ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್
ಬೆಂಗಳೂರು: ಕರ್ನಾಟಕದ ಎರಡು ಪ್ರಮುಖ ಕ್ಷೇತ್ರಗಳಾದ ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ನಾವು ಜಂಟಿಯಾಗಿ ಸುದೀರ್ಘ ಚರ್ಚೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದೇವೆ. ಈ ಬಾರಿ ಕಾಂಗ್ರೆಸ್ ಪಕ್ಷವು ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂಬ ಆತ್ಮವಿಶ್ವಾಸ ನನಗಿದೆ ಎಂದಿದ್ದಾರೆ.
ಮೇಟಿ ಪುತ್ರ ಉಮೇಶ್‌ಗೆ ಟಿಕೆಟ್
ಬಾಗಲಕೋಟೆ ಕ್ಷೇತ್ರದಿಂದ ದಿವಂಗತ ಎಚ್.ವೈ.ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಈ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಹಸಿರು ನಿಶಾನೆ ತೋರಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಅವರಿಗೆ ಅಧಿಕೃತವಾಗಿ ಟಿಕೆಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಮೇಶ್ ಮೇಟಿ ಅವರ ಪರವಾಗಿ ಪಕ್ಷದ ಮುಖಂಡರಾದ ಮಂಜುನಾಥ್ ಅವರಿಗೆ 'ಬಿ-ಫಾರ್ಮ್' ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿಯ ಗೆಲುವಿಗೆ ಶುಭ ಹಾರೈಸಿದ ಅವರು, ಪಕ್ಷದ ಸಂಘಟಿತ ಹೋರಾಟದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಹಿರಿಯ ನಾಯಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಅವರ ಪುತ್ರ ಉಮೇಶ್ ಮೇಟಿ ಅವರನ್ನೇ ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಅನುಕಂಪದ ಅಲೆ ಹಾಗೂ ಸ್ಥಳೀಯ ಬೆಂಬಲದ ನಿರೀಕ್ಷೆಯಲ್ಲಿದೆ. ದೆಹಲಿ ಮಟ್ಟದಲ್ಲಿ ನಡೆದ ಸುದೀರ್ಘ ಚರ್ಚೆಯ ನಂತರ ಹೈಕಮಾಂಡ್ ಉಮೇಶ್ ಮೇಟಿ ಹೆಸರನ್ನು ಅಂತಿಮಗೊಳಿಸಿದೆ. ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಅವರ ಗೆಲುವು ನಿಶ್ಚಿತ. ಪಕ್ಷದ ಮುಖಂಡ ಮಂಜುನಾಥ್ ಅವರ ಕೈಗೆ ಬಿ-ಫಾರ್ಮ್ ನೀಡಲಾಗಿದ್ದು, ಇಡೀ ಕಾಂಗ್ರೆಸ್ ತಂಡ ಒಗ್ಗಟ್ಟಿನಿಂದ ಕೆಲಸ ಮಾಡಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಶಾಮನೂರು ಮೊಮ್ಮಗನಿಗೆ ದಾವಣಗೆರೆ ಟಿಕೆಟ್
ದಾವಣಗೆರೆ ಕ್ಷೇತ್ರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಹಾಗೂ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಂತೋಷ್ ಸಾಮತ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಶಾಮನೂರು ಶಿವಶಂಕರಪ್ಪ ಅವರು ಪಕ್ಷದ ಎಲ್ಲಾ ಬಿಕ್ಕಟ್ಟಿನ ಸಮಯದಲ್ಲೂ ಗಟ್ಟಿಯಾಗಿ ನಿಂತಿರುವ ಮಹಾನ್ ನಾಯಕರು. ಅವರ ಕುಟುಂಬದ ಕುಡಿಗೆ ಈ ಬಾರಿ ಅವಕಾಶ ನೀಡಲಾಗಿದೆ ಎಂದೂ ಡಿ.ಕೆ.ಶಿವಕುಮಾ ರ್ ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದು, ಇಂದು ಅಭ್ಯರ್ಥಿಗಳ ಪರವಾಗಿ ಬಿ-ಫಾರಂಗಳನ್ನು ಹಸ್ತಾಂತರಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಅವರ ಹೆಸರನ್ನು ಘೋಷಿಸಲಾಗಿದೆ. ಇಂದು ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಹಿರಿಯ ನಾಯಕ ಹಾಗೂ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಅಭ್ಯರ್ಥಿಯ ಪರವಾಗಿ ಬಿ-ಫಾರಂ ಹಸ್ತಾಂತರಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೆಲುವಿಗೆ ಶುಭ ಹಾರೈಸಿದರು. ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಕುಡಿಗೆ ಈ ಬಾರಿ ಮಣೆ ಹಾಕುವ ಮೂಲಕ ಕ್ಷೇತ್ರದಲ್ಲಿ ಭದ್ರವಾದ ಅಡಿಪಾಯ ಹಾಕಲು ಕಾಂಗ್ರೆಸ್ ನಿರ್ಧರಿಸಿದೆ.
-
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Vijay: ಇದು ತಲೆಮಾರಿನ ಬದಲಾವಣೆಗಾಗಿ ನಡೆಯುತ್ತಿರುವ ಚುನಾವಣೆ: ಕಾರ್ಯಕರ್ತರಿಗೆ ದಳಪತಿ ವಿಜಯ್ ವಿಶೇಷ ಕರೆ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ












Click it and Unblock the Notifications