ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ : 1.26 ಲಕ್ಷ ರೈತರ ಸಾಗುವಳಿ ಚೀಟಿಗೆ ಅರ್ಹ: ಮಹತ್ವದ ಮಾಹಿತಿ ಇಲ್ಲಿದೆ

ಬೆಂಗಳೂರು, ಡಿಸೆಂಬರ್‌ 02: ಬಗರ್ ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳ ಪೈಕಿ ಕನಿಷ್ಟ 5,000 ಜನರ ಅರ್ಜಿಗಳನ್ನಾದರೂ "ಬಗರ್ ಹುಕುಂ" ಕಮಿಟಿಯ ಎದುರು ಮಂಡಿಸಿ ಡಿ.15ರ ಒಳಗೆ ಸಾಗುವಳಿ ಚೀಟಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿದ ಅವರು, "ರಾಜ್ಯಾದ್ಯಂತ ಲಕ್ಷಾಂತರ ಜನ ಬಗರ್ ಹುಕುಂ ಅಡಿಯಲ್ಲಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಪೈಕಿ 1,26,000 ಅರ್ಜಿಗಳನ್ನು ಮಾತ್ರ ಅರ್ಹ ಎಂದು ಪರಿಗಣಿಸಲಾಗಿದೆ. ಕೆಲ ಜಿಲ್ಲೆಗಳಲ್ಲಿ ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಈಗಾಗಲೇ ಬಗರ್ ಹುಕುಂ ಕಮಿಟಿ ಎದುರು ಇಡಲಾಗಿದೆ. ಆದರೆ, ಆ ಸಂಖ್ಯೆ ಸಮಾಧಾನಕರವಾಗಿಲ್ಲ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಗುರಿ ನಿಗದಿಪಡಿಸಲಾಗಿದೆ. ಡಿ.15ರ ಒಳಗೆ ರಾಜ್ಯಾದ್ಯಂತ ಕನಿಷ್ಟ 5,000 ಅರ್ಹ ಅರ್ಜಿಗಳನ್ನು ಕಮಿಟಿ ಎದುರು ಮಂಡಿಸಲು ಸೂಚಿಸಲಾಗಿದೆ.

Bagar Hukum Cultivators From State Government 1 26 lakh farmers eligible for cultivation chit

ಮೊದಲು ಗ್ರಾಮ ಆಡಳಿತ ಅಧಿಕಾರಿ ಅರ್ಜಿದಾರರ ಸ್ಥಳ ಪರಿಶೀಲಿಸಬೇಕು. ತದನಂತರ ಕಂದಾಯ ನಿರೀಕ್ಷಕರು ಹಾಗೂ ತಹಶೀಲ್ದಾರ್ ವರದಿ ಸಲ್ಲಿಸಬೇಕು. ಈ ಎಲ್ಲಾ ಪ್ರಕ್ರಿಯೆಗಳ ನಂತರವೇ ಅರ್ಹ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಲು ಸಾಧ್ಯ. ಈ ಕೆಲಸಗಳು ಸಮಯಾವಕಾಶ ಬೇಡುವಂತದ್ದಾಗಿದ್ದು, ಅಧಿಕಾರಿಗಳಿಗೆ ಮೊದಲ ಹಂತದಲ್ಲಿ 5,000 ಅರ್ಜಿಗಳ ಗುರಿ ನೀಡಿದ್ದು, ಜನವರಿ ವೇಳೆಗೆ ಈ ಗುರಿ 15 ರಿಂದ 20 ಸಾವಿರಕ್ಕೆ ಏರಿಕೆಯಾಗಲಿದೆ ಎಂದರು.

"ಬಗರ್ ಹುಕುಂ" ಯೋಜನೆಯ ಅಡಿ ಅರ್ಹ ಫಲಾನುಭವಿಗಳಿಗೆ ಡಿಜಿಟಲ್ ಸಾಗುವಳಿ ಚೀಟಿ ನೀಡಲಾಗುವುದು. ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ರೈತರಿಗೆ ಮಂಜೂರಾಗುವ ಜಮೀನಿಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಕಿಂಚಿತ್ತೂ ತಕರಾರು ಬರಬಾರದು, ಕಡತ ಕಳೆದು ಹೋಯ್ತು ಎಂದು ರೈತರು ಮತ್ತೆ ಸರ್ಕಾರಿ ಕಚೇರಿಗೆ ಅಲೆಯಬಾರದು ಎಂಬ ವಿಚಾರದಲ್ಲಿ ಸರ್ಕಾರ ಬದ್ದವಾಗಿದೆ. ಹೀಗಾಗಿ ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಿ ಮಂಜೂರಾದ ಜಮೀನಿಗೆ ಪೋಡಿಯೂ ಮಾಡಿಸಿ, ಪಹಣಿಯಲ್ಲಿ ಹೆಸರನ್ನು ನಮೂದಿಸಿ ಸ್ವತಃ ತಹಶೀಲ್ದಾರರು ನೋಂದಣಿ ಕಚೇರಿಯಲ್ಲಿ ಜಮೀನಿನ ನೋಂದಣಿಯೂ ಮಾಡಿ ರೈತರಿಗೆ ಡಿಜಿಟಲ್ ಸಾಗುವಳಿ ಚೀಟಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಅನರ್ಹ ಅರ್ಜಿಗಳೆಷ್ಟು?

"ಬಗರ್ ಹುಕುಂ ಯೋಜನೆಯ ಅಡಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದವರ ಪೈಕಿ 5 ರಿಂದ 6 ಲಕ್ಷ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗಿದೆ. ಕಾನೂನು ರೀತ್ಯಾ ಅರ್ಜಿ ಸಲ್ಲಿಸಬೇಕಾದ ದಿನಕ್ಕೆ 18 ವರ್ಷ ತುಂಬದ 26,051 ಜನ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ಈಗಾಗಲೇ 4.38 ಎಕರೆ ಜಮೀನು ಹೊಂದಿರುವ 26,922 ಅರ್ಜಿಗಳು, ಕೆರೆ ರಸ್ತೆ ಸೇರಿ ಬಿ-ಖರಾಬು ಪ್ರದೇಶಗಳ ಮಂಜೂರಾತಿಗೆ ಕೋರಿ 40,799 ಅರ್ಜಿಗಳು, ಅರಣ್ಯ ಪ್ರದೇಶಗಳ ಮಂಜೂರಾತಿಗೆ 1,68,119 ಅರ್ಜಿಗಳು, ನಗರ ಪರಿಮಿತಿಯೊಳಗೆ ಮಂಜೂರಾತಿ ಕೋರಿ 68,561 ಅರ್ಜಿಗಳು, ತಾಲೂಕಿನಲ್ಲೇ ವಾಸ ಇಲ್ಲದ 8,665 ಅರ್ಜಿಗಳು ಹಾಗೂ ಕೃಷಿಕರಲ್ಲ 1,00,400 ಜನ ಅರ್ಜಿ ಸಲ್ಲಿಸಿದ್ದಾರೆ. ಈ ಎಲ್ಲಾ ಅರ್ಜಿಗಳನ್ನೂ ಅನರ್ಹ ಎಂದು ಪರಿಗಣಿಸಲಾಗಿದೆ" ಎಂದು ಅವರು ಮಾಹಿತಿ ನೀಡಿದರು.

ಅನರ್ಹ ಅರ್ಜಿಗಳನ್ನು ಅಧಿಕಾರಿಗಳ ಮಟ್ಟದಲ್ಲೇ ಪರಿಶೀಲನೆ ವೇಳೆ ವಿಲೇವಾರಿ ಮಾಡಬೇಕು. ಇಂತಹ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಪರಿಶೀಲನೆಯೇ ಅಂತಿಮವಲ್ಲ. ಒಂದು ವೇಳೆ ಅಧಿಕಾರಿಗಳ ತಪ್ಪಿನಿಂದ ಅರ್ಹ ಅರ್ಜಿಯನ್ನು ವಿಸರ್ಜಿಸಲಾಗಿದ್ದರೆ ಅಂತಹ ಅರ್ಜಿಗಳನ್ನು ಮತ್ತೆ ಮರು ಪರಿಶೀಲನೆ ಒಳಪಡಿಸಲಾಗುವುದು ಎಂದೂ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+