ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಪ್ರಭಾವವು ಉಮೇಶ್ ಮೇಟಿ ಅವರ ಗೆಲುವಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗಿದೆ.

Bagalkot By Election

ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಉಮೇಶ್ ಮೇಟಿ ಅವರು ಗೆಲುವು ಸಾಧಿಸುತ್ತಿರುವುದು ಕಾಂಗ್ರೆಸ್ ಪಕ್ಷದಲ್ಲಿ ನಿರಾಳತೆ ಮೂಡಿಸಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಡುವೆ ಭಾರೀ ಪೈಪೋಟಿ ಎದುರಾಗಿತ್ತು. ಇದೀಗ ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯ 21ನೇ ಸುತ್ತಿನಲ್ಲಿ ‌ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಮುನ್ನಡೆ ಆಗಿದೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 87624 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಗೆ 70419 ಮತಗಳು ಬಂದಿವೆ. ಈ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 17,205 ಮತಗಳ ಲೀಡ್‌ನಲ್ಲಿದ್ದು, ಬಹುತೇಕ ಗೆಲುವಿನ ಸಮೀಪಕ್ಕೆ ಬಂದಿದ್ದಾರೆ.

ಉಮೇಶ್ ಮೇಟಿಗೆ ಗೆಲುವಿಗೆ 5 ಪ್ರಮುಖ ಕಾರಣಗಳು

ಈ ಬಾರಿಯ ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಉಮೇಶ್ ಮೇಟಿಗೆ ಗೆಲುವಿಗೆ ಕಾರಣವಾದ ಐದು ಪ್ರಮುಖ ಕಾರಣಗಳ ವಿವರ ಇಲ್ಲಿದೆ.

ಅನುಕಂಪದ ಅಲೆ: ಈ ಬಾರಿಯ ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಉಮೇಶ್ ಮೇಟಿ ಗೆಲುವಿಗೆ ಕಾರಣವಾದ ಪ್ರಮುಖ ಅಂಶವೆಂದರೆ ಎಚ್‌.ವೈ ಮೇಟಿ ಅವರ ಮಕ್ಕಳ ಮೇಲೆ ಜನರಿಗಿದ್ದ ಅನುಕಂಪದ ಅಲೆ. ಎಚ್‌.ವೈ ಮೇಟಿ ಅವರ ನಿಧನದಿಂದ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಅವರ ಪುತ್ರ ಉಮೇಶ್ ಅವರ ಪರ ಪರೋಕ್ಷವಾದ ಅನುಕಂಪದ ಅಲೆ ಸೃಷ್ಟಿಯಾಗಿತ್ತು.

ಗ್ಯಾರಂಟಿ ಯೋಜನೆಗಳ ಪ್ರಭಾವ: ಇನ್ನು ಎರಡನೇಯ ಮುಖ್ಯ ಕಾರಣವೆಂದರೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಪ್ರಭಾವವು ಕಾಂಗ್ರೆಸ್‌ ಅಭ್ಯರ್ಥಿಯ ಗೆಲುವಿಗೆ ಪ್ರಮುಖ ಕಾರಣವಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಭಾವ: ಬಾಗಲಕೋಟೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಭಾವವೂ ಪರಿಣಾಮ ಬೀರಿದೆ. ಸಿದ್ದರಾಮಯ್ಯ ಅವರಿಗೆ ಬಾಗಲಕೋಟೆ ಕ್ಷೇತ್ರವು ಪ್ರತಿಷ್ಠೆಯ ಕಣವಾಗಿತ್ತು. ಸಿದ್ದರಾಮಯ್ಯ ಅವರೇ ಈ ಭಾಗದಲ್ಲಿ ಹಲವು ಸುತ್ತಿನ ಚುನಾವಣಾ ಪ್ರಚಾರಗಳನ್ನು ನಡೆಸಿದ್ದರು.

ಅಹಿಂದ ಮತಗಳು ಸಹ ಕಾರಣ: ಈ ವಿಧಾನಸಭಾ ಕ್ಷೇತ್ರದಲ್ಲಿ ಕುರುಬ ಸಮುದಾಯದ ಮತಗಳೊಂದಿಗೆ ಅಹಿಂದ ಮತಗಳು ಸಹ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೇ ಬಂದಿವೆ. ಇದೂ ಸಹ ಕಾಂಗ್ರೆಸ್ ಈ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದಕ್ಕೆ ಕಾರಣವಾಗಿದೆ. ಅಲ್ಲದೆ ಈ ವಿಧಾನಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನೀಡಲಾಗಿತ್ತು. ಅವರು ರೂಪಿಸಿದ ಕಾರ್ಯತಂತ್ರವೂ ಸಹ ಈ ಬಾರಿಯ ಉಪ ಚುನಾವಣೆಯ ಗೆಲುವಿಗೆ ಕಾರಣವಾಗಿದೆ.

ಅಬ್ಬರದ ಪ್ರಚಾರ: ಬಿಜೆಪಿ ಪಕ್ಷಕ್ಕೆ ಹೋಲಿಕೆ ಮಾಡಿದರೆ, ಈ ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಬ್ಬರದ ಪ್ರಚಾರವನ್ನು ಮಾಡಿದೆ. ಇದೂ ಸಹ ಕಾಂಗ್ರೆಸ್ ಪಕ್ಷದ ಗೆಲುವಿಗೆ ಪ್ರಮುಖ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+