ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿಯೂ ಆನ್ ಲೈನ್ ಜೂಜು ನಿಷೇಧ?

|
Google Oneindia Kannada News

ಬೆಂಗಳೂರು, ಡಿಸೆಂಬರ್ 04: ಆನ್‌ ಲೈನ್ ಮೂಲಕ ನಡೆಯುವ ಜೂಜು ಮತ್ತು ಬೆಟ್ಟಿಂಗ್ ನಿಷೇಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ. ಜನವರಿ 12ರೊಳಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

ದಾವಣೆಗೆರೆ ನಿವಾಸಿ ಡಿ. ಶಾರದಾ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ಆನ್‌ಲೈನ್ ಜೂಜು ಮುತ್ತು ಬೆಟ್ಟಿಂಗ್ ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಆನ್ಲೈನ್ ಜೂಜು ನಿಷೇಧಕ್ಕೆ ಮುಂದಾದ ತಮಿಳುನಾಡು ಆನ್ಲೈನ್ ಜೂಜು ನಿಷೇಧಕ್ಕೆ ಮುಂದಾದ ತಮಿಳುನಾಡು

ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀರ ಅರ್ಜಿಯ ವಿಚಾರಣೆ ನಡೆಸಿತು. ಸರ್ಕಾರಕ್ಕೆ ನೋಟಿಸ್ ನೀಡಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು. ಆನ್‌ಲೈನ್ ಜೂಜು, ಬೆಟ್ಟಿಂಗ್ ನಿಯಂತ್ರಿಸಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಬೆಂಗಳೂರು; ಜೂಜು ಅಡ್ಡೆ ಮೇಲೆ ದಾಳಿ, ಇನ್ಸ್‌ಪೆಕ್ಟರ್ ಅಮಾನತು ಬೆಂಗಳೂರು; ಜೂಜು ಅಡ್ಡೆ ಮೇಲೆ ದಾಳಿ, ಇನ್ಸ್‌ಪೆಕ್ಟರ್ ಅಮಾನತು

Ban Of Online Gambling High Court Notice To Government

ಗುಜರಾತ್ ಮತ್ತು ತಮಿಳುನಾಡು ರಾಜ್ಯಗಳ ಹೈಕೋರ್ಟ್ ಆನ್‌ಲೈನ್ ಜೂಜು ನಿಯಂತ್ರಿಸಲು ಅಧ್ಯಯನ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ಕೊಟ್ಟಿವೆ. ಕರ್ನಾಟಕದಲ್ಲಿ ಇದರ ನಿಯಂತ್ರಣಕ್ಕೆ ಮಾರ್ಗಸೂಚಿಗಳಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಆಂಧ್ರದಲ್ಲಿ ಆನ್‌ಲೈನ್ ಜೂಜು ನಿಷೇಧ, ಜಗನ್ ಸರ್ಕಾರದ ಮಹತ್ವದ ತೀರ್ಮಾನ: ರಾಜ್ಯದಲ್ಲಿ ಯಾವಾಗ?ಆಂಧ್ರದಲ್ಲಿ ಆನ್‌ಲೈನ್ ಜೂಜು ನಿಷೇಧ, ಜಗನ್ ಸರ್ಕಾರದ ಮಹತ್ವದ ತೀರ್ಮಾನ: ರಾಜ್ಯದಲ್ಲಿ ಯಾವಾಗ?

ತಮಿಳುನಾಡು ಸರ್ಕಾರ ಆನ್‌ ಲೈನ್ ಜೂಜನ್ನು ಈಗಾಗಲೇ ನಿಷೇಧಿಸಿದೆ. ಆಂಧ್ರ ಪ್ರದೇಶ ಸರ್ಕಾರ ಜೂಜನ್ನು ನಿಯಂತ್ರಣ ಮಾಡಲು ಆಂಧ್ರ ಪ್ರದೇಶ ಗೇಮಿಂಗ್ ಬಿಲ್ 2020ಅನ್ನು ವಿಧಾನಸಭೆಯಲ್ಲಿ ಮಂಡಿಸಿ, ಅಂಗೀಕಾರ ಪಡೆದಿದೆ.

Recommended Video

ಶಿವಮೊಗ್ಗದಲ್ಲಿ IGP Ravi ಅವರಿಗೆ ಚಾಕು ತೋರಿಸಿದ ಯುವಕ | Oneindia Kannada

ಆನ್‌ ಲೈನ್ ಜೂಜಿನಲ್ಲಿ ತೊಡಗಿದ ಅಪರಾಧಿಗಳಿಗೆ 5 ಸಾವಿರ ದಂಡ ಮತ್ತು 1 ವರ್ಷದ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅಪರಾಧ ಮರುಕಳಿಸಿದರೆ 10 ಸಾವಿರ ದಂಡ ಮತ್ತು ಎರಡು ವರ್ಷದ ಜೈಲು ಶಿಕ್ಷೆ ಇದ್ದು, ಇದು ಜಾಮೀನು ರಹಿತ ಅಪರಾಧವಾಗಿದೆ.

English summary
PIL field in Karnataka high court seeking ban of online games and gambling. Court issued notice to government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X