ಅತ್ಯಾಚಾರ ಪ್ರಕರಣ, ಶುಕ್ರವಾರ ಏನಾಯ್ತ?
ಬೆಂಗಳೂರು, ಜು. 18 : ಬೆಂಗಳೂರಿನ ಹೊರವಲಯದ ಮಾರತ್ ಹಳ್ಳಿಯ ವಿಬ್ ಗಯಾರ್ ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಹ ಪೋಷಕರು ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಈ ದಿನದ ಐದು ಪ್ರಮುಖ ಬೆಳವಣಿಗೆಗಳ ಸಂಕ್ಷಿಪ್ತ ಚಿತ್ರಣ ಇಲ್ಲಿದೆ.
ಶುಕ್ರವಾರ ವಿವಿಧ ಸಂಘಟನೆಗಳು ಪೋಷಕರ ಜೊತೆ ವಿಬ್ ಗಯಾರ್ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಇತ್ತ ಸದನದಲ್ಲಿ ಈ ಬಗ್ಗೆ ಭಾರೀ ಗದ್ದಲ ಉಂಟಾದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ರಾಜ್ಯಾದಂತ ವಿವಿಧ ಜಿಲ್ಲೆಗಳಲ್ಲಿ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಪ್ರತಿಭಟನೆಗಳು ನಡೆದವು.

ರಾಜ್ಯ ಮಹಿಳಾ ಆಯೋಗ ಭೇಟಿ : ವಿಬ್ ಗಯಾರ್ ಶಾಲೆಗೆ ಇಂದು ರಾಜ್ಯ ಮಹಿಳಾ ಆಯೋಗದ ಸದಸ್ಯೆ ಸುಮನಾ ಹೆಗಡೆ ಭೇಟಿ ನೀಡಿ ಶಾಲೆಯ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿದರು. ಘಟನೆಯ ಬಗ್ಗೆ ಶಾಲೆಯ ಆಡಳಿತ ಮಂಡಳಿ ಸದಸ್ಯರಿಂದ ಮಾಹಿತಿ ಸಂಗ್ರಹಿಸಿದರು. [ಪುಲಿಕೇಶಿ ನಗರ ಪ್ರಕರಣ ಏನಾಯ್ತು?]
ಸರ್ಕಾರದ ವೈಫಲ್ಯ ಕಾರಣ : ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್, "ಅತ್ಯಾಚಾರಿಗಳ ಕೈ ಕತ್ತರಿಸಬೇಕು, ಜೈಲಿಗೆ ಬಂದಾಗ ಸಹ ಕೈದಿಗಳು ಅವರ ಕೈ ಕತ್ತರಿಸಿ" ಎಂದು ಕರೆ ನೀಡಿದ್ದಾರೆ. ಕರ್ನಾಟಕ ಸರ್ಕಾರದ ವೈಫಲ್ಯದಿಂದಾಗಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾದವ ಪರವಾಗಿ ವಕೀಲರು ವಾದ ಮಾಡಬಾರದು ಎಂದು ಮುತಾಲಿಕ್ ಒತ್ತಾಯಿಸಿದರು.
ಮುಂದುವರೆದ ಪ್ರತಿಭಟನೆ : ವಿಬ್ ಗಯಾರ್ ಶಾಲೆಯ ಮುಂದೆ ವಿವಿಧ ಸಂಘಟನೆಗಳು ಮತ್ತು ಪೋಷಕರು ಪ್ರತಿಭಟನೆ ನಡೆಸಿದರು. ಆಡಳಿತ ಮಂಡಳಿ ಘಟನೆ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಶನಿವಾರ ಬೆಳಗ್ಗೆ 10 ಗಂಟೆಗೆ ಪೋಷಕರು ಮತ್ತೊಮ್ಮೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳ ಸಭೆ : ಬೆಂಗಳೂರಿನಲ್ಲಿ ಸರಣಿ ಅತ್ಯಾಚಾರಗಳು ನಡೆದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಯಾವುದೇ ಒತ್ತಡಕ್ಕೆ ಮಣಿಯದಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳು ಹೇಳಿದ್ದೇನು? : ಸರಣಿ ಅತ್ಯಾಚಾರ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಆರೋಪಿಗಳನ್ನು ಯಾವ ಒತ್ತಡಕ್ಕೂ ಒಳಗಾಗಿ ರಕ್ಷಣೆ ಮಾಡುವುದಿಲ್ಲ. ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರ ಸಹ ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications