Banu Mushtaq Row: "ನೀವು ಆರಾಧಿಸುವ ದೇವರೇ ನಿಮ್ಮನ್ನು ಮಸೀದಿಗೆ ಕರೆಸಿಕೊಂಡಿಲ್ಲ" ವೈರಲ್ ವಿಡಿಯೋ
Banu Mushtaq Row: ಕರ್ನಾಟಕದಲ್ಲಿ ದಸರಾ ಉದ್ಘಾಟನೆ ವಿವಾದವು ಸದ್ಯಕ್ಕೆ ತಣ್ಣಗಾಗುವಂತೆ ಕಾಣಿಸುತ್ತಿಲ್ಲ. ದಸರಾ ಉದ್ಘಾಟನೆಗೆ ಭರ್ಜರಿ ಸಿದ್ಧತೆ ನಡೆದಿದೆ. ಅದರ ನಡುವೆಯೇ ದಸರಾ ಉದ್ಘಾಟನೆಗೆ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದು ವಿವಾದ ಸ್ವರೂಪವನ್ನು ಪಡೆದುಕೊಂಡಿದೆ. ಬಾನು ಮುಷ್ತಾಕ್ ಅವರು ಈ ವಿವಾದಕ್ಕೆ ಸಂಬಂಧಿದಿಸಿದಂತೆ ತುಸು ಕಟುವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವೂ ಇದೀಗ ಚರ್ಚೆಗೆ ಗ್ರಾಸವಾಗಿದೆ. "ನೀವು ಆರಾಧಿಸುವ ದೇವರೇ ನಿಮ್ಮನ್ನು ಮಸೀದಿಗೆ ಕರೆಸಿಕೊಂಡಿಲ್ಲ, ಇನ್ನು ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ಳುತ್ತಾಳಾ ಭಾನು ಮುಷ್ತಾಕ್?!" ಎಂದು ಅವರನ್ನು ಪ್ರಶ್ನೆ ಮಾಡಲಾಗಿದೆ.
ಈ ವಿವಾದದ ಬಗ್ಗೆ ಮಾತನಾಡಿದ್ದ ಬಾನು ಮುಷ್ತಾಕ್ ಅವರು, ಚಾಮುಂಡೇಶ್ವರಿ ತಾಯಿಯೇ ನನ್ನನ್ನು ಮೈಸೂರಿಗೆ ಕರೆಸಿಕೊಳ್ಳುತ್ತಿದ್ದಾಳೆ. ಚಾಮುಂಡಿ ಬೆಟ್ಟಕ್ಕೆ ಹೋಗೋಣ ಎಂದು ಇಚ್ಛಿಸಿರುವುದು ಇದೆ ಎಂದು ಬಾನು ಅವರು ಹೇಳಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗುತ್ತಿದ್ದು ಚರ್ಚೆಗೆ ಕಾರಣವಾಗಿದೆ.

ಈ ವಿಚಾರವಾಗಿ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾನು ಬಾನು ಮುಷ್ತಾಕ್ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾರೆ ಎನ್ನುವ ಕಾರಣಕ್ಕೆ ನಾನು ವಿರೋಧ ವ್ಯಕ್ತಪಡಿಸುತ್ತಿಲ್ಲ. ಅದನ್ನು ಮೊದಲ ದಿನದಿಂದಲೇ ಹೇಳಿದ್ದೇನೆ. ಮುಸ್ಲಿಮರ ಬಗ್ಗೆ ನಾನು ದೂರುವುದಿಲ್ಲ. ಈ ಹಿಂದೆಯೂ ಯಾವುದೇ ಮುಸ್ಲಿಮರೂ ಟಿಪ್ಪು ಜಯಂತಿ ಮಾಡಿ ಎಂದು ಮನವಿ ಮಾಡಿರಲಿಲ್ಲ. ಆದರೆ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಆಚರಣೆ ಮಾಡಿದ್ದರು. ನಾನು ಬಾನು ಅವರಿಗೆ ನೇರವಾಗಿ ಕೇಳಲು ಇಚ್ಛಿಸುತ್ತೇನೆ. ನೀವು 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಏನಂತ ಮಾತನಾಡಿದ್ದೀರಿ ಎಂದು ಪ್ರತಾಪ್ ಸಿಂಹ ಅವರು ಪ್ರಶ್ನಿಸಿದ್ದಾರೆ.
"ನೀವು ಆರಾಧಿಸುವ ದೇವರೇ ನಿಮ್ಮನ್ನು ಮಸೀದಿಗೆ ಕರೆಸಿಕೊಂಡಿಲ್ಲ, ಇನ್ನು ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ಳುತ್ತಾಳಾ ಭಾನು ಮುಷ್ತಾಕ್?!" ಎನ್ನುವ ಸಾಲುಗಳೊಂದಿಗೆ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಇನ್ನು ಈ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮಾತು ಸಹ ವಿವಾದಕ್ಕೆ ಕಾರಣವಾಗಿತ್ತು. ಇದರ ಬಗ್ಗೆ ಸಹ ಅವರು ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ನಮ್ಮ ನಾಡ ಹಬ್ಬ - ದಸರಾ. ನಮ್ಮ ನಾಡ ದೇವತೆ - ಚಾಮುಂಡೇಶ್ವರಿ ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ನೀವು ಆರಾಧಿಸುವ ದೇವರೇ ನಿಮ್ಮನ್ನು ಮಸೀದಿಗೆ ಕರೆಸಿಕೊಂಡಿಲ್ಲ, ಇನ್ನು ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ಳುತ್ತಾಳಾ ಭಾನು ಮುಷ್ತಾಕ್?! pic.twitter.com/s3XdxIQq9B
— Prathap Simha (@mepratap) August 27, 2025
ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವಳು ನಮ್ಮ ದುರ್ಗಾ ದೇವಿ. ನಾಡ ಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜ ವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ! ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.












Click it and Unblock the Notifications