Kabab Colour Ban: ಖಾದ್ಯಗಳ ಕೃತಕ ಬಣ್ಣಕ್ಕೆ ನಿಷೇಧ: ಕಬಾಬ್‌ಗೆ ಬಣ್ಣ ಹಾಕಿದ್ರೆ ; ಕಂಬಿ ಎಣಿಸುವುದು ಗ್ಯಾರಂಟಿ!

ಬೆಂಗಳೂರು, ಜೂನ್‌ 24: ಕರ್ನಾಟಕದಲ್ಲಿ ಮಕ್ಕಳ ಜನಪ್ರಿಯ ಆಹಾರ ಪದಾರ್ಥಗಳ ಕಾಟನ್ ಕ್ಯಾಂಡಿ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರೋಡಮೈನ್‌-ಬಿ ಅಥವಾ ಆರ್‌ಎಚ್‌ಬಿ ಎಂಬ ರಾಸಾಯನಿಕವು ಆಹಾರದ ಮೂಲಕ ದೇಹ ಸೇರಿದರೆ ಕ್ಯಾನ್ಸರ್‌ ಕಾಯಿಲೆಗೆ ತುತ್ತಾಗಬೇಕಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಹೀಗಾಗಿ ಬಾಂಬೆ ಮಿಠಾಯಿ ಬ್ಯಾನ್‌ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಕಬಾಬ್‌ ಗೆ ಹಾಕುವ ಕೃತಕ ಬಣ್ಣವನ್ನು ಸಹ ಬ್ಯಾನ್‌ ಮಾಡಿ ಆದೇಶ ಹೊರಡಿಸಿದೆ.

ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬಹುಜನರು ಇಷ್ಟ ಪಡುವ ಕಬಾಬ್‌ ಗೆ ಯಾವುದೇ ರೀತಿಯ ಕೃತಕ ಬಣ್ಣ ಬಳಸುವುದನ್ನ ನಿಷೇದಿಸಿ ಸುತ್ತೋಲೆ ಹೊರಡಿಸಲಾಗುವುದು. ಬೀದಿ ಬದಿಯ ತಳ್ಳ ಗಾಡಿ ವ್ಯಾಪಾರಿಗಳಿಂದ ಹಿಡಿದು ಪಂಚ ತಾರಾ ಹೋಟೋಲ್‌ ವರೆಗೂ ಆದೇಶ ಅನ್ವಯವಾಗುತ್ತದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಆಹಾರ ಪದಾರ್ಥಗಳನ್ನು ತಯಾರಿಸಿದರೆ ಕಠಣ ಕ್ರಮ ತೆಗೆದುಕೊಳ್ಳಲಾಗುವುದು.

Ban On Artificial Coloring Of Kebab Dishes

ಸರ್ಕಾರದ ಆದೇಶದಲ್ಲಿ ಏನಿದೆ?

ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳಲ್ಲಿ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ/ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ.

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ - 07 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 01) ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದ್ದು, The Food Safety and Standards Act, 2006 ರ ನಿಯಮ 3(1)(zz)(viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ.

The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ರನ್ವಯ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡಬಹುದಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ The Food Safety and Standards Act, 2006 2 2 3 (1)(zz)(viii) The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ಗಳಡಿ ಅವಕಾಶವಿಲ್ಲದಿರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಆದೇಶಿಸಿದೆ.

ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+