Breaking; ಬಗರ್ ಹುಕುಂ ಭೂಮಿ ಸಕ್ರಮ, ಮಹತ್ವದ ಆದೇಶ
ಬೆಂಗಳೂರು, ಡಿಸೆಂಬರ್ 13; ನಗರಗಳು ಮತ್ತು ನಗರ ಪುರಸಭೆ ಪರಿಮಿತಿಯೊಳಗೆ ಬಗರ್ ಹುಕುಂ ಭೂಮಿ ಮಂಜೂರು ಮಾಡುವ ಕುರಿತು ಕರ್ನಾಟಕದ ಕಂದಾಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎನ್. ಜಯರಾಮ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿರ್ದಿಷ್ಟಪಡಿಸಿರುವ ಪರಿಮಿತಿಗಳಿಂದ ಅಂತರದೊಳಗೆ ಬರುವ ಭೂಮಿಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಸೂಚನೆ ನೀಡಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94(ಎ)ರನ್ವಯ ವಿಧಾನಸಭಾ ಕ್ಷೇತ್ರವಾರು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗಳನ್ನು ರಚಿಸಿ, ಅವುಗಳ ಮುಖಾಂತರ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 94ಎ, 94ಬಿ ಹಾಗೂ 94ಎ(4)ರಡಿ ಮಂಜೂರು ಮಾಡಲು ಅವಕಾಶವಿರುತ್ತದೆ.

ಅದರಂತೆ, ರಚಿತವಾದ ಸಮಿತಿಗಳು ಕಲಂ 94ಎ(4)ರನ್ವಯ ನಗರಗಳು ಮತ್ತು ನಗರ ಪುರಸಭೆಗಳ ಪರಿಮಿತಿಯೊಳಗೆ ಬರುವ ಪ್ರದೇಶಗಳಲ್ಲಿ ನಿರ್ದಿಷ್ಟಪಡಿಸಿರುವ ಪರಿಮಿತಿಗಳಿಂದ ಅಂತರದೊಳಗೆ ಬರುವ ಭೂಮಿಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
* ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮ, 1976ರ ಅಡಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಂತರ 18 ಕಿ. ಮೀ.
* ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮ, 1976ರ ಉಪಬಂಧಗಳ ಅಡಿಯಲ್ಲಿ ಅನುಕ್ರಮವಾಗಿ ಬರುವ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ- ಧಾರವಾಡ, ಮಂಗಳೂರು ಮತ್ತು ಮೈಸೂರು ನಗರಗಳು ಮತ್ತು ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮ, 1976ರ ಉಪಬಂಧಗಳ ಅಡಿಯಲ್ಲಿ ಬರುವ ಇತರ ನಗರ ಪಾಲಿಕೆಗಳು 10 ಕಿ. ಮೀ.

* ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಉಪಬಂಧಗಳ ಅಡಿಯಲ್ಲಿ ಬರುವ ಎಲ್ಲಾ ನಗರ ಪೌರಸಭೆಗಳು (CMC) 5 ಕಿ. ಮೀ.
* ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಉಪಬಂಧಗಳ ಅಡಿಯಲ್ಲಿನ ಎಲ್ಲಾ ಪೌರಸಭೆಗಳು (TMC) ಮತ್ತು ಪಟ್ಟಣ ಪಂಚಾಯತ್‌ಗಳು 3 ಕಿ. ಮೀ.
ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶವನ್ನು ಕಳಿಸಲಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಅದರ ಸರಹದ್ದಿನಿಂದ ನಿರ್ಬಂಧಿಸಿರುವ ಅಂತರದ ಒಳಗೆ ಇರುವ ಜಮೀನುಗಳನ್ನು ಸಕ್ರಮಗೊಳಿಸುವುದು ಕಾನೂನು ಬಾಹಿರವೆಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ.
ಬಿಬಿಎಂಪಿ/ ನಗರ/ ನಗರ ಪೌರಸಭೆ/ ಪಟ್ಟಣ ಪಂಚಾಯತಿಗಳ ಪರಿಮಿತಿಯಲ್ಲಿ ಬರುವ ಜಮೀನುಗಳನ್ನು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯು ಅಕ್ರಮವಾಗಿ ಮಂಜೂರು ಮಾಡಿದಲ್ಲಿ ಅಂತಹ ಜಮೀನುಗಳನ್ನು ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 108(ಕೆ) ರನ್ವಯ ರದ್ದುಗೊಳಿಸಿ ಒಂದು ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ ಸೂಚನೆ ಕೊಡಲಾಗಿದೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications