Dharmasthala Case: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಬಂದ್‌ಗೆ ಕರೆ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿರುವ ಬಗ್ಗೆ ಅನಾಮಿಕ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ರಾಜ್ಯ ಸರ್ಕಾರವು ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ. ವಿಶೇಷ ತನಿಖಾ ತಂಡವು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಮುಸುಕುಧಾರಿ ದೂರುದಾರನೊಂದಿಗೆ ಮಹಜರು ಕಾರ್ಯವನ್ನು ನಡೆಸಿದೆ. ದೂರುದಾರ ಹೂತು ಹಾಕಿರುವ ಶಂಕಿತ ಸ್ಥಳಗಳನ್ನು ಪರಿಶೀಲನೆ ನಡೆಸಲಾಗಿದ್ದು, ಕೆಲ ಸ್ಥಳಗಳಲ್ಲಿ ಅಸ್ತಿಪಂಜರ ಸಿಕ್ಕಿದೆ. ಇನ್ನೂ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಇದೀಗ ಬಂದ್ ಗೆ ಕರೆ ನೀಡಲಾಗಿದೆ.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಇಂದು ವಿವಿಧ ಸಂಘಟನೆಗಳು ಮಂಡ್ಯ ಜಿಲ್ಲೆಯ ಮದ್ದೂರು ಬಂದ್ ಗೆ ಕರೆ ನೀಡಿವೆ.ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ, ಹಿಂದೂ ರಕ್ಷಣಾ ಸಮಿತಿಯಿಂದ ಮದ್ದೂರು ಬಂದ್ ಗೆ ಕರೆ ನೀಡಲಾಗಿದ್ದು, ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್ ಗೆ ವ್ಯಾಪಕ ಬೆಂಬಲ ಸೂಚಿಸಿದ್ದಾರೆ. ನರಸಿಂಹಸ್ವಾಮಿ ದೇವಸ್ಥಾನದಿಂದ ಹಿಂದೂ ಸಂಘಟನೆಗಳ ಬೃಹತ್ ರ್ಯಾಲಿ ನಡೆಯಲಿದೆ. ಮಂಜುನಾಥ ಸ್ವಾಮಿಯ ಪವಿತ್ರಾ ಕ್ಷೇತ್ರವಾದ ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುತ್ತಿರುವವರನ್ನು ಗಡಿಪಾರು ಮಾಡಬೇಕು. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ದೂರು ಬಂದ್ ಮಾಡಲಾಗಿದೆ. ಇನ್ನು ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.

ಧರ್ಮಸ್ಥಳ ಬಗ್ಗೆ RSS,BJP ನಿಲುವು ಭಿನ್ನ: ಬೇಳೂರು ಗೋಪಾಲಕೃಷ್ಣ
ಧರ್ಮಸ್ಥಳ ವಿಚಾರದಲ್ಲಿ ಆರ್ ಎಸ್ ಎಸ್, ಬಿಜೆಪಿ ನಿಲುವು ಭಿನ್ನ ಇರಬಹುದು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಧರ್ಮಸ್ಥಳ ಇಂದಿನದಲ್ಲ, 800 ವರ್ಷಗಳ ಇತಿಹಾಸ ಇರುವ ಕ್ಷೇತ್ರವಾಗಿದೆ. ಇತ್ತೀಚಿನ ಕೆಲವು ಘಟನೆಗಳಿಂದ ದುಷ್ಟ ಶಕ್ತಿಗಳು ಕ್ಷೇತ್ರದ ಮೇಲೆ ಅಟ್ಯಾಕ್ ಮಾಡುತ್ತಿದ್ದಾರೆ. ಹುಂಡಿ ಹಣ ಕೇಳುವ ಅಧಿಕಾರ ಯಾರಿಗೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೀರೇಂದ್ರ ಹೆಗಡೆ ಅವರು ಸ್ಪಾಪನೆ ಮಾಡಿರುವ ಕ್ಷೇತ್ರ ಅದು.ಧರ್ಮಸ್ಥಳ ಕ್ಷೇತ್ರಕ್ಕೆ ಹಾನಿ ಮಾಡುವುದನ್ನು ನಾವು ಸಹಿಸಲ್ಲ. ಹುಂಡಿ ಹಣ ಅದರ ಅಭಿವೃದ್ಧಿ ಬಳಸುತ್ತಿದ್ದಾರೆ. ಸಿಂಗದೂರು ದೇವಸ್ಥಾನವನ್ನು ಪಾಪಗಳ ಸರ್ಕಾರಕ್ಕೆ ಬರದುಕೊಟ್ರು. ಯಡಿಯೂರಪ್ಪ ಸರ್ಕಾರ ಸಿಂಗದೂರು ದೇವಸ್ಥಾನವನ್ನು ಸರ್ಕಾರಕ್ಕೆ ಬರೆದುಕೊಟ್ಟಾಗ ಯಾಕೆ ಮಾತನಾಡಲಿಲ್ಲ? ಎಂದು ಪ್ರಶ್ನಿಸಿದರು.
ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರು ಸುಮ್ಮನೆ ಕೂತಿಲ್ಲ. ಅವರು ಶಿಕ್ಷಣ ಸಂಸ್ಥೆಗಳನ್ನು ಮಾಡಿ ಜನರ ಜೊತೆ ಇದ್ದಾರೆ. ಧರ್ಮಸ್ಥಳಕ್ಕೆ ನಾವೂ ಹೋಗುತ್ತೇವೆ. ಕ್ಷೇತ್ರದ ಜನರ ಜೊತೆ ನಾವೂ ಧರ್ಮಸ್ಥಳಕ್ಕೆ ಹೋಗುತ್ತವೆ. ಬಿಜೆಪಿಯವರು ಧರ್ಮಸ್ಥಳ ಚಲೋ ಮಾಡಿದ್ದು ಡ್ರಾಮಾ ಎಂದರು. ಬಿಜೆಪಿಯವರು ಎಸ್ ಐ ಟಿ ತನಿಖೆಯನ್ನು ಸ್ವಾಗತ ಮಾಡಿ ನಂತರ ಈಗ ವಿರೋಧ ಮಾಡುವುದು ಸರಿಯಲ್ಲ. ಯಾರೋ ದುಷ್ಟ ಶಕ್ತಿಗಳು ಮಾಡಿದ್ದನ್ನು ಸರ್ಕಾರದ ಮೇಲೆ ಹಾಕೋದು ಸರಿಯಲ್ಲ. ಬಿಜೆಪಿಯಿಂದ ಧರ್ಮ ಸಂರಕ್ಷಣೆ ಅಭಿಯಾನ ಬರೀ ನಾಟಕ. ಯಾರೇ ಹಿಂದೂಗಳೂ ಸಾವಿನಪ್ಪಿದರೂ, ಕೊಲೆಯಾದರೂ ಅದನ್ನು ಹಿಂದುತ್ವ ಅಂತ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಆರ್ ಎಸ್ ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ಈಗ ಎಲ್ಲಿ ಹೋಗಿದ್ದಾರೆ? ಅವರು ಹಿಂದುತ್ವ ವಿಚಾರ ಇಟ್ಟುಕೊಂಡು ಮತ್ತೊಮ್ಮೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ RSS ಹಾಗೂ ಬಿಜೆಪಿ ನಿಲುವು ಭಿನ್ನವಾಗಿರಬಹುದು. ಧರ್ಮಸ್ಥಳದ ಪರವಾಗಿ ಬರೀ ವಿಜಯೇಂದ್ರ, ಅಶೋಕ್. ಸಿಟಿ ರವಿ ಅಷ್ಟೇ ಮಾತನಾಡುತ್ತಿದ್ದಾರೆ ಎಂದರು.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications