ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತ್ಯಾಚಾರ ಪ್ರಕರಣ, ಶುಕ್ರವಾರ ಏನಾಯ್ತ?

|
Google Oneindia Kannada News

ಬೆಂಗಳೂರು, ಜು. 18 : ಬೆಂಗಳೂರಿನ ಹೊರವಲಯದ ಮಾರತ್ ಹಳ್ಳಿಯ ವಿಬ್‌ ಗಯಾರ್ ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಹ ಪೋಷಕರು ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಈ ದಿನದ ಐದು ಪ್ರಮುಖ ಬೆಳವಣಿಗೆಗಳ ಸಂಕ್ಷಿಪ್ತ ಚಿತ್ರಣ ಇಲ್ಲಿದೆ.

ಶುಕ್ರವಾರ ವಿವಿಧ ಸಂಘಟನೆಗಳು ಪೋಷಕರ ಜೊತೆ ವಿಬ್ ಗಯಾರ್ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಇತ್ತ ಸದನದಲ್ಲಿ ಈ ಬಗ್ಗೆ ಭಾರೀ ಗದ್ದಲ ಉಂಟಾದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ರಾಜ್ಯಾದಂತ ವಿವಿಧ ಜಿಲ್ಲೆಗಳಲ್ಲಿ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಪ್ರತಿಭಟನೆಗಳು ನಡೆದವು.

protest

ರಾಜ್ಯ ಮಹಿಳಾ ಆಯೋಗ ಭೇಟಿ : ವಿಬ್‌ ಗಯಾರ್ ಶಾಲೆಗೆ ಇಂದು ರಾಜ್ಯ ಮಹಿಳಾ ಆಯೋಗದ ಸದಸ್ಯೆ ಸುಮನಾ ಹೆಗಡೆ ಭೇಟಿ ನೀಡಿ ಶಾಲೆಯ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿದರು. ಘಟನೆಯ ಬಗ್ಗೆ ಶಾಲೆಯ ಆಡಳಿತ ಮಂಡಳಿ ಸದಸ್ಯರಿಂದ ಮಾಹಿತಿ ಸಂಗ್ರಹಿಸಿದರು. [ಪುಲಿಕೇಶಿ ನಗರ ಪ್ರಕರಣ ಏನಾಯ್ತು?]

ಸರ್ಕಾರದ ವೈಫಲ್ಯ ಕಾರಣ : ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್, "ಅತ್ಯಾಚಾರಿಗಳ ಕೈ ಕತ್ತರಿಸಬೇಕು, ಜೈಲಿಗೆ ಬಂದಾಗ ಸಹ ಕೈದಿಗಳು ಅವರ ಕೈ ಕತ್ತರಿಸಿ" ಎಂದು ಕರೆ ನೀಡಿದ್ದಾರೆ. ಕರ್ನಾಟಕ ಸರ್ಕಾರದ ವೈಫಲ್ಯದಿಂದಾಗಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾದವ ಪರವಾಗಿ ವಕೀಲರು ವಾದ ಮಾಡಬಾರದು ಎಂದು ಮುತಾಲಿಕ್ ಒತ್ತಾಯಿಸಿದರು.

ಮುಂದುವರೆದ ಪ್ರತಿಭಟನೆ : ವಿಬ್‌ ಗಯಾರ್ ಶಾಲೆಯ ಮುಂದೆ ವಿವಿಧ ಸಂಘಟನೆಗಳು ಮತ್ತು ಪೋಷಕರು ಪ್ರತಿಭಟನೆ ನಡೆಸಿದರು. ಆಡಳಿತ ಮಂಡಳಿ ಘಟನೆ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಶನಿವಾರ ಬೆಳಗ್ಗೆ 10 ಗಂಟೆಗೆ ಪೋಷಕರು ಮತ್ತೊಮ್ಮೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳ ಸಭೆ : ಬೆಂಗಳೂರಿನಲ್ಲಿ ಸರಣಿ ಅತ್ಯಾಚಾರಗಳು ನಡೆದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಯಾವುದೇ ಒತ್ತಡಕ್ಕೆ ಮಣಿಯದಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳು ಹೇಳಿದ್ದೇನು? : ಸರಣಿ ಅತ್ಯಾಚಾರ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಆರೋಪಿಗಳನ್ನು ಯಾವ ಒತ್ತಡಕ್ಕೂ ಒಳಗಾಗಿ ರಕ್ಷಣೆ ಮಾಡುವುದಿಲ್ಲ. ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರ ಸಹ ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.

English summary
The Bangalore Vibgyor High school where two staff members allegedly raped a 6-year-old class 1 girl student remains shut for the day on Friday as parents protests infront of the school. Here is a top 5 developments on Friday, July 18.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X