ಕರ್ನಾಟಕದಲ್ಲಿಯೂ ಆನ್ ಲೈನ್ ಜೂಜು ನಿಷೇಧ?
ಬೆಂಗಳೂರು, ಡಿಸೆಂಬರ್ 04: ಆನ್ ಲೈನ್ ಮೂಲಕ ನಡೆಯುವ ಜೂಜು ಮತ್ತು ಬೆಟ್ಟಿಂಗ್ ನಿಷೇಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ. ಜನವರಿ 12ರೊಳಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ದಾವಣೆಗೆರೆ ನಿವಾಸಿ ಡಿ. ಶಾರದಾ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ಆನ್‌ಲೈನ್ ಜೂಜು ಮುತ್ತು ಬೆಟ್ಟಿಂಗ್ ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀರ ಅರ್ಜಿಯ ವಿಚಾರಣೆ ನಡೆಸಿತು. ಸರ್ಕಾರಕ್ಕೆ ನೋಟಿಸ್ ನೀಡಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು. ಆನ್‌ಲೈನ್ ಜೂಜು, ಬೆಟ್ಟಿಂಗ್ ನಿಯಂತ್ರಿಸಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಗುಜರಾತ್ ಮತ್ತು ತಮಿಳುನಾಡು ರಾಜ್ಯಗಳ ಹೈಕೋರ್ಟ್ ಆನ್‌ಲೈನ್ ಜೂಜು ನಿಯಂತ್ರಿಸಲು ಅಧ್ಯಯನ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ಕೊಟ್ಟಿವೆ. ಕರ್ನಾಟಕದಲ್ಲಿ ಇದರ ನಿಯಂತ್ರಣಕ್ಕೆ ಮಾರ್ಗಸೂಚಿಗಳಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ತಮಿಳುನಾಡು ಸರ್ಕಾರ ಆನ್ ಲೈನ್ ಜೂಜನ್ನು ಈಗಾಗಲೇ ನಿಷೇಧಿಸಿದೆ. ಆಂಧ್ರ ಪ್ರದೇಶ ಸರ್ಕಾರ ಜೂಜನ್ನು ನಿಯಂತ್ರಣ ಮಾಡಲು ಆಂಧ್ರ ಪ್ರದೇಶ ಗೇಮಿಂಗ್ ಬಿಲ್ 2020ಅನ್ನು ವಿಧಾನಸಭೆಯಲ್ಲಿ ಮಂಡಿಸಿ, ಅಂಗೀಕಾರ ಪಡೆದಿದೆ.
ಆನ್ ಲೈನ್ ಜೂಜಿನಲ್ಲಿ ತೊಡಗಿದ ಅಪರಾಧಿಗಳಿಗೆ 5 ಸಾವಿರ ದಂಡ ಮತ್ತು 1 ವರ್ಷದ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅಪರಾಧ ಮರುಕಳಿಸಿದರೆ 10 ಸಾವಿರ ದಂಡ ಮತ್ತು ಎರಡು ವರ್ಷದ ಜೈಲು ಶಿಕ್ಷೆ ಇದ್ದು, ಇದು ಜಾಮೀನು ರಹಿತ ಅಪರಾಧವಾಗಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications