ಇಸ್ಲಾಂಗೆ ಮತಾಂತರವಾಗಿ, ಇಲ್ಲ ಸಾಯಲು ಸಿದ್ಧರಾಗಿ ಎಂದು ಬಾಂಬ್‌ ಬೆದರಿಕೆ: ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು, ಡಿಸೆಂಬರ್‌ 01: ಬೆಂಗಳೂರಿನ‌ 15 ಶಾಲೆಗಳಿಗೆ ಹುಸಿ ಬಾಂಬ್‌ ಕರೆ ಬಂದಿದ್ದು. ಸಾರ್ವಜನಿಕರು ಆತಂಕ ಪಡುವುದು ಬೇಡ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಹುಸಿ ಬೆದರಿಕೆ ಹಾಕಿದವರನ್ನು 24 ಗಂಟೆಯೋಳಗೆ ಪತ್ತೆ ಮಾಡಲಾಗುವುದು ಪೊಲೀಸರು ಈಗಾಗಲೆ ಕಾರ್ಯಚರಣೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೂ ಹೀಗೆ ಆಗಿತ್ತು. ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಬಂದಿರುವ ಸುದ್ದಿ ತಿಳಿದ ಕೂಡಲೆ ಗಾಬರಿಯಾಯಿತು. ನನಗೆ ಪರಿಚಯವಿರುವ ಕೆಲವು ಶಾಲೆಗಳಿಗೆ ಹೀಗೆ ಇ- ಮೇಲ್‌ ಸಂದೇಶದ ಮೂಲಕ ಬೆದರಿಕೆ ಬಂದಿದೆ. ಪೋಲಿಸ್ ಆಯುಕ್ತರು ಈಗಾಗಲೆ ಸುದ್ದಿಗೋಷ್ಠಿ ನಡೆಸಿ ಇದು ಹುಸಿ ಬಾಂಬ್‌ ಬೆದರಿಕೆ ಎಂದು ಮಾಹಿತಿ ನೀಡಿದ್ದಾರೆ. ಪೋಷಕರು ಆತಂಕದಲ್ಲಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಧೈರ್ಯದಿಂದ ಇರಬೇಕು ಎಂದರು.

Bangalore Schools Bomb Threat: Convert to Islam or die Threat Email: Know What DK Shivakumar Says

ಈಗಾಗಲೆ ಬಾಂಬ್‌ ನಿಷ್ಕ್ರಿಯದಳ ಸ್ಥಳ ಪರಿಶೀಲನೆ ನಡೆಸಿದೆ. ಪೊಲೀಸ್‌ ಭಧ್ರತೆ ಇರುವ ಕಾರಣ ನಮ್ಮ ಮನೆ ಹತ್ತಿರ ಹೀಗೆ ಆಗುವ ಸಾಧ್ಯತೆ ಕಡಿಮೆ. ಆದರೂ ಇದು ಪ್ರಮುಖ ಪ್ರದೇಶವಾದರಿಂದ ಸ್ವಲ್ಪ ಎಚ್ಚರದಿಂದ ಇರಬೇಕು. ಬೆಂಗಳೂರು ಜನತೆಗೆ ಯಾವ ಆತಂಕ ಬೇಡ ಕೆಲವು ದುಷ್ಕರ್ಮಿಗಳಿಂದ ಈ ಬೆದರಿಕೆ ಕರೆ ಬಂದಿದ್ದು, 24 ಗಂಟೆಯೊಳಗೆ ಆರೋಪಗಳನ್ನು ಪತ್ತೆ ಹಚ್ಚುತ್ತೇವೆ ಎಂದರು.

ಬೆಂಗಳೂರು ಹಬ್ಬ ನಡೆಯುವ ಸಂದರ್ಭದಲ್ಲೆ ಹೀಗೆ ಬಾಂಬ್‌ ಬೆದರಿಕೆ ಕರೆ ಬಂದಿದೆ ಎಂದು ಕೇಳಿದಾಗ, "ಕೆಲವರು ಕಿಡಿಗೇಡಿಗಳು ಈ ರೀತಿ ಚೇಷ್ಟೆ ಮಾಡುತ್ತಾರೆ, ಹಬ್ಬ ಅದರ ಪಾಡಿಗೆ ಅದು ನಡೆಯುತ್ತದೆ ಎಂದು ತಿಳಿಸಿದರು.

ಸೈಬರ್‌ ಕ್ರೈಂ ಪೊಲೀಸರಿಗೆ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಹೇಳುತ್ತಿರಾ ಎಂದು ಕೇಳಿದಾಗ "ಸೈಬರ್‌ ಕ್ರೈಂ ವಿಭಾಗದವರು ಸಕ್ರಿಯವಾಗಿದ್ದಾರೆ. ತಕ್ಷಣ ಕ್ರಮಕೈಗೊಂಡು ಸಂಬಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿದ್ದಾರೆ. ನನಗೂ ಫೋನಿನ ಮೂಲಕ ಮಾಹಿತಿ ನೀಡುತ್ತಿದ್ದಾರೆ. ನಮ್ಮ ಮನೆ ಮುಂದೆ ಕೂಡ ಕಾರ್ಯಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

Bangalore Schools Bomb Threat: Convert to Islam or die Threat Email: Know What DK Shivakumar Says

ಈ ರೀತಿ ಹುಸಿ ಬಾಂಬ್‌ ಕರೆ ಮತ್ತೆ ಮತ್ತೆ ಏಕೆ ಕೇಳಿಬರುತ್ತಿದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಇದು ದಿಕ್ಕು ತಪ್ಪಿಸುವಂತಹ ಕೆಲಸ. ಈಗ ಪರಿಕ್ಷೆ ಸಮಯ ಆದ ಕಾರಣ ಹೀಗಾಗಿರಬಹುದು. ಈ ಹಿಂದೆ ಕೊಡ ವಿಮಾನ ತಡವಾಗಿದೆ ಎಂದು ಈ ರೀತಿ ಕರೆ ಮಾಡಿರುವ ಘಟನೆ ನಡೆದಿತ್ತು. ಕೆಲವೊಮ್ಮೆ 10 ಹುಸಿ ಕರೆಗಳ ಪೈಕಿ ಒಂದು ಟಾರ್ಗೆಟ್ ಮಾಡುವ ಸಾಧ್ಯತೆ ಇರುತ್ತದೆ. ಇಂತಹ ಹುಸಿ ಕರೆಗಳನ್ನು ನಾವು ನಿರ್ಲಕ್ಷಿಸುವುದಿಲ್ಲ. ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಕೈಗೊಳ್ಳುತ್ತೇವೆ ಎಂದರು.

ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆ ಕುರಿತು ಮಾತನಾಡಿದ ಅವರು, ಪಕ್ಷದ ಅಧ್ಯಕ್ಷ ಹೊರತಾಗಿ ವೈಯಕ್ತಿಕವಾಗಿ ನನಗೆ ಎಕ್ಸಿಟ್ ಪೋಲ್ ಗಳ ಮೇಲೆ ನಂಬಿಕೆ ಇಲ್ಲ. ನಮ್ಮ ರಾಜ್ಯದಲ್ಲಿ ನಾನು ಏನು ಮಾಡಿದ್ದೆ, ಯಾವ ರೀತಿ ಎಕ್ಸಿಟ್ ಪೋಲ್ ಗಳು ಬಂದವು ಎಂಬುದು ನನಗೆ ಗೊತ್ತಿದೆ. ಯಾರು ಕ್ಷೇತ್ರಗಳಲ್ಲಿ ಸುತ್ತಾಡಿರುತ್ತಾರೋ ಅವರಿಗೆ ಮಾತ್ರ ವಾಸ್ತವಾಂಶ ತಿಳಿದಿರುತ್ತದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ತೆಗೆದುಕೊಳ್ಳುವ ಮಾದರಿಗಳು ಅಲ್ಪಪ್ರಮಾಣದ್ದಾಗಿರುತ್ತದೆ. ಅದು ಇಡೀ ರಾಜ್ಯದ ಚಿತ್ರಣವನ್ನು ನಿರ್ಧರಿಸುವುದಿಲ್ಲ ಎಂದು ತಿಳಿಸಿದರು.

ಕೆಲ ರಾಜ್ಯಗಳಲ್ಲಿ ನೇರಹಣಾಹಣಿ ಇದ್ದು, ಆ ರಾಜ್ಯಗಳ ಶಾಸಕರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಗೊತ್ತಿಲ್ಲ. ರಾಜಸ್ಥಾನ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಪಕ್ಷ ಹೇಳಿದ ಕೆಲಸ ಮಾಡಬೇಕಾಗುತ್ತದೆ. ನಮ್ಮ ಮುಂದೆ ಬೇರೆ ಆಯ್ಕೆಗಳಿಲ್ಲ ಎಂದು ತಿಳಿಸಿದರು.

ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಉಚಿತ ಕೊಡುಗೆಗಳನ್ನು ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, ನಾರಾಯಣ ಮೂರ್ತಿ ಅವರ ಸಲಹೆ ಜನರ ಅಭಿವೃದ್ಧಿಯ ಭಾಗವಾಗಿದೆ. ಅಂತಿಮವಾಗಿ ಸರ್ಕಾರದ ನಿರ್ಧಾರ ಅಂತಿಮ. ಸರ್ಕಾರ ರೈತರು, ಬಡವರಿಗೆ ನೆರವಾಗಬೇಕು. ಬೆಲೆ ಏರಿಕೆ ಸಮಸ್ಯೆಯನ್ನು ಜನಸಾಮಾನ್ಯರು ಹೇಗೆ ಎದುರಿಸಬೇಕು. 70 ರೂ. ಇದ್ದ ಪೆಟ್ರೋಲ್ ಬೆಲೆ 110 ರೂ. ಆಗಿದೆ ಇಂತಹ ಸಮಸ್ಯೆಗಳನ್ನು ಹೇಗೆ ನಿವಾರಣೆ ಮಾಡಬೇಕು? ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+