Karnataka Maulvi ISIS row: ಮೋದಿ ವಿರುದ್ಧ ಯತ್ನಾಳ್ ಷಡ್ಯಂತ್ರ ಮಾಡ್ತಿದ್ದಾರೆ- ಸಿಎಂ ಸಿದ್ದರಾಮಯ್ಯ ಆರೋಪ!
ಬೆಂಗಳೂರು ಡಿಸೆಂಬರ್ 8: ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಐಸಿಸ್ ಜೊತೆ ಸಂಪರ್ಕ ಹೊಂದಿರುವ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಿರುಗೇಟು ನೀಡಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಐಸಿಸ್ ಜೊತೆ ನಂಟು ಹೊಂದಿರುವ ಆರೋಪ ಹೊತ್ತಿರುವ ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಮುಹಮ್ಮದ್ ತನ್ವೀರ್ ಹಶ್ಮಿ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಯತ್ನಾಳ್ ಅವರು, ತನ್ವೀರ್ ಹಶ್ಮಿ ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆ. ಈ ಸತ್ಯ ತಿಳಿದಿದ್ದರೂ ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು ಸರಣಿ 'ಎಕ್ಸ' (ಹಿಂದಿನ ಟ್ವೀಟ್) ಮಾಡುವ ಮೂಲಕ ಮೋದಿ ವಿರುದ್ಧ ಯತ್ನಾಳ್ ಷಡ್ಯಂತ್ರ ನಡೆಸಿದ್ದಾರೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಯತ್ನಾಳ್ ಅವರ ಆರೋಪವನ್ನು ತಳ್ಳಿ ಹಾಕಿದ್ದಾರೆ. ಯತ್ನಾಳ್ ಅವರಿಗೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನವನ್ನು ನಿರಾಕರಿಸಿದ ಕಾರಣ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಮುಜುಗರ ಉಂಟು ಮಾಡಲು ಸಂಚು ರೂಪಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಜೊತೆಗೆ ಯತ್ನಾಳ್ ಮಾಡಿದ ಆರೋಪವನ್ನು ಹಶ್ಮಿ ಕೂಡ ತಳ್ಳಿ ಹಾಕಿದ್ದಾರೆ. ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಸಾಬೀತುಪಡಿಸಲಿ ಇಲ್ಲವಾದಲ್ಲಿ ಯತ್ನಾಳ್ ಅವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಯತ್ನಾಳ್‌ಗೆ ಹಶ್ಮಿ ಸವಾಲು ಹಾಕಿದ್ದಾರೆ.
ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ (ಹಿಂದಿನ ಟ್ವಿಟರ್)ನಲ್ಲಿ ಹಶ್ಮಿ ಜೊತೆಗಿನ ಪ್ರಧಾನಿ ಮೋದಿ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. "ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನವನ್ನು ಕಳೆದುಕೊಂಡ ನಂತರ ಕೋಪ ಮತ್ತು ಹತಾಶೆಗೊಂಡಿರುವ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಸೇಡು ತೀರಿಸಿಕೊಳ್ಳುವ ನಿಜವಾದ ಉದ್ದೇಶದಿಂದ ನನ್ನ ವಿರುದ್ಧ ಈ ಆರೋಪಗಳನ್ನು ಮಾಡಿದ್ದಾರೆ ಎಂದು ತೋರುತ್ತದೆ. ಈ ಆರೋಪದ ಬಳಿಕ, ಯತ್ನಾಳ್ ಅವರಿಗೆ ನಿಸ್ಸಂದೇಹವಾಗಿ ತಿಳಿದಿರುವ ಮೌಲ್ವಿಯೊಂದಿಗೆ ಪಿಎಂ ನರೇಂದ್ರ ಮೋದಿಯವರ ಸಂಪರ್ಕದ ವಿವರಗಳು ಸಹ ಬೆಳಕಿಗೆ ಬರುತ್ತವೆ. ಈ ಆರೋಪಗಳ ಸ್ವರೂಪವು ಪ್ರಧಾನಿ ಮತ್ತು ಇತರ ಬಿಜೆಪಿ ನಾಯಕರಿಗೆ ಮುಜುಗರ ಉಂಟುಮಾಡುವ ಪ್ರಯತ್ನವನ್ನು ಸೂಚಿಸುತ್ತದೆ' ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಪೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ.
ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು @BJP4Karnataka ಶಾಸಕ @BasanagoudaBJP ಅವರು ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ @narendramodi ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ.
— Siddaramaiah (@siddaramaiah) December 8, 2023
ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ… pic.twitter.com/T9izcas6I9
ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಯತ್ನಾಳ್ ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ. ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ಅವರು ವಾಗ್ದಾಳಿ ಮಾಡಿದರು.
ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ @BJP4India ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈಗ ಪ್ರಧಾನಿ @narendramodi ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ವೀರ್… pic.twitter.com/TtcvL6QdrM
— Siddaramaiah (@siddaramaiah) December 8, 2023
ಶಾಸಕ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು? ಬಿಜೆಪಿಯಲ್ಲಿರುವ ಯಾವ 'ಜೀ'' ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ ಎಂದರು.
ಸಿದ್ದರಾಮಯ್ಯ ನವರೇ ,
— Basanagouda R Patil (Yatnal) (@BasanagoudaBJP) December 8, 2023
ನಿಮ್ಮ ಅವರ ಸಂಬಂಧದ ಬಗ್ಗೆ ತಾವೇ ಹೇಳಿರುವ ಸ್ವಾಗತಾರ್ಹ.
ಎಲ್ಲದರ ಬಗ್ಗೆ ತನಿಖೆಗೆ ಆದೇಶಿಸಿ, ತನಿಖೆಗೆ ಆದೇಶ ಮಾಡದೆ ಆತನನ್ನು ರಕ್ಷಿಸಲು ಯಾಕೆ ಮುಂದಾಗುತ್ತಿದ್ದಿರಿ? https://t.co/g4Fqmv6GPj
ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈಗ ಪ್ರಧಾನಿ ಮೋದಿ ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಹಾಗೂ ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸವರಾಜ ಬೊಮ್ಮಾಯಿ ವಿರುದ್ಧ ಕ್ರಮವನ್ನಾದರೂ ಕೈಗೊಳ್ಳಬೇಕು ಎಂದು ಸೂಚಿಸಿದರು.












Click it and Unblock the Notifications