Get Updates
Get notified of breaking news, exclusive insights, and must-see stories!

ಬಿಜೆಪಿಗರ ಟೀಕೆಗೆ ಸೆಡ್ಡು ಹೊಡೆದ ಬಾನು ಮುಷ್ತಾಕ್; ಮೈಸೂರು ದಸರಾ ಉದ್ಘಾಟಿಸಿ ಭಾವುಕ

ಮೈಸೂರು, ಸೆಪ್ಟೆಂಬರ್‌ 22: ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ನಾಡಿನ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟಿಸಿದರು. ಈ ವರ್ಷದ ಮೈಸೂರು ದಸರಾ ಉದ್ಘಾಟನೆಗೆ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ಕರ್ನಾಟಕ ಸರ್ಕಾರದ ನಿರ್ಧಾರದ ಬಗ್ಗೆ ವಿವಾದ ಭುಗಿಲೆದ್ದಿತು, ಬಿಜೆಪಿ ನಾಯಕರ ಹೇಳಿಕೆಗೆ ಬಾನು ಮುಷ್ತಾಕ್ ಸೆಡ್ಡು ಹೊಡೆದಿದ್ದು, ದಸರಾ ಉದ್ಘಾಟನೆ ವೇಳೆ ಭಾವುಕಾರಾಗಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ, ಬಾನು ಮುಷ್ತಾಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಗಣ್ಯರೊಂದಿಗೆ ಚಾಮುಂಡೇಶ್ವರಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ನೀಡಲಾದ ಮಂಗಳಾರತಿ, ಹಣ್ಣುಗಳು ಮತ್ತು ನೀಲಿ ರೇಷ್ಮೆ ಸೀರೆಯನ್ನು ಅವರು ಸ್ವೀಕರಿಸಿದರು. ಬಾನು ಮುಷ್ತಾಕ್ ಅವರು ಕೇಸರಿ ಬಣ್ಣದ ಸೀರೆ, ಹಸಿರು ಬಣ್ಣದ ರವಿಕೆ, ತಲೆಯಲ್ಲಿ ಮಲ್ಲಿಗೆ ಹೂ ಮೂಡಿದು ಬಂದಿದ್ದರು. ಚಾಮುಂಡಿತಾಯಿ ಗರ್ಭಗುಡಿಯಲ್ಲಿ ಪೂಜೆ ಸಲ್ಲಿಸಿದ ಮುಷ್ತಾಕ್ ಅವರನ್ನು ಅಭಿನಂದಿಸಲಾಯಿತು.

Banu Mushtaq inaugurates Mysuru Dasara Despite BJP Protest amid tight security

ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು.
ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ವಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು.

ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿಸಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ , ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ ಎಂದರು.

ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ, ನೆಲದ ಬಿಸಿಲು ಕೂಡ ಸಾಹಾರ್ದತೆಯಿಂದ ಕೂಡಿದೆ. ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ.

ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ , ದೇಶಕ್ಕೆ ಮಾತ್ರ ಸೀಮಿತವಾಗದೇ , ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ ಎಂದರು.

ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ,ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ. ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ , ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+