Bandipur Tiger Reserve : ರಾಜ್ಯದಲ್ಲೇ ಬಂಡೀಪುರ ಉತ್ತಮ ಹುಲಿ ಸಂರಕ್ಷಿತ ವಲಯ
ಚಾಮರಾಜನಗರ, ನ.15: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ಮತ್ತೊಮ್ಮೆ ಉತ್ತಮ ಹುಲಿ ಸಂರಕ್ಷಿತ ವಲಯ ಎಂಬ ಬಿರುದನ್ನು ತನ್ನದಾಗಿಸಿಕೊಂಡಿದೆ.
ಈ ಬಾರಿಯ ಭಾರತದ ಹುಲಿ ಸಂರಕ್ಷಿತ ಪ್ರದೇಶಗಳ ನಿರ್ವಹಣೆ ಕುರಿತು ನಡೆಸಿರುವ ಮ್ಯಾನೇಜ್‌ಮೆಂಟ್ ಎಫೆಕ್ಟಿವ್‌ನೆಸ್ ಎವಲ್ಯೂಷನ್ (MEE) ನಲ್ಲಿ ಉನ್ನತ ಅಂಕಗಳನ್ನು ಬಂಡೀಪುರ ಗಳಿಸಿದೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಮತ್ತು ಭಾರತೀಯ ವನ್ಯಜೀವಿ ಸಂಸ್ಥೆ (WII), ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸ್ವಾಯತ್ತ ಸಂಸ್ಥೆಯಿಂದ ಈ ಮೌಲ್ಯಮಾಪನವನ್ನು ಮಾಡಲಾಗಿದೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆಯ ತಜ್ಞರ ತಂಡವು ನಾಲ್ಕು ವರ್ಷಗಳಿಗೊಮ್ಮೆ ನಿರ್ವಹಣೆಯ ಕುರಿತು ಮೌಲ್ಯಮಾಪನವನ್ನು ಮಾಡುತ್ತದೆ. ಮೌಲ್ಯಮಾಪನದಲ್ಲಿ ಹುಲಿ ಸಂರಕ್ಷಣೆ ನಿರ್ವಹಣೆ, ಸಮುದಾಯದ ಭಾಗವಹಿಸುವಿಕೆ, ಪ್ರವಾಸೋದ್ಯಮ, ರಕ್ಷಣೆ, ಆವಾಸಸ್ಥಾನಗಳ ನಿರ್ವಹಣೆ, ಹುಲಿಗಳ ಸಂಖ್ಯೆ, ವೈದ್ಯಕೀಯ ಸೌಲಭ್ಯಗಳು, ಬುಡಕಟ್ಟು ಸಮುದಾಯಗಳ ಜೊತೆಗಿನ ಸಂಬಂಧ ಅವರ ಸ್ಥಳಗಳು ಸೇರಿದಂತೆ ಅನೇಕ ಅಂಶಗಳನ್ನು ತೆಗೆದುಕೊಳ್ಳಲಾಗುತ್ತದೆ.

ವರದಿ ನೀಡಲು ನಾಲ್ಕು ಸದಸ್ಯರ ತಜ್ಞರ ತಂಡವು ಒಂದು ತಿಂಗಳ ಹಿಂದೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ್ದು, ನಾಲ್ಕು ದಿನ ಅಲ್ಲಿಯೇ ತಂಗಿದ್ದು ಸಮೀಕ್ಷೆ ನಡೆಸಿದೆ. ಇದರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ವಲಯ 95.5% ಅಂಕಗಳನ್ನು ಪಡೆದಿದೆ. ಇದು ರಾಜ್ಯದಲ್ಲಿಯೇ ಅತ್ಯಧಿಕವಾಗಿದೆ.
2018ರ ಜನಗಣತಿಯ ಪ್ರಕಾರ ಕರ್ನಾಟಕದಲ್ಲಿರುವ 524 ಹುಲಿಗಳ ಪೈಕಿ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವೊಂದರಲ್ಲೇ 173 ಹುಲಿಗಳಿದ್ದರೆ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ 164 ಹುಲಿಗಳಿವೆ.

ವಿಜ್ಞಾನಿಗಳು, ನಿವೃತ್ತ ಐಎಫ್‌ಎಸ್ ಅಧಿಕಾರಿಗಳು ಮತ್ತು ವನ್ಯಜೀವಿ ತಜ್ಞರ ತಂಡವು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಮೌಲ್ಯಮಾಪನ ನಡೆಸುತ್ತದೆ. ಹುಲಿ ಸಂರಕ್ಷಿತ ಪ್ರದೇಶದ ನಿರ್ವಹಣೆಯ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ.
''ದೇಶದ ಇತರ ಹುಲಿ ಸಂರಕ್ಷಿತ ಪ್ರದೇಶಗಳು 92% ರಿಂದ 94% ಗಳಿಸಿವೆ. ನಮಗೆ ಸಿಕ್ಕಿರುವ ಅಂಕಗಳ ಆಧಾರದ ಮೇಲೆ, ಬಂಡೀಪುರವನ್ನು ದೇಶದಲ್ಲಿ ಮೊದಲ ಅಥವಾ ಎರಡನೆಯ ಉತ್ತಮ ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಘೋಷಿಸಲಾಗುವುದು ಎಂಬ ವಿಶ್ವಾಸವಿದೆ. ಮೀಸಲು ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಇಲಾಖೆ ಕೈಗೆತ್ತಿಕೊಂಡಿದ್ದರಿಂದ ಇದು ಸಾಧ್ಯವಾಗಿದೆ" ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ರಮೇಶ್ ಕುಮಾರ್ ಹೇಳಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications