ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್, ಬಿಜೆಪಿಯಿಂದ ಭೀತಿ ಎದುರಾಗಿದೆ: ಬಿದರಿ

By Srinath
|
Google Oneindia Kannada News

ಬಾಗಲಕೋಟೆ, ಏಪ್ರಿಲ್ 11: ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಗೆ ಖಡಕ್ ಸ್ಪರ್ಧೆ ನೀಡುತ್ತಿರುವ ಸರ್ವ ಜನ ಶಕ್ತಿ ಪಕ್ಷದ ಸಂಸ್ಥಾಪಕ, ಬಾಗಲಕೋಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶಂಕರ್ ಬಿದರಿ ಅವರು ಎರಡೂ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಪಕ್ಷದ ಚುನಾವಣಾ ಪ್ರಚಾರಕ್ಕೆ ಅಡ್ಡಿಯುಂಟುಮಾಡುತ್ತಿದ್ದಾರೆ ಎಂದು ಶಂಕರ್ ಬಿದರಿ ಅವರು ಗಂಭೀರವಾಗಿ ಆರೋಪ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ರೌಡಿಗಳನ್ನು ಬಿಟ್ಟು ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಚುನಾವಣಾ ಪ್ರಚಾರಕ್ಕೆ ಅಡ್ಡಿ ಪಡಿಸುತ್ತಿವೆ ಎಂದು ಅವರು ತೀವ್ರ ಅಸಮಾಧಾನ/ ಆತಂಕ ವ್ಯಕ್ತಪಡಿಸಿದ್ದಾರೆ.

bagalkot-independent-shankar-bidari-allege-harassment-by-bjp-congress
ನನ್ನೆದುರು ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಎರಡೂ ಪಕ್ಷಗಳು ಒಂದಾಗಿ ನನ್ನ ವಿರುದ್ಧ ತಂತ್ರ ರೂಪಿಸಿವೆ. ಈ ಹಿನ್ನೆಲೆಯಲ್ಲಿ ರೌಡಿಗಳಿಂದ ತಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುದೆ. ಪೊಲೀಸರು ಪೊಲೀಸರು ಉಭಯ ಪಕ್ಷಗಳ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ರಾಜ್ಯದ ಮಾಜಿ ಅತ್ಯುನ್ನತ ಪೊಲೀಸ್ ಅಧಿಕಾರಿ ಗುಡುಗಿದ್ದಾರೆ.

ಏ. 10ರಂದು ಜಮಖಂಡಿಯ ಹಿರೇಪಡಸಲಗಿ ಗ್ರಾಮದಲ್ಲಿ ನಡೆದ ಬಹಿರಂಗ ಸಮಾವೇಶದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ರೌಡಿಗಳನ್ನು ಕಳುಹಿಸಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿವೆ. ಘಟನೆಯಲ್ಲಿ ನಾಲ್ವರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದು, ಅವರು ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಭಯ ಪಕ್ಷಗಳ ಇಂತಹ ವರ್ತನೆ ಸರಿಯಲ್ಲ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

bagalkot-independent-shankar-bidari-allege-harassment-by-bjp-congress
English summary
Lok Sabha Elections 2014: Bagalkot independent candidate Shankar Bidari alleges harassment by BJP and Congress workers yesterday (April 10).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X