ಬಾಗಲಕೋಟೆ : ಅಂಗನವಾಡಿಗೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ

ಬಾಗಲಕೋಟೆ, ಅಕ್ಟೋಬರ್ 16 : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇಳಕಲ್‌ನಲ್ಲಿನ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾತೃಪೂರ್ಣ ಯೋಜನೆ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ ಎಂಬ ದೂರಿನ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ್ ಅವರು ಇಳಕಲ್‌ನ ಜಿವೇಶ್ವರ ಮಂಗಲ ಭವನದ ಮುಂದೆ ಇರುವ ಅಂಗನವಾಡಿ ಕೇಂದ್ರಕ್ಕೆ ಅನೀರಿಕ್ಷಿತವಾಗಿ ಭೇಟಿ ಕೊಟ್ಟರು. ಸರ್ಕಾರದ ಕಾರ್ಯಕ್ರಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸದ ಅಂಗನವಾಡಿ ಕಾರ್ಯಕರ್ತೆಯನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದಾಗ ಆಹಾರ ಧಾನ್ಯಗಳ ಸಂಗ್ರಹ, ದಾಖಲಾತಿ ಮಾಹಿತಿಗಳ ವಿವರವನ್ನು ಮನೆಯಲ್ಲಿ ಇಟ್ಟಿದ್ದೇನೆ ಎಂದು ಅಂಗನವಾಡಿ ಕಾರ್ಯಕರ್ತೆ ಹೇಳಿದರು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸದೇ ಹಾಳು ಮಾಡುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಸರ್ಕಾರ ಬಾಣಂತಿಯರು, ಗರ್ಭಿಣಿಯರಿಗೆ ಮಧ್ಯಾಹ್ನದ ಪೌಷ್ಠಿಕಾಂಶಯುಕ್ತ ಆಹಾರ ಒದಗಿಸಲು ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಬೇಕು ಎಂದು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚನೆ ನೀಡಲಾಗಿದೆ. ಆದ್ದರಿಂದ, ಯೋಜನೆ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ..

ಸರ್ಕಾರದ ಮಹತ್ವದ ಯೋಜನೆ

ಸರ್ಕಾರದ ಮಹತ್ವದ ಯೋಜನೆ

ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ಬಾಣಂತಿಯರು, ಗರ್ಭಿಣಿಯರಿಗೆ ಮಧ್ಯಾಹ್ನದ ಪೌಷ್ಠಿಕಾಂಶಯುಕ್ತ ಆಹಾರ ಒದಗಿಸಲು ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ ಎಂಬ ದೂರಿನ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ವಿವಿಧ ಅಂಗನವಾಡಿಗಳಲ್ಲಿ ಖುದ್ದಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಖುದ್ದು ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಖುದ್ದು ಪರಿಶೀಲನೆ

ಸೋಮವಾರ ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ್ ಅವರು ಇಳಕಲ್‌ನ ಜಿವೇಶ್ವರ ಮಂಗಲ ಭವನದ ಮುಂದೆ ಇರುವ ಅಂಗನವಾಡಿ ಕೇಂದ್ರಕ್ಕೆ ಅನೀರಿಕ್ಷಿತವಾಗಿ ಭೇಟಿ ಕೊಟ್ಟರು. ಮಾತೃಪೂರ್ಣ ಯೋಜನೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳು ಹೇಗೆ ಜನರನ್ನು ತಲುಪುತ್ತಿವೆ ಎಂದು ಮಾಹಿತಿ ಪಡೆದರು.

ಕಾರ್ಯಕರ್ತೆಯನ್ನು ತರಾಟೆಗೆ ತೆಗೆದುಕೊಂಡರು

ಕಾರ್ಯಕರ್ತೆಯನ್ನು ತರಾಟೆಗೆ ತೆಗೆದುಕೊಂಡರು

ಅಂಗನವಾಡಿ ಕೇಂದ್ರದಲ್ಲಿ ದಾಖಲೆಗಳು ಸರಿ ಇರಲಿಲ್ಲ. ಈ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದರು. ಕೇಂದ್ರಗಳಿಗೆ ಭೇಟಿ ನೀಡಿ ಯೋಜನೆ ಅನುಷ್ಠಾನದ ಬಗ್ಗೆ ಕಾಳಜಿ ವಹಿಸಬೇಕು ಎಂದು ತಾಲೂಕು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ ಧಾನ್ಯ ಮನೆಯಲ್ಲಿ

ಆಹಾರ ಧಾನ್ಯ ಮನೆಯಲ್ಲಿ

ಅಂಗನವಾಡಿ ಕೇಂದ್ರದಲ್ಲಿ ಆಹಾರ ತಯಾರಿಸದೆ ಹಾಗೂ ಆಹಾರ ಧಾನ್ಯವನ್ನು ಮನೆಯಲ್ಲಿ ಇಟ್ಟು ಕೊಂಡಿರುವುದಕ್ಕೆ ಅಂಗನವಾಡಿ ಕಾರ್ಯಕರ್ತೆ ವಿರುದ್ಧ ಜಿಲ್ಲಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು. ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+