Banu Mushtaq: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್: ಅಚ್ಚರಿಯ ಹೇಳಿಕೆ ಕೊಟ್ಟ ಎಚ್.ಡಿ ಕುಮಾರಸ್ವಾಮಿ
Banu Mushtaq: ವಿಶ್ವ ವಿಖ್ಯಾತ ಮೈಸೂರು ದಸರಾ ಈ ಬಾರಿ ವಿವಾದ ಸ್ವರೂಪವನ್ನು ಪಡೆದುಕೊಂಡಿರುವುದು ಎಲ್ಲರಿಗೂ ತಿಳಿದ ವಿಚಾರ. ಇದೀಗ ಈ ವಿಚಾರವಾಗಿ ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವುದು ವಿವಾದ ಸ್ವರೂಪವನ್ನು ಪಡೆದುಕೊಂಡಿದೆ. ಈ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಪರ - ವಿರೋಧ ಚರ್ಚೆ ಶುರುವಾಗಿದೆ. ಇದರ ನಡುವೆ ಎಚ್.ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಅದೇನು ಎನ್ನುವ ವಿವರ ಇಲ್ಲಿದೆ.
ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಬಾರದು. ಬೇರೆ ಯಾರಾದರೂ ಗಣ್ಯರು ದಸರಾ ಉದ್ಘಾಟನೆ ಮಾಡಬೇಕು ಇಲ್ಲವೇ ಈ ಹಿಂದೆ ಬಾನು ಮುಷ್ತಾಕ್ ಅವರು ಯಾವ ಅರ್ಥದಲ್ಲಿ ತಾಯಿ ಭುವನೇಶ್ವರಿಯ ಬಗ್ಗೆ ಮಾತನಾಡಿದ್ದಾರೆ ಹಾಗೂ ತಾಯಿ ಚಾಮುಂಡೇಶ್ವರಿಯ ಬಗ್ಗೆ ಬಾನು ಅವರ ನಿಲುವೇನು ಎನ್ನುವುದನ್ನು ತಿಳಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಆದರೆ ಎಚ್.ಡಿ ಕುಮಾರಸ್ವಾಮಿ ಅವರು ಈ ವಿಚಾರದಲ್ಲಿ ಭಿನ್ನ ನಿಲುವು ತೆಗೆದುಕೊಂಡಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು, ಲೇಖಕಿ ಬಾನು ಮುಷ್ತಾಕ್ ಅವರ ಆಯ್ಕೆಗೆ ನಾನು ವಿರೋಧ ವ್ಯಕ್ತಪಡಿಸುವುದಿಲ್ಲ ಎಂದಿದ್ದಾರೆ. ಮುಂದುವರಿದು ಆದರೆ ಚಾಮುಂಡಿ ಬೆಟ್ಟ ಹಾಗೂ ಚಾಮುಂಡೇಶ್ವರಿ ದೇವತೆ ಹಿಂದೂಗಳ ಆಸ್ತಿ ಅಲ್ಲ ಎನ್ನುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ಹೇಳಿಕೆ ಉದ್ಧಟತದ ಪ್ರದರ್ಶನ ಎಂದಿದ್ದಾರೆ.
ಚಾಮುಂಡೇಶ್ವರಿ ಬೆಟ್ಟದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿರುವುದಕ್ಕೆ ರಿಯಾಕ್ಟ್ ಮಾಡಿರುವ ಎಚ್. ಡಿ ಕುಮಾರಸ್ವಾಮಿ ಅವರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮಸ್ತಾಕ್ ಅವರನ್ನು ಆಹ್ವಾನಿಸಿರುವುದಕ್ಕೆ ನಮ್ಮ ಯಾವುದೇ ತಕರಾರು ಇಲ್ಲ. ಆದರೆ, ಅವರು ಹಿಂದೂ ದೇವಾಲಯಗಳು, ಧಾರ್ಮಿಕ ಕೇಂದ್ರಗಳು ಹಿಂದೂಗಳ ಆಸ್ತಿಯೇನು ಅಲ್ಲ ಎನ್ನುವ ಉದ್ಧಟತನದ ಹೇಳಿಕೆಯನ್ನು ಕೊಡುವ ಅವಶ್ಯಕತೆ ಇರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಬಾನು ಮುಷ್ತಾಕ್ ಅವರಿಂದ ಪೂಜೆ ಮಾಡಿಸುವುದು ಬೇರೆಯದ್ದೇ ವಿಚಾರ. ಆದರೆ ಧಾರ್ಮಿಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮಾತನಾಡುವಾಗ ಈ ರೀತಿ ಹೇಳಿಕೆಗಳನ್ನು ಕೊಡುವುದು ಸರ್ಕಾರಕ್ಕೆ ಕುತ್ತು ತರುವಂಥದ್ದು ಎಂದು ತೀಕ್ಷ್ಣವಾಗಿ ಅವರು ರಿಯಾಕ್ಟ್ ಮಾಡಿದ್ದಾರೆ.
ಧರ್ಮಸ್ಥಳದ ಬಗ್ಗೆ ಎಚ್.ಡಿ ಕುಮಾರಸ್ವಾಮಿ: ಇನ್ನು ಇದೇ ಸಂದರ್ಭದಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಧರ್ಮಸ್ಥಳದ ವಿಚಾರವಾಗಿಯೂ ಮತಾನಾಡಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ನಾನು ರಾಜಕೀಯ ಬೆರೆಸುವುದಕ್ಕೆ ಹೋಗುವುದಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಮಂಜುನಾಥಸ್ವಾಮಿಯೇ ಶಿಕ್ಷೆ ಕೊಡಲಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರ ಈ ವಿಚಾರದಲ್ಲಿ ನಡೆದುಕೊಂಡಿರುವುದನ್ನು ನೋಡಿದರೆ, ಎಸ್ ಐಟಿ ಹೆಸರಲ್ಲಿ ತನಿಖೆಯ ನಾಟಕ ಮಾಡಿದಂತಿದೆ. ಶ್ರೀಕ್ಷೇತ್ರಕ್ಕೆ ಅವಮಾನ ಆಗುವ ರೀತಿಯಲ್ಲಿ ರಾಜ್ಯ ಸರ್ಕಾರ ನಡೆದುಕೊಂಡಿದೆ ಎಂದು ದೂರಿದರು. ಸರ್ಕಾರದ ಮುಂದೆ ದ್ವಾರಕನಾಥ್ ಎನ್ನುವವರು ದೂರು ಕೊಟ್ಟ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಕ್ರಮ ತೆಗೆದುಕೊಂಡಿದ್ದಾರೆ. ಎಡಪಂಥೀಯ ಶಕ್ತಿಗಳು ಇದೆ ಎನ್ನುವ ಮಾತು ಕೇಳಿ ಬಂದಿದೆ. ಅದು ಏನೇ ಇದ್ದರೂ ಮುಂದೆ ತಿಳಿಯಲಿದೆ ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications