ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಜರಂಗದಳ ಕಾರ್ಯಕರ್ತನ ಹತ್ಯೆ: ಇದು ಪಿತೂರಿ ಎಂದ ಸಿಟಿ ರವಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 21: ಭಾನುವಾರ ಶಿವಮೊಗ್ಗ ಜಿಲ್ಲೆಯಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಬಳಿಕ ಶಿವಮೊಗ್ಗ ಜಿಲ್ಲೆ ಇದೀಗ ಬೂದಿ ಮುಚ್ಚಿದ ಕೆಂಡದತಾಗಿದೆ. ಹಿಜಾಬ್‌ ವಿವಾದಕ್ಕೂ ಈ ಹಿಂದೂ ಕಾರ್ಯಕರ್ತನ ಹತ್ಯೆಗೂ ನಂಟು ಕಲ್ಪಿಸಲಾಗುತ್ತಿದೆ. ಈ ನಡುವೆ ಈ ಬಗ್ಗೆ ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, "ಇದು ಪಿತೂರಿ ಎಂದು ನಾನು ಭಾವಿಸುತ್ತೇನೆ, ಪಿತೂರಿ ನಡೆಸಿಯೇ ಕೊಲೆ ಮಾಡಲಾಗಿದೆ," ಎಂದು ತಿಳಿಸಿದ್ದಾರೆ.

ಈ ಶಿವಮೊಗ್ಗ ಜಿಲ್ಲೆಯಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಬಗ್ಗೆ ಎಎನ್‌ಐಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, "ಬಜರಂಗದಳದ ಕಾರ್ಯಕರ್ತ ಹರ್ಷ ಎಂಬುವವರನ್ನು ನಿನ್ನೆ ಹತ್ಯೆ ಮಾಡಲಾಗಿದೆ. ಇದು ಪಿತೂರಿ ಎಂದು ನಾನು ಭಾವಿಸುತ್ತೇನೆ, ಪಿತೂರಿ ಮಾಡಿತೇ ಹತ್ಯೆ ಮಾಡಲಾಗಿದೆ," ಎಂದು ಹೇಳಿದ್ದಾರೆ.

ಶಿವಮೊಗ್ಗ; ಮತ್ತೆ ಕಲ್ಲು ತೂರಾಟ, ಬಿಗಿ ಪೊಲೀಸ್ ಬಂದೋಬಸ್ತ್ ಶಿವಮೊಗ್ಗ; ಮತ್ತೆ ಕಲ್ಲು ತೂರಾಟ, ಬಿಗಿ ಪೊಲೀಸ್ ಬಂದೋಬಸ್ತ್

"ಈ ವಿಚಾರದಲ್ಲಿ ಗಂಭೀರ ತನಿಖೆಯಾಗಬೇಕು. ಸರಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಿದೆ. ಅಗತ್ಯವಿದ್ದರೆ ಈ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಬೇಕು," ಎಂದು ಕೂಡಾ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮನವಿ ಮಾಡಿದ್ದಾರೆ.

Bajrang Dal Activist Murder in Shivamogga: I Think It’s a Conspiracy, Says CT Ravi

ಹರ್ಷ ಸಹೋದರಿಯನ್ನು ಭೇಟಿಯಾದ ಕರ್ನಾಟಕ ಗೃಹ ಸಚಿವ

ಈ ಘಟನೆಯ ಹಿನ್ನೆಲೆ ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮೃತ ಭಜರಂಗದಳ ಕಾರ್ಯಕರ್ತ ಹರ್ಷನ ಸಹೋದರಿ ಅಶ್ವಿನಿ ಹಾಗೂ ಪೋಷಕರನ್ನು ಭೇಟಿ ಆಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, "ನಾನು (ಹರ್ಷನ) ಪೋಷಕರು ಮತ್ತು ಸಹೋದರಿಯರನ್ನು ಭೇಟಿಯಾದೆ ಮತ್ತು ಅವರನ್ನು ಸಮಾಧಾನಪಡಿಸಿದೆ. ಅವರು ತಮಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. ತಪ್ಪಿತಸ್ಥರನ್ನು ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ. ಈ ಪ್ರಕರಣದಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಈ ಸಮಯದಲ್ಲಿ ನಾವು ಏನನ್ನೂ ಬಹಿರಂಗಪಡಿಸಲು ಬಯಸುವುದಿಲ್ಲ," ಎಂದು ಭಜರಂಗದಳ ಕಾರ್ಯಕರ್ತ ಹರ್ಷನ ಸಾವಿನ ಬಗ್ಗೆ ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಈಗ ಬೂದಿ ಮುಚ್ಚಿದ ಕೆಂಡ: ಪೊಲೀಸರು ನೆಟ್ಟಗಿದ್ದಿದ್ದರೆ ಹರ್ಷ ಉಳಿಯುತ್ತಿದ್ದಶಿವಮೊಗ್ಗ ಈಗ ಬೂದಿ ಮುಚ್ಚಿದ ಕೆಂಡ: ಪೊಲೀಸರು ನೆಟ್ಟಗಿದ್ದಿದ್ದರೆ ಹರ್ಷ ಉಳಿಯುತ್ತಿದ್ದ

"ಬಂಧನಗಳಿಗೆ ಸಂಬಂಧಿಸಿದ ಯಾವುದೇ ಅಂತಿಮ ವರದಿಯನ್ನು ನಾವು ಇನ್ನೂ ಸ್ವೀಕರಿಸಿಲ್ಲ. ಕೆಲವರನ್ನು ವಶಕ್ಕೆ ತೆಗೆದುಕೊಂಡಿದ್ದೇವೆ. ವಿಚಾರಣೆ ನಡೆಯುತ್ತಿದೆ. ಶೀಘ್ರದಲ್ಲೇ ಹತ್ಯೆಗೆ ಸಂಬಂಧಿಸಿದ ಮಾಹಿತಿ ಸಿಗಲಿದೆ, ತನಿಖೆಯ ನಂತರವಷ್ಟೇ ಹೇಳಬಹುದು," ಎಂದು ಕೂಡಾ ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದಿದ್ದೇನು?

ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಜಿಲ್ಲೆಯಲ್ಲಿ ಭಾನುವಾರ ರಾತ್ರಿ 30ರ ಸಮಯಕ್ಕೆ ಭಜರಂಗದಳದ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಬಡಾವಣೆಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು ಕಾರಿನಲ್ಲಿ ಬಂದಿದ್ದ 4 ರಿಂದ 6 ಜನರ ಗುಂಪು, ಬಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದನು. ಕೂಡಲೇ ಹರ್ಷನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದನು.

ಸುದ್ದಿ ತಿಳಿಯುತ್ತಿದ್ದಂತೆ ಸೀಗೆಹಟ್ಟಿ ಬಡಾವಣೆ ಮತ್ತು ಅಕ್ಕಪಕ್ಕದ ಬಡಾವಣೆ ನಿವಾಸಿಗಳು ಜಮಾಯಿಸಿದರು. ರವಿವರ್ಮ ಬೀದಿ, ಕಲರ್ ಪೇಟೆ, ಶಾಮರಾವ್ ಬೀದಿ ಸೀಗೆಹಟ್ಟಿ ಸೇರಿ ವಿವಿಧ ಬಡಾವಣೆಯಲ್ಲಿ 2 ಉದ್ರಿಕ್ತ ಗುಂಪುಗಳ ಮಧ್ಯೆ ಕಲ್ಲು ತೂರಾಟ ನಡೀತು. ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದರು. ಭಜರಂಗ ದಳ ಕಾರ್ಯಕರ್ತನ ಹತ್ಯೆ ಸುದ್ದಿ ಈಗ ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ಶಿವಮೊಗ್ಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. (ಒನ್‌ಇಂಡಿಯಾ ಸುದ್ದಿ)

English summary
Bajrang dal activist murder in Shivamogga: I Think It’s a Conspiracy, He has been murdered under a conspiracy, says BJP National Gen secretary CT Ravi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X