ಬಾಗಲಕೋಟೆಯಲ್ಲಿ ಕಾಂಗ್ರೆಸ್‌ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯವಾಗಿ ಚುರುಕುಗೊಂಡಿದ್ದು ಪ್ರಮುಖ ಪಕ್ಷಗಳ ನಡುವೆ ತೀವ್ರ ಪೈಪೋಟಿ ಕಾಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಜನರಿಂದ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿರುವುದು ಗಮನಾರ್ಹವಾಗಿದೆ. ಕ್ಷೇತ್ರದಲ್ಲಿ ಸಕ್ರಿಯ ಪ್ರಚಾರ ಕಾರ್ಯಗಳು ಜೋರಾಗಿದ್ದು, ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಮತದಾರರನ್ನು ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ ಸಿಎಂ ಸಿದ್ದರಾಮಯ್ಯ .

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ. ಇದು ನಮ್ಮ ಗೆಲುವಿನ ಸ್ಪಷ್ಟ ಸೂಚನೆ.

Bagalkot Bypoll

ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ. ದಿವಂಗತ ಹೆಚ್.ವೈ.ಮೇಟಿಯವರು ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮವಹಿಸಿದ್ದರು. ಮೇಟಿಯವರು ಎಲ್ಲ ವರ್ಗದವರ ಏಳಿಗೆಗಾಗಿ ಸೇವೆ ಸಲ್ಲಿಸಿದ ಅಜಾತಶತ್ರುವಾಗಿದ್ದರು. ಸರಳ, ಸಜ್ಜನ ಮೇಟಿಯವರ ನಿಧನದಿಂದ ಖಾಲಿಯಾಗಿರುವ ಶಾಸಕ ಸ್ಥಾನಕ್ಕೆ ಅವರ ಮಗನೇ ಆದ ಉಮೇಶ್ ಮೇಟಿಯವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಾಗಲಕೋಟೆಯಲ್ಲಿ ಅವರ ಗೆಲ್ಲುವ ವಿಶ್ವಾಸವಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನವರೇ ಆಗಿದ್ದ ಸಾದಿಕ್ ಪೈಲ್ವಾನ್ ಅವರ ಮನವೊಲಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ. ಸಚಿವ ಜಮೀರ್ ಅಹ್ಮದ್ ಅವರೂ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಿಜೆಪಿಗೆ ಸೋಲಿನ ಭೀತಿ

ಬಿಜೆಪಿಯವರು ಸೋಲಿನ ಭೀತಿಯಿಂದ ಮನಸಿಗೆ ಬಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪ್ರತೀತಿಯಾಗಿದ್ದು, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ. ಎರಡೂ ಕಡೆ ನಾವೇ ಗೆಲ್ಲುತ್ತೇವೆ.

ಬಿಜೆಪಿಯವರು ತಮ್ಮ ಅವಧಿಯಲ್ಲಿ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಿಲ್ಲ, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ರೈತರಿಗೆ ಪರಿಹಾರ ನೀಡಲು ಆದ್ಯತೆ ನೀಡಲಿಲ್ಲ. ಬಾಗಲಕೋಟೆಯ ಅಭಿವೃದ್ಧಿಗೆ ಹೆಚ್.ವೈ.ಮೇಟಿಯವರ ಕೊಡುಗೆ ಅನನ್ಯವಾಗಿದೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಇಂದಿನ ಚುನಾವಣಾ ಪ್ರಚಾರ ಆರಂಭಕ್ಕೂ ಮುನ್ನ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದೆ.

ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಮುಗಳೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕ್ಷೇತ್ರದ ಅಭಿವೃದ್ಧಿಗೆ ಹೆಚ್.ವೈ.ಮೇಟಿಯವರ ಕೊಡುಗೆಗಳ ಮಾಹಿತಿಯನ್ನು ಒಳಗೊಂಡ "ಪ್ರಗತಿಯ ಪಕ್ಷಿನೋಟ" ಎಂಬ ಕೈಪಿಡಿಯನ್ನು ಬಿಡುಗಡೆಗೊಳಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಪ್ರಚಾರ ನಡೆಸಿದೆ.

ಕ್ಷೇತ್ರದ ಪ್ರತಿ ಹಳ್ಳಿಯಲ್ಲೂ ಕಾಂಗ್ರೆಸ್ ಪ್ರಚಾರ ಸಭೆ ಮತ್ತು ಯಾತ್ರೆಗಳಿಗೆ ಕಿಕ್ಕಿರಿದು ಸೇರುತ್ತಿರುವ ಜನಸಾಗರವೇ ಉಮೇಶ್ ಮೇಟಿಯವರ ಗೆಲುವನ್ನು ಸಾರಿ ಹೇಳುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+