ಸ"ಮಜಾವಾದಿ" ಸಿದ್ದರಾಮಯ್ಯನವರ ಸಾಮಾನ್ಯ ಜೀವನ!
ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ತೆರಳಿದ್ದ ಸಿಎಂ ಸಿದ್ದರಾಮಯ್ಯ ದೆಹಲಿಯಿಂದ ವಾಪಸಾಗಿದ್ದಾರೆ. ದೆಹಲಿಯಿಂದ ವಾಪಸ್ ಬರುವಾಗ ಸಚಿವ ಜಮೀರ್ ಅಹಮದ್ ಖಾನ್ ಜೊತೆಗೆ ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್ ಈ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಟೀಕೆಗೆ ಕಾರಣವಾಗಿದೆ. ರಾಜ್ಯದಲ್ಲಿ ಬರಗಾಲ ಇದ್ದು ಹಲವು ಸಮಸ್ಯಗಳಿರುವಾಗ ನಾಯಕರು ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸುವುದು ಬೇಕಿತ್ತಾ ಎಂದು ಪ್ರಶ್ನೆ ಮಾಡಲಾಗಿದೆ.

ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಜಮೀರ್ ಅಹ್ಮದ್ ಟ್ವೀಟ್ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದು, ರಾಜ್ಯದಲ್ಲಿ ಸಮಸ್ಯೆ ಇದ್ದಾಗ ನಾಯಕರು ಮಜಾ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಸ"ಮಜಾವಾದಿ" ಸಿದ್ದರಾಮಯ್ಯನವರ ಸಾಮಾನ್ಯ ಜೀವನ!
— Basanagouda R Patil (Yatnal) (@BasanagoudaBJP) December 22, 2023
ಶಾಲಾ ಮಕ್ಕಳು ಬಸ್ಸುಗಳು ಸಿಗದೆ ನೇತಾಡಿಕೊಂಡು ಬಿಎಂಟಿಸಿ/ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ಓಡಾಡುವುದು, ಸರ್ಕಾರದ ಯೋಜನೆಗಳಿಗೆ ಅನುದಾನಗಳ ಕೊರತೆ, ಶಾಲೆಗಳ ನವೀಕರಣಕ್ಕೆ ಹಣದ ಕೊರತೆ ಹಾಗು ಕಾಂಗ್ರೆಸ್ ಭಾಗ್ಯಗಳಿಗೇ ಅನುದಾನದ ಕೊರತೆ ಮಧ್ಯೆ ಸಿದ್ದರಾಮಯ್ಯನವರ ವಿಮಾನ ಪ್ರಯಾಣ! https://t.co/pqrgIt6uB1
ಸ'ಮಾಜಾವಾದಿ' ಜೀವನ
ಸ"ಮಜಾವಾದಿ" ಸಿದ್ದರಾಮಯ್ಯನವರ ಸಾಮಾನ್ಯ ಜೀವನ! ಎಂದು ಟ್ವೀಟ್ ಮಾಡಿರುವ ಅವರು, ಶಾಲಾ ಮಕ್ಕಳು ಬಸ್ಸುಗಳು ಸಿಗದೆ ನೇತಾಡಿಕೊಂಡು ಬಿಎಂಟಿಸಿ/ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ಓಡಾಡುವುದು, ಸರ್ಕಾರದ ಯೋಜನೆಗಳಿಗೆ ಅನುದಾನಗಳ ಕೊರತೆ, ಶಾಲೆಗಳ ನವೀಕರಣಕ್ಕೆ ಹಣದ ಕೊರತೆ ಹಾಗು ಕಾಂಗ್ರೆಸ್ ಭಾಗ್ಯಗಳಿಗೇ ಅನುದಾನದ ಕೊರತೆ ಮಧ್ಯೆ ಸಿದ್ದರಾಮಯ್ಯನವರ ವಿಮಾನ ಪ್ರಯಾಣ!" ಎಂದು ಟೀಕಿಸಿದ್ದಾರೆ.
ಜಮೀರ್ ಅಹ್ಮದ್ ಟ್ವೀಟ್
ದೆಹಲಿಯಲ್ಲಿ ವಿವಿಧ ನಾಯಕರ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ಜೊತೆಗೆ ಹಲವು ಸಚಿವರು ಕೂಡ ಪ್ರಯಾಣಿಸಿದ್ದರು. ಸಚಿವ ಗೋವಿಂದ ಕಾರಜೋಳ, ಕೃಷ್ಣ ಬೈರೇಗೌಡ ಕೂಡ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ.
"ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು." ಎಂದು ಟ್ವೀಟ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು.
ಜಮೀರ್ ಅಹ್ಮದ್ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು ರಾಜ್ಯದಲ್ಲಿ ಬರ ಇದ್ದರೂ ರಾಜಕಾರಣಿಗಳ ಐಷಾರಾಮಿ ಜೀವನಕ್ಕೇನು ಕಡಿಮೆಯಾಗಿಲ್ಲ ಎಂದು ಹೇಳಿದ್ದಾರೆ.
ಟ್ವೀಟ್ ಮಾಡಿರುವ ಒಬ್ಬರು "ರಾಜ್ಯದ ಎಲ್ಲೆಡೆ ಬರ ಇದೆ. ಪರಿಹಾರ ಕೊಡೊಕೆ ಹಣ ಇಲ್ಲ ಅಂತಾರೆ. ಆದರೆ, ಇವ್ರು ನೋಡುದ್ರೆ ಸರ್ಕಾರದ ದುಡ್ಡಲ್ಲಿ ಪ್ರೈವೇಟ್ ವಿಮಾನದಲ್ಲಿ ಓಡಾಡಿಕೊಂಡು ರೀಲ್ಸ್ ವಿಡಿಯೊ ಮಾಡ್ಕೊಂಡು ಹೆಂಗೆ ಮೋಜು ಮಾಡ್ತಾ ಇದಾರೆ. ನಾಚಿಕೆ ಆಗಬೇಕು." ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ, ಬರ ಪರಿಹಾರಕ್ಕೆ ನೆರವು ಕೇಳುವುದು ಬಿಟ್ಟು ಪ್ರೈವೆಟ್ ಜೆಟ್‌ನಲ್ಲಿ ಓಡಾಡುತ್ತಿದ್ದಾರೆ ಎಂದು ಮತ್ತೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications