Congress Pranalike 2023: ಭಜರಂಗದಳ,ಪಿಎಫ್ ಐ ಸೇರಿದಂತೆ ಮಧ್ಯ ದ್ವೇಷ ಬಿತ್ತುವ ಸಂಘಟನೆಗಳ ನಿಷೇಧ: ಕೈ ಭರವಸೆ!
ಬೆಂಗಳೂರು,ಮೇ2: ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಚಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ.
ಮಂಗಳವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ 2023 ರ ಕಾಂಗ್ರೆಸ್ ಚುನಾವಣೆಯನ್ನ ಬಿಡುಗಡೆ ಮಾಡಿದ್ದು, ಭರಪೂರ ಭರವಸೆಯನ್ನ ನೀಡಿದೆ. ಮತೀಯ ದ್ವೇಷ ಬಿತ್ತುವ ಸಂಘಟನೆ ಹಾಗೂ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದಲ್ಲದೆ, ಅಂತಹ ಸಂಘಟನೆಗಳ ವಿರುದ್ಧ ನಿಷೇಧ ಸೇರಿದಂತೆ ಬಲವಾದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗ ಭಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಬಿಡುಗಡೆ ಮಾಡಿದ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದೆ.
ಇನ್ನೂ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಮಲ್ಲಿಕಾರ್ಜುನ್ ಖರ್ಗೆ ಮಾತನಾಡಿಪರಮೇಶ್ವರ್ ಅವರ ನೇತೃತ್ವದ ಸಮಿತಿ ಅತ್ಯುತ್ತಮ ಪ್ರಣಾಳಿಕೆ ತಯಾರು ಮಾಡಿದ್ದು, ಇದು ಜನರಿಗೆ ನಿರಾಳತೆ ನೀಡಲಿದೆ. ಕಾಂಗ್ರೆಸ್ ನುಡಿದಂತೆ ನಡೆಯುತ್ತಾ ಬಂದಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿದ್ದಾಗ ನಾವು 165 ಭರವಸೆಗಳನ್ನು ನೀಡಿ 158 ಭರವಸೆ ಈಡೇರಿಸಿದ್ದೇವೆ. ಆದರೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ತಮ್ಮ ಪ್ರಣಾಳಿಕೆ ಜಾರಿ ಮಾಡಲು ಪ್ರಾಮಾಣಿಕತೆ ತೋರಲಿಲ್ಲ. ಈಗ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.
ನಮ್ಮ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ 200 ಯುನಿಟ್ ವಿದ್ಯುತ್ ಉಚಿತ, ಯುವನಿಧಿ ಮೂಲಕ ಪದವೀಧರರಿಗೆ 3000 ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ಮಾಸಿಕ ನಿರುದ್ಯೋಗ ಭತ್ಯೆ. ರಾಜ್ಯದಲ್ಲಿ 2.50 ಲಕ್ಷ ಸರ್ಕಾರಿ ಹುದ್ದೆ ಹಾಗೂ ಕೇಂದ್ರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇದ್ದರೂ ತುಂಬುತ್ತಿಲ್ಲ. ಹೀಗಾಗಿ ನಿರುದ್ಯೋಗ ಭತ್ಯೆ ನೀಡಲು ತೀರ್ಮಾನಿಸಿದ್ದೇವೆ. ಇನ್ನು ಅನ್ನಭಾಗ್ಯ ಯೋಜನೆ ಮೂಲಕ ಪ್ರತಿ ಬಡ ಕುಟುಂಬ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಉಚಿತ.
ಗೃಹಲಕ್ಷ್ಮಿ ಯೋಜನೆ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ಪ್ರತಿ ತಿಂಗಳು ಮನೆಯೊಡತಿಗೆ 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಪ್ರೋತ್ಸಾಹ ಧನ. ಇನ್ನು ಶಕ್ತಿ ಯೋಜನೆ ಮೂಲಕ ರಾಜ್ಯದ ಮಹಿಳೆಯರಿಗೆ ಸಾರ್ವಜನಿಕ ಬಸ್ ಗಳಲ್ಲಿ ಉಚಿತ ಪ್ರಯಾಣ. ಇದನ್ನು ನಾವು ಖಂಡಿತವಾಗಿ ಜಾರಿ ಮಾಡುತ್ತೇವೆ ಎಂದು ನಾನು ಗ್ಯಾರಂಟಿ ನೀಡುತ್ತೇನೆ. ಇದನ್ನು ಮೊದಲ ಸಚಿವ ಸಂಪುಟದಲ್ಲಿ ಜಾರಿ ಮಾಡಲಾಗುವುದು.
ಇದರ ಜತೆಗೆ ನಮ್ಮ ಸರ್ಕಾರ ಇದ್ದಾಗ ಅನೇಕ ಕಲ್ಯಾಣಕಾರಿ ಯೋಜನೆ ಕೈಗೊಂಡಿದ್ದೇವೆ. SCP TSP ಕಾಯ್ದೆ ಮಾಡಿದ್ದು, ಬಿಜೆಪಿ ಸರ್ಕಾರ ಅದನ್ನು ಸರಿಯಾಗಿ ಪಾಲಿಸಿಲ್ಲ. ನಮ್ಮ ಸರ್ಕಾರ ಇದನ್ನು ಪರಿಣಾಮಕಾರಿಯಾಗಿ ಜಾರಿ ಮಾಡುತ್ತೇವೆ. ನಮ್ಮ ಈ ಯೋಜನೆಗಳನ್ನು ಜನರು ಮೆಚ್ಚಿದ್ದಾರೆ.
ನನಗೆ ಬೇರೆ ರಾಜ್ಯಗಳಿಂದ ದೂರವಾಣಿ ಕರೆ ಹಾಗೂ ಪತ್ರ ಬರುತ್ತಿದ್ದು, ನಿಮ್ಮ ಗ್ಯಾರಂಟಿ ಕಾರ್ಡ್ ಹೆಚ್ಚು ಪರಿಣಾಮಕಾರಿಯಾಗಿದ್ದು, ಇದರ ಬಗ್ಗೆ ಹೆಚ್ಚು ಪ್ರಚಾರ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಜನ. ನಾವು ಟೊಳ್ಳು ಭರವಸೆ ನೀಡುವುದಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂರುವುದು ನಿಶ್ಚಿತ, ನಮ್ಮ 150 ಕ್ಷೇತ್ರಗಳ ಗುರಿ ತಲುಪುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications