ಗೂಂಡಾ ಕಾಯ್ದೆ ಏನಿದು? ಈಗ ಸುದ್ದಿಯಲ್ಲೇಕಿದೆ?
ಬೆಂಗಳೂರು,ಜು.30: ರಾಜ್ಯದ ಅತ್ಯಾಚಾರ ಪ್ರಕರಣಗಳನ್ನು ತಡೆಯಲು ಸರ್ಕಾರ ಮುಂದಾಗಿದ್ದು ಗೂಂಡಾ ಕಾಯ್ದೆ ತಿದ್ದುಪಡಿ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
ಗೂಂಡಾ ಕಾಯ್ದೆ ಎಂದೇ ಹೆಸರಾಗಿರುವ 'ಕರ್ನಾಟಕ ಅಪಾಯಕಾರಿ ಚಟುವಟಿಕೆಗಳ ಪ್ರತಿಬಂಧಕ ಕಾಯ್ದೆ' ತಿದ್ದುಪಡಿಯಾಗಿದ್ದು ಇನ್ನು ಮುಂದೆ ಅತ್ಯಾಚಾರಿಗಳನ್ನು ನೇರವಾಗಿ ಜೈಲಿಗೆ ಕಳುಹಿಸಬಹುದು.
ಏನಿದು ಗೂಂಡಾ ಕಾಯ್ದೆ? 1985ರಲ್ಲಿ ಆಗಿನ ಜನತಾ ಪಕ್ಷದ ಸರ್ಕಾರ ಗೂಂಡಾ ಚಟುವಟಿಕೆ ನಿಯಂತ್ರಿಸಲು ಈ ಕಾಯ್ದೆಯನ್ನು ಜಾರಿಗೆ ತಂದಿತ್ತು. ಜೂಜುಕೋರರು, ಕಳ್ಳ ಬಟ್ಟಿ ವ್ಯಾಪಾರಿಗಳು, ಮಾದಕ ವಸ್ತು ಸಾಗಾಣಿಕೆ ಮತ್ತು ಮಾರಾಟಗಾರರ ವಿರುದ್ಧ ಈ ಕಾಯ್ದೆಯ ಮೂಲಕ ಕ್ರಮಕೈಗೊಳ್ಳಬಹುದಾಗಿತ್ತು.

ಈಗ ಸುದ್ದಿಯಾಗಿದ್ದು ಯಾಕೆ? ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ ಅತ್ಯಾಚಾರಿಗಳ ವಿರುದ್ಧ ಗುಂಡಾ ಕಾಯ್ದೆಯನ್ನು ಬಳಸಿ ಶಿಕ್ಷೆ ನೀಡಬೇಕೆಂದು ಎಲ್ಲೆಡೆಯಿಂದ ಒತ್ತಾಯ ಕೇಳಿಬಂದಿತ್ತು. ಆದರೆ ಈ ಕಾಯ್ದೆಯ ಮೂಲಕವೇ ಅತ್ಯಾಚಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲದ ಕಾರಣ ಸರ್ಕಾರಕ್ಕೆ ಭಾರೀ ತಲೆನೋವಾಗಿತ್ತು.
ಸರ್ಕಾರಕ್ಕೆ ತಲೆನೋವಾಗಿದ್ದು ಯಾಕೆ? 2013ರಲ್ಲಿ ಅತ್ಯಾಚಾರ ಆರೋಪಿಗಳನ್ನು ಗೂಂಡಾಕಾಯ್ದೆ ಅಡಿ ಬಂಧಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಶರಣ್ ದೇಸಾಯಿ ಎಂಬುವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಬಳಿಕ ಹೈಕೋರ್ಟ್ ಈಗಿರುವ ಗೂಂಡಾ ಕಾಯ್ದೆಯಡಿ ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವಕಾಶವೇ ಇಲ್ಲ. ಅದು ಉಚಿತವೂ ಅಲ್ಲ. ಆದ್ದರಿಂದ ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಕುರಿತು ಹೊಸದಾಗಿ ಕಾಯ್ದೆ ರಚಿಸುವ ಬಗ್ಗೆ ಯೋಚಿಸಿ, ತಿಳಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.[ಅತ್ಯಾಚಾರ ವಿರುದ್ಧ ಗೂಂಡಾ ಕಾಯ್ದೆ: ಭಾರಿ ಹಿನ್ನಡೆ]
'ಗೂಂಡಾ ಎನ್ನುವ ಪದದ ಅರ್ಥವ್ಯಾಪ್ತಿ ಮತ್ತು ಅತ್ಯಾಚಾರಿ ಎಂಬ ಪದದ ಅರ್ಥವ್ಯಾಪ್ತಿ ಬೇರೆ ಬೇರೆಯಾಗಿದೆ. ಇವೆರಡೂ ಒಂದೇ ಅಲ್ಲ. ಹೆಣ್ಣುಮಕ್ಕಳನ್ನು ಚುಡಾಯಿಸುವ ಕೃತ್ಯ ಹಾಗೂ ಗೂಂಡಾಗಿರಿಯನ್ನು ಒಂದೇ ದೃಷ್ಟಿಯಿಂದ ನೋಡಲಾಗದು' ಎಂದೂ ನ್ಯಾಯಪೀಠ ಹೇಳಿತ್ತು.
ಗೂಂಡಾ ಕಾಯ್ದೆ ತಿದ್ದುಪಡಿ ಬಳಿಕ ಯಾರ ವಿರುದ್ಧ ಕ್ರಮ ಕೈಗೊಳ್ಳಬಹುದು: ತಿದ್ದು ಪಡಿಯಾದ ಕಾಯ್ದೆ ವ್ಯಾಪ್ತಿಗೆ ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರು, ಆಸಿಡ್ ದಾಳಿಕೋರರು, ಅಕ್ರಮ ಮರಳು ಗಣಿಗಾರಿಕೆ ಸೇರಿದಂತೆ ಪರಿಸರಕ್ಕೆ ಹಾನಿ ಮಾಡುವವರು, ಡಿಜಿಟಲ್ ಮೀಡಿಯಾದಲ್ಲಿ (ವೆಬ್‌ಸೈಟ್) ವಂಚಿಸುವವರು, ಭೂ ಕಬಳಿಕೆದಾರರು, ಕಾನೂನು ಬಾಹಿರ ಹಣಕಾಸು ವ್ಯವಹಾರ ನಡೆಸುವವರರನ್ನು ಸೇರಿಸಲಾಗಿದೆ. ಈ ಹಿಂದೆ ಜೂಜುಕೋರರು, ಕಳ್ಳ ಬಟ್ಟಿ ವ್ಯಾಪಾರಿಗಳು, ಮಾದಕ ವಸ್ತು ಸಾಗಾಣಿಕೆ ಮತ್ತು ಮಾರಾಟಗಾರರ ವಿರುದ್ಧ ಈ ಕಾಯ್ದೆಯ ಮೂಲಕ ಕ್ರಮಕೈಗೊಳ್ಳಬಹುದಾಗಿತ್ತು.
ನೇರವಾಗಿ ಜೈಲಿಗೆ: ಈ ಕಾಯ್ದೆಯಲ್ಲಿ ಬಂಧಿಸಲಾದ ವ್ಯಕ್ತಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯ ಇಲ್ಲ. ಪೊಲೀಸ್ ಕಸ್ಟಡಿ ಅಥವಾ ನ್ಯಾಯಾಂಗ ಬಂಧನವನ್ನು ಪದೇ ಪದೇ ವಿಸ್ತರಿಸಿಕೊಳ್ಳುವ ಪ್ರಕ್ರಿಯೆಯ ಅಗತ್ಯವೂ ಇಲ್ಲದೇ ನೇರವಾಗಿ ಜೈಲಿಗೆ ಕಳುಹಿಸಬಹುದು. ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿತನಾದಲ್ಲಿ ಅಪರಾಧಿಗೆ ಒಂದು ವರ್ಷ ಜಾಮೀನು ಸಿಗುವುದಿಲ್ಲ.
ಯಾರಿಗೆ ಅಧಿಕಾರ? ಗೂಂಡಾ ತಡೆ ಕಾಯ್ದೆಯನ್ನು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ಪೊಲೀಸ್ ಆಯುಕ್ತರಿಗೆ ಮ್ಯಾಜಿಸ್ಟೀರಿಯಲ್ ಅಧಿಕಾರವಿರುತ್ತದೆ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಅಥವಾ ಪೊಲೀಸ್ ಆಯುಕ್ತರಿಗೆ ಈ ಅಧಿಕಾರವಿದೆ. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಚಟುವಟಿಕೆಗಳ ಬಗ್ಗೆ ಕೆಳಹಂತದ ಪೊಲೀಸ್ ಅಧಿಕಾರಿಗಳು ನೀಡುವ ವರದಿಯನ್ನು ಪರಿಶೀಲಿಸಿ ಪೊಲೀಸ್ ಆಯುಕ್ತರು ಅಥವಾ ಜಿಲ್ಲಾಧಿಕಾರಿ ಕಾಯ್ದೆಯನ್ನು ಜಾರಿಗೊಳಿಸುತ್ತಾರೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications