"ಡಿಕೆ ಶಿವಕುಮಾರ್‌ಗೆ ರಾಜಲಕ್ಷ್ಮಿ ಯೋಗ; ನ.26ರ ಬಳಿಕ ಸಿಎಂ ಪಟ್ಟ, ಸಿಎಂ ಆದ್ರೂ ಒಂದೂವರೆ ವರ್ಷ ಅಷ್ಟೇ"
ಚಿಕ್ಕಮಗಳೂರು, ನವೆಂಬರ್ 04: ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗ್ತಿದೆ. ರಾಜ್ಯ ಕೈ ಪಾಳಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಕುರಿತು ಜಟಾಪಟಿ ಹೆಚ್ಚಾಗಿದ್ದು, ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಡಿ ಕೆ ಶಿವಕುಮಾರ್ ಅವರು ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿದ್ದು, ಬಿಹಾರ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆಯ ಕ್ರಾಂತಿಯಾಗಲಿದೆ ಎಂದು ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿದೆ. ಈ ಬೆನ್ನಲ್ಲೇ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ಗೆ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ. ಡಿಕೆ ಶಿವಕುಮಾರ್ ಸಿಎಂ ಆದ್ರೂ ಕೇವಲ ಒಂದೂವರೆ ವರ್ಷ ಅಷ್ಟೆ ಅಧಿಕಾರ ಮಾಡೋದು ಅಂತ ಭವಿಷ್ಯ ನುಡಿದಿದ್ದಾರೆ.

ಡಿಕೆ ಶಿವಕುಮಾರ್ ಅವರಿಗೆ ಸಿಎಂ ಯೋಗ ಇದೆ, ಆಗೇ ಆಗ್ತಾರೆ. 2031ರ ವರೆಗೆ ರಾಜನಂತೆ ಇರ್ತಾರೆ. ಏಕೆಂದ್ರೆ ಡಿಕೆ ಶಿವಕುಮಾರ್ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ಈ ಯೋಗ ಎಲ್ಲರಿಗೂ ಇರಲ್ಲ, ಅವರ ಜಾತಕದಲ್ಲಿ ಇದೆ. ಹಾಗಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೇ ಆಗ್ತಾರೆ. ಒಂದೂವರೆ ವರ್ಷದ ಹಿಂದೆಯೇ ಅವರಿಗೆ ಹೇಳಿ ಮಂತ್ರಾಕ್ಷತೆ ಕೊಟ್ಟಿದ್ದೇನೆ. ಅವರಿಗೆ ಮುಖ್ಯಮಂತ್ರಿ ಯೋಗ ಇದೆ, ಅದನ್ನ ಯಾರೂ ತಪ್ಪಿಸಲು ಆಗಲ್ಲ ಎಂದು ವೆಂಕಟೇಶ ಗುರೂಜಿ ಭವಿಷ್ಯ ನುಡಿದಿದ್ದಾರೆ.












Click it and Unblock the Notifications