Suraj Revanna: ಸೂರಜ್ ರೇವಣ್ಣಗೆ ಜಾಮೀನು ಮಂಜೂರು
ಬೆಂಗಳೂರು, ಜುಲೈ 22: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ನಾಳೆ ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಇನ್ನು ಇತ್ತೀಚಿಗಷ್ಟೆ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ( ಜುಲೈ 22) ಇಂದು ಸೋಮವಾರ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಪ್ರತಿ ಎರಡನೇ ಭಾನುವಾರ ತನಿಖಾಧಿಕಾರಿ ಮುಂದೆ ಹಾಜರಾಗಬೇಕು. ಆರು ತಿಂಗಳ ಒಳಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಬೇಕು. ಎರಡು ಲಕ್ಷ ರೂಪಾಯಿ ಹಾಗೂ ಇಬ್ಬರು ಶ್ಯೂರಿಟಿ ಹಾಕಬೇಕು. ಪಾಸ್‌ಪೋರ್ಟ್ ಸರಂಡರ್ ಮಾಡಬೇಕು. ಅರ್ಜಿದಾರರು ಯಾವುದೇ ರೀತಿಯಲ್ಲಿ ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ಆರು ತಿಂಗಳ ಅವಧಿಗೆ ಅಥವಾ ಚಾರ್ಜ್ ಶೀಟ್ ಸಲ್ಲಿಸುವವರೆಗೆ ಅರ್ಜಿದಾರರು ಇದೇ ರೀತಿಯ ಅಪರಾಧವನ್ನು ಮಾಡಬಾರದು ಎಂದು ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.












Click it and Unblock the Notifications