ಮಹೇಂದ್ರ ಮಿಶ್ರಾ ಜಾಗಕ್ಕೆ ಬರನ್ ದಾಸ್: ಟಿವಿ 9ಗೆ ನೂತನ ಸಿಇಓ ನೇಮಕ
ಬೆಂಗಳೂರು, ಆಗಸ್ಟ್ 27 : ಕರ್ನಾಟಕದಲ್ಲಿ ಅತಿ ಹೆಚ್ಚು ವೀಕ್ಷಣೆಗೆ ಒಳಗಾಗಿರುವ ಟಿವಿ 9 ಕರ್ನಾಟಕವೂ ಸೇರಿದಂತೆ ಪ್ರಾದೇಶಿಕ ಭಾಷೆಗಳನ್ನು ಹಲವು ಸುದ್ದಿ ಸಂಸ್ಥೆಗಳನ್ನು ಹೊಂದಿರುವ ಟಿವಿ 9 ಸಮೂಹ ಸಂಸ್ಥೆಗಳಲ್ಲಿ ಮಹತ್ವ ಬೆಳವಣಿಗೆಯೊಂದು ನಡೆದಿದೆ. ಸಂಸ್ಥೆಯ ನೂತನ ಸಿಇಓ ಆಗಿ ಬರನ್ ದಾಸ್ ನೇಮಕವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚಿನ ದಿನಗಳಲ್ಲಿ ಟಿವಿ 9 ಸಂಸ್ಥೆಯೊಳಗೆ ದೊಡ್ಡಮಟ್ಟದ ಆಡಳಿತಾತ್ಮಕ ಬದಲಾವಣೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಸಮೂಹಕ್ಕೆ ಹಂಗಾಮಿ ಸಿಇಓ ಆಗಿದ್ದ ಕರ್ನಾಟಕ ಟಿವಿ 9 ಮುಖ್ಯಸ್ಥ ಮಹೇಂದ್ರ ಮಿಶ್ರಾ ನೇಮಕಗೊಂಡಿದ್ದರು. ಇದೀಗ ಆಡಳಿತ ಮಂಡಳಿ ಮಿಶ್ರಾರನ್ನು ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಿದ್ದಲ್ಲದೆ, ಅವರ ಜಾಗಕ್ಕೆ ಪೂರ್ಣಾವಧಿ ಸಿಇಓ ಆಗಿ ಬರನ್ ದಾಸ್‌ರನ್ನು ನೇಮಕ ಮಾಡಿದೆ.

ಐಐಟಿ ಮದ್ರಾಸ್, ಐಐಎಂ ಕೋಲ್ಕತ್ತಾ, ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್‌ನಲ್ಲಿ ಅಧ್ಯಯನ ಮಾಡಿರುವ ಬರನ್ ದಾಸ್ ಮಾಧ್ಯಮ ಸಂಸ್ಥೆಗಳಲ್ಲಿ ಸುಮಾರು 25 ವರ್ಷಗಳ ಅನುಭವ ಹೊಂದಿದ್ದಾರೆ. ಕಳೆದ 5 ವರ್ಷಗಳಿಂದ ಅವರು ಝೀ ಮೀಡಿಯಾ ಸಿಇಒ ಆಗಿದ್ದರು.
ಝೀ ವಾಹಿನಿ ಸೇರುವ ಮೊದಲು ಬರನ್ ದಾಸ್ ಎಬಿಪಿ ನ್ಯೂಸ್, ಇಂಡಿಯಾ ಟುಡೇ ಗ್ರೂಪ್, ಆಸ್ಟ್ರೋ ಆಲ್ ಏಷ್ಯಾ ನೆಟ್‌ವರ್ಕ್ ಸೇರಿದಂತೆ ಪ್ರಮುಖ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
"ಹೊಸ ಅವಕಾಶ ಸಿಕ್ಕಿರುವ ಬಗ್ಗೆ ಉತ್ಸುಕನಾಗಿದ್ದೇನೆ. ಪ್ರತಿಯೊಂದು ಹೊಸ ಅವಕಾಶದ ಜೊತೆಗೆ ಅನೇಕ ಸವಾಲುಗಳು ಇರುತ್ತವೆ. ತಂಡದೊಂದಿಗೆ ಸೇರಿ ನನ್ನ ಚಿಕ್ಕ ಕೊಡುಗೆ ಕೊಡುತ್ತೇನೆ" ಎಂದು ಬರನ್ ದಾಸ್ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ವಾರ ಟಿವಿ 9 ಹಂಗಾಮಿ ಸಿಇಓ ಮಹೇಂದ್ರ ಮಿಶ್ರಾ ಬದಲಾವಣೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ವಾಟ್ಸಪ್‌ನಲ್ಲಿ ಮಿಶ್ರಾ ಅವರು ಬರೆದಿದ್ದಾರೆ ಎನ್ನಲಾದ ಆಕ್ಷೇಪಣಾ ಪತ್ರವೊಂದು ಹರಿದಾಡುತ್ತಿತ್ತು. ಇದು ನಕಲಿ ಎಂಬ ಸ್ಪಷ್ಟನೆಯೂ ಕೂಡ ಮತ್ತದೇ ವಾಟ್ಸಾಪ್‌ನಲ್ಲಿ ಹರಿದಾಡಿತ್ತು. ಇದೀಗ ಅಧಿಕೃತವಾಗಿ ಸಿಇಓ ಬದಲಾವಣೆ ಸುದ್ದಿ ಹೊರಬಿದ್ದಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications