Bangaluru-Hubli Vande Bharat: ಈ ದಿನದಿಂದ ಹುಬ್ಬಳ್ಳಿ-ಬೆಂಗಳೂರು ವಂದೇ ಭಾರತ್ ರೈಲು ಓಡಾಟ ಆರಂಭ

ಬಹು ನಿರೀಕ್ಷಿತ ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು ಓಡಾಟಕ್ಕೆ ಮುಹೂರ್ತ ನಿಗದಿಯಾಗಿದೆ. ಒಂದೇ ದಿನ ದೇಶಾದ್ಯಂತ ಐದು ಮಾರ್ಗಗಳಲ್ಲಿ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದ್ದು, ಬೆಂಗಳೂರು-ಹುಬ್ಬಳ್ಳಿ ರೈಲು ಕೂಡ ಸಂಚಾರ ಆರಂಭಿಸಲಿದೆ.

ಜೂನ್ 26ರಂದು ದೇಶಾದ್ಯಂತ ಹೊಸದಾಗಿ 5 ಮಾರ್ಗಗಳಲ್ಲಿ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಐದು ರೈಲುಗಳ ಓಡಾಟಕ್ಕೆ ಚಾಲನೆ ನೀಡಲಿದ್ದಾರೆ.

Bangaluru-Hubli Vande Bharat

ಜೂನ್ 26ರಂದು, ಬೆಂಗಳೂರು-ಹುಬ್ಬಳ್ಳಿ, ಮುಂಬೈ-ಗೋವಾ, ಪಾಟ್ನಾ-ರಾಂಚಿ, ಭೋಪಾಲ್-ಇಂಧೋರ್ ಮತ್ತು ಭೋಪಾಲ್-ಜಬಲ್ಪುರ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ. ಒಡಿಶಾ ರೈಲು ದುರಂತದ ನಂತರ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ವಂದೇ ಭಾರತ್ ರೈಲು ಸಂಚಾರ ಆರಂಭವನ್ನು ರದ್ದು ಮಾಡಿತ್ತು.

ಮೊದಲ ಬಾರಿಗೆ ಒಂದೇ ಬಾರಿ 5 ವಂದೇ ಭಾರತ್ ರೈಲುಗಳ ಸಂಚಾರ

ಇದೇ ಮೊದಲ ಬಾರಿಗೆ ಒಂದೇ ದಿನ ಐದು ವಂದೇ ಭಾರತ್ ರೈಲುಗಳು ಕಾರ್ಯಾಚರಣೆ ಆರಂಭಿಸುತ್ತಿವೆ. ಈ ಮೊದಲು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಗುತ್ತಿತ್ತು, ಆದರೆ ಒಡಿಶಾ ರೈಲು ಅಪಘಾತ ಸಂಭವಿಸಿದ ನಂತರ, ಸರಳವಾಗಿ ಐದು ರೈಲುಗಳಿಗೆ ಚಾಲನೆ ನೀಡಲಾಗುತ್ತಿದೆ.

ಉತ್ತರಾಖಂಡದಲ್ಲಿ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್

ಮೇ 25 ರಂದು, ಪ್ರಧಾನಿ ಮೋದಿ ಅವರು ಡೆಹ್ರಾಡೂನ್‌ನಿಂದ ನವದೆಹಲಿಗೆ ಸಂಪರ್ಕಿಸುವ ಉತ್ತರಾಖಂಡದ ಮೊದಲ ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು. ಮೇ 18 ರಂದು ಪುರಿ ಮತ್ತು ಹೌರಾ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ್ದರು. ಸೆಮಿ ಸ್ಪೀಡ್ ರೈಲು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿದೆ.

ಒಡಿಶಾದ ಮೊದಲ ವಂದೇ ಭಾರತ್ ರೈಲು ಪ್ರಾರಂಭವಾದ ನಂತರ, ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, ಈ ವರ್ಷದ ಜೂನ್ ವೇಳೆಗೆ ವಂದೇ ಭಾರತ್ ಬಹುತೇಕ ಎಲ್ಲಾ ರಾಜ್ಯಗಳನ್ನು ತಲುಪಬೇಕು ಎಂದು ಪ್ರಧಾನಿ ಮೋದಿ ಗುರಿ ಹೊಂದಿದ್ದಾರೆ ಎಂದು ಹೇಳಿದ್ದರು.

ಬೆಂಗಳೂರು-ಹುಬ್ಬಳ್ಳಿ 5 ಗಂಟೆಗಳ ಪ್ರಯಾಣ

ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣದ ಅವಧಿ 5 ಗಂಟೆಗಳು ಎಂದು ಹೇಳಲಾಗಿದೆ. ಸದ್ಯದ ಮಾಹಿತಿ ಪ್ರಕಾರ ವಂದೇ ಭಾರತ್ ಎಕ್ಸ್‌ಪ್ರೆಸ್ 8 ಬೋಗಿಗಳನ್ನು ಹೊಂದಿದ್ದು, ಪ್ರಯಾಣಿಕರ ಸಂಖ್ಯೆಯನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಬೋಗಿಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಗಂಟೆಗೆ 120 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದ್ದು, ಇದಕ್ಕೆ ತಕ್ಕಂತೆ ಹಳಿಗಳನ್ನು ಮಾರ್ಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+