ಬಿಎಂಆರ್‌ಸಿಎಲ್‌ನಲ್ಲಿ ಹಲವು ಹುದ್ದೆಗಳು ಖಾಲಿ ಇವೆ

ಬೆಂಗಳೂರು, ಫೆ.2 : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 21.

ಮುಖ್ಯ ಇಂಜಿನಿಯರ್‌ (ಡಿಸೈನ್), ಸಹಾಯಕ ಕಾರ್ಯನಿರ್ವಾಹಕ ಇಂಜಿಯರ್ (ಡಿಸೈನ್), ಜನರಲ್ ಮ್ಯಾನೇಜರ್, ಮ್ಯಾನೇಜರ್, ಸಹಾಯಕ ಇಂಜಿನಿಯರ್ ಸೇರಿದಂತೆ 60ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

bmrcl

ಮೂರು ವರ್ಷಗಳ ಗುತ್ತಿಗೆ ಆಧಾರದಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಎಲ್ಲಾ ಹುದ್ದೆಗಳಿಗೂ ಅನುಭವ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಯ್ಕೆಗೆ ಪ್ರಭಾವ ಬೀರಿದರೆ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. [ನೇಮಕಾತಿ ಆದೇಶ ಇಲ್ಲಿದೆ]

ಎಲ್ಲಾ ಅರ್ಜಿಗಳ ಪರಿಶೀಲನೆ ನಡೆಸಿದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ. ಅರ್ಜಿಯ ಜೊತೆಗೆ ಅಗತ್ಯ ಪ್ರಮಾಣ ಪತ್ರಗಳನ್ನು ಅಭ್ಯರ್ಥಿಗಳು ಸಲ್ಲಿಸಬೇಕು. ನಕಲಿ ದಾಖಲೆ ನೀಡಿದರೆ ಅಂತಹ ಅರ್ಜಿ ತಿರಸ್ಕೃತವಾಗಲಿದೆ. [ಇಂಗ್ಲಿಶ್ ನಲ್ಲಿ ಓದಿ]

ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು The General Manager (HR), Bangalore Metro Rail Corporation Limited, III Floor, BMTC Complex, K.H.Road, Shanthinagar, Bangalore 560027 ವಿಳಾಸಕ್ಕೆ ಅಂಚೆ ಮೂಲಕ ಕಳಿಸಬಹುದಾಗಿದೆ.

ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಅಂಚೆ ಲಕೋಟೆ ಮೇಲೆ ಯಾವ ಹುದ್ದೆಗಾಗಿ ಅರ್ಜಿ ಎಂಬುದನ್ನು ಸ್ಪಷ್ಟವಾಗಿ ನಮೂದಿಸಬೇಕು. ಫೆಬ್ರವರಿ 21ರ ಸಂಜೆ 4 ಗಂಟೆಯೊಳಗೆ ಅರ್ಜಿ ಕಚೇರಿಯನ್ನು ತಲುಪಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+