ಹುಲಿ ಸಾವು, ಕಾಡಾನೆ ದಂತ ಮಾಯ! ವಾರದಲ್ಲಿ ತನಿಖಾ ವರದಿ ಸಲ್ಲಿಸಿ: ರಾಮಲಿಂಗಾ ರೆಡ್ಡಿ ಖಡಕ್ ನಿರ್ದೇಶನ

ಬೆಂಗಳೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಹುಲಿ ಉರುಳಿಗೆ ಸಿಲುಕಿ ಮೃತಪಟ್ಟಿತ್ತು. ಕರಡಿಕಲ್ಲು ಗುಡ್ಡ ಪ್ರದೇಶದಲ್ಲಿ ಕಾಡಾನೆಯ ದಂತ ನಾಪತ್ತೆಯಾದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಅರಣ್ಯ ಅಧಿಕಾರಿಗಳ ಕರ್ತವ್ಯಲೋಪ ಪರಿಶೀಲಿಸಿ ವಾರದೊಳಗೆ ವಿವರವಾದ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಕಟ್ಟುನಿಟ್ಟಿನ ಮಹತ್ವದ ನಿರ್ದೇಶನ ನೀಡಿದ್ದಾರೆ. ಅಧಿಕಾರಿಗಳ ಲೋಪ ಪತ್ತೆಯಾದಲ್ಲಿ ಕಠಿಣ ಕ್ರಮ ಜರುಗಿಸುವ ಸಾಧ್ಯತೆ ಇದೆ.

ಹುಲಿ ಸಾವು, ಮೃತ ಕಾಡಾನೆ ದಂತ ನಾಪತ್ತೆ ಪ್ರಕರಣಗಳು ಅತ್ಯಂತ ಗಂಭೀರ ಮತ್ತು ಆತಂಕಕಾರಿ ಸಂಗತಿಗಳಾಗಿವೆ. ಹುಲಿ ಸಂರಕ್ಷಿತ ಪ್ರದೇಶದ ಆಳವಾದ ಅರಣ್ಯ ಭಾಗದಲ್ಲಿಯೇ ಇಂತಹ ಘಟನೆಗಳು ನಡೆದಿರುವುದು ಅರಣ್ಯ ಇಲಾಖೆಯ ಗಸ್ತು ವ್ಯವಸ್ಥೆ, ಮೇಲ್ವಿಚಾರಣೆ ಮತ್ತು ವನ್ಯಜೀವಿಗಳ ರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

Bandipur Tiger Death dp

ವಿವಿಧ ಅನುಮಾನ, ಪ್ರಶ್ನೆಗಳಿಗೆ ಉತ್ತರ ಕೇಳಿದ ಸಚಿವ!

ಅರಣ್ಯ ಪ್ರದೇಶದಲ್ಲಿ ಕಳ್ಳಬೇಟೆಗಾರರು ಪ್ರವೇಶಿಸಿ ಇಂತಹ ಕೃತ್ಯಗಳನ್ನು ಎಸಗಲು ಹೇಗೆ ಸಾಧ್ಯವಾಯಿತು? ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ಸಮರ್ಪಕವಾಗಿ ನಿರ್ವಹಿಸಿದ್ದಾರೆಯೇ? ಅರಣ್ಯ ಗಸ್ತು ಹಾಗೂ ನಿಗಾ ವ್ಯವಸ್ಥೆಯಲ್ಲಿ ಲೋಪಗಳಿವೆಯೇ? ಇಂತಹ ಘಟನೆಗಳನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿತ್ತೇ? ಎಂಬುದಕ್ಕೆ ಉತ್ತರ ನೀಡುವಂತೆ ಕೇಳಿದ್ದಾರೆ.

ಅಧಿಕಾರಿಗಳಿಂದ ನಿರ್ಲಕ್ಷ್ಯ ಉಂಟಾದಲ್ಲಿ ಸಹಿಸುವುದಿಲ್ಲ. ಅರಣ್ಯ ಪ್ರದೇಶಗಳಲ್ಲಿ ಕಳ್ಳಬೇಟೆ ಮತ್ತು ವನ್ಯಜೀವಿಗಳ ಅಂಗಾಂಗಗಳ ಅಕ್ರಮ ಸಾಗಣೆ ತಡೆ ಜವಾಬ್ದಾರಿ ಅರಣ್ಯ ಇಲಾಖೆಯ ಮೇಲಿರುತ್ತದೆ. ಇದೆಲ್ಲ ಗಮನಿಸಿ ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶಿಸಿದ್ದಾರೆ.

ವೈಜ್ಞಾನಿಕ ಸಮಗ್ರ ತನಿಖೆ

ಹುಲಿ ಸಾವಿನ ಹಿಂದಿನ ನೈಜ ಕಾರಣಗಳು, ಉರುಳನ್ನು ಅರಣ್ಯ ಪ್ರದೇಶದಲ್ಲಿ ಅಳವಡಿಸಿದವರು ಯಾರು?, ಕಾಡಾನೆಯ ದಂತಗಳು ಹೇಗೆ ನಾಪತ್ತೆಯಾಗಿವೆ. ಇದರ ಹಿಂದಿರುವವರು ಯಾರು, ಕೈವಾಡ ಕುರಿತು ವೈಜ್ಞಾನಿಕ ಮತ್ತು ಸಾಕ್ಷ್ಯಾಧಾರಿತ ತನಿಖೆ ನಡೆಸಬೇಕು. ಎರಡು ಘಟನೆಗಳ ಮಧ್ಯ ಸಂಬಂಧ ಇದಿಯಾ. ಪ್ರಾಣಿಗಳ ಮರಣೋತ್ತರ ಪರೀಕ್ಷೆ, ಪ್ರಯೋಗಾಲಯ ಪರೀಕ್ಷೆ ಹಾಗೂ ಇತರ ಸಂಬಂಧಿತ ವರದಿಯನ್ನು ತನಿಖೆಯಲ್ಲಿ ಪರಿಗಣಿಸಬೇಕು ಎಂದು ಹೇಳಿದರು.

ಘಟನಾ ಸ್ಥಳ ಖುದ್ದು ಪರಿಶೀಲಿಸಿ, ಎಲ್ಲ ಸಾಕ್ಷ್ಯಗಳನ್ನು ಪರಿಶೀಲಿಸಬೇಕು. ಆರೋಪಿಗಳಿಗೆ ತಪ್ಪಿಸಿಕೊಳ್ಳದಂತೆ ಎಚ್ಚರ ವಹಿಸಬೇಕು. ವನ್ಯಜೀವಿಗಳ ಸಂರಕ್ಷಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಸಹಿಸುವುದಿಲ್ಲ. ಕಳ್ಳಬೇಟೆ ಮತ್ತು ವನ್ಯಜೀವಿಗಳ ಅಂಗಾಂಗಗಳ ಅಕ್ರಮ ಸಾಗಣೆ ಕಂಡು ಬಂದಲ್ಲಿ ತಕ್ಷಣ ಕ್ರಮ ಜರುಗಿಸುವಂತೆ ತಾಕೀತು ಮಾಡಿದ್ದಾರೆ.

ಅಧಿಕಾರಿಗಳ ಕರ್ತವ್ಯ ಲೋಪ ಪರಿಶೀಲನೆ

ಸಂಬಂಧಪಟ್ಟ ಅರಣ್ಯ ವಲಯಾಧಿಕಾರಿಗಳು (Range Forest Officers), ಉಪ ವಲಯ ಅರಣ್ಯಾಧಿಕಾರಿಗಳು (DRFOs), ಬೀಟ್ ಸಿಬ್ಬಂದಿ ಹಾಗೂ ಮೇಲ್ವಿಚಾರಣಾ ಅಧಿಕಾರಿಗಳು ತಮ್ಮ ಕರ್ತವ್ಯ ಸಮರ್ಪಕವಾಗಿ ನಿರ್ವಹಿಸಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ಕರ್ತವ್ಯ ಲೋಪ ನಿಜವಾದಲ್ಲಿ ಕಾನೂನಿನಡಿ ಸೂಕ್ತ ಕ್ರಮ ಜರುಗಿಸಬೇಕೆಂದರು.

ಎಲ್ಲಾ DCF, ACFಗಳಿಂದ ಕ್ಷೇತ್ರ ಪರಿಶೀಲನೆ ಕಡ್ಡಾಯ

ಇಂದಿನಿಂದಲೇ ರಾಜ್ಯದ ಎಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (DCFಗಳು) ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು (ACFಗಳು) ತಮ್ಮ ತಮ್ಮ ವ್ಯಾಪ್ತಿಯ ಅರಣ್ಯ ವಲಯಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ವರದಿಯನ್ನು ತರಿಸಿಕೊಂಡು ಕಚೇರಿಯಲ್ಲಿ ಕೂರುವ ಬದಲು ಸ್ಥಳದಲ್ಲಿಯೇ ಅರಣ್ಯ ಪರಿಸ್ಥಿತಿ ಪರಿಶೀಲಿಸುವುದು ಕಡ್ಡಾಯ. ಗಸ್ತು ವ್ಯವಸ್ಥೆ, ಸಿಬ್ಬಂದಿಯ ಕರ್ತವ್ಯ ನಿರ್ವಹಣೆ, ವನ್ಯಜೀವಿಗಳ (ವಿಶೇಷವಾಗಿ ಹುಲಿ, ಆನೆ ಇತರ ಪ್ರಾಣಿಗಳ ಸ್ಥಳ) ಸುರಕ್ಷತೆ ಹಾಗೂ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇರಿಸಬೇಕು. ನಿಯಮಿತ ಪರಿಶೀಲನೆ ವೇಳೆ ಲೋಪಗಳಿದ್ದಲ್ಲಿ ಸರಿಪಡಿಸಬೇಕು. ಹಿರಿಯ ಅಧಿಕಾರಿಗಳು ಮೇಲ್ವಿಚಾರಣೆಯಲ್ಲಿ ನಿರ್ಲಕ್ಷ್ಯ ತೋರಬಾರದು. ಇದೆಲ್ಲ ಚುಟುವಟಿಕೆಗಳ ದಾಖಲೆ ನಿರ್ವಹಿಸಬೇಕೆಂದು ಎಚ್ಚರಿಸಿದರು.

ಭದ್ರತಾ ವ್ಯವಸ್ಥೆ ಬಲಪಡಿಸಿ: ಒಂದು ವಾರದೊಳಗೆ ಸಮಗ್ರ ವರದಿ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಸೇರಿದಂತೆ ರಾಜ್ಯದ ಇತರ ಪ್ರಮುಖ ಅರಣ್ಯಪ್ರದೇಶಗಳಲ್ಲಿಯೂ ಗಸ್ತು ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು. ಗಸ್ತು ತಂಡ ಬಲಪಡಿಸಿ, ಸೂಕ್ತ ಸಿಬ್ಬಂದಿ ನಿಯೋಜಿಸಿ.

ಈ ಮೇಲಿನ ಎಲ್ಲಾ ಅಂಶಗಳನ್ನು ಒಳಗೊಂಡಂತೆ, ವಿಶೇಷ ತನಿಖಾ ತಂಡದ ರಚನೆಯಾಗಿದೆ. ತನಿಖೆಯ ಪ್ರಗತಿ, ಘಟನೆಗಳ ಸಂಭವನೀಯ ಕಾರಣಗಳು, ಸಂಗ್ರಹಿಸಿದ ಸಾಕ್ಷ್ಯಗಳು, ಕಳ್ಳಬೇಟೆಗಾರರ ಮಾಹಿತಿ, ಅಧಿಕಾರಿ-ಸಿಬ್ಬಂದಿ ಕರ್ತವ್ಯ ನಿರ್ವಹಣೆ, ಲೋಪಗಳು, ಕ್ರಮಗಳ ಕುರಿತು ವಿವರವಾದ ವರದಿಯನ್ನು ಮುಂದಿನ ಒಂದು ವಾರದೊಳಗೆ ನೀಡುವಂತೆ ಕೋರಿದ್ದಾರೆ.

ವನ್ಯಜೀವಿಗಳ ರಕ್ಷಣೆ ಮತ್ತು ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಇಂತಹ ಗಂಭೀರ ಘಟನೆಗಳು ಮರುಕಳಿಸದಂತೆ ತಡೆಯಬೇಕು. ಈ ಮೇಲಿನ ನಿದರ್ಶನಗಳನ್ನು ಕೂಡಲೇ ಜಾರಿಗೊಳಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+