Basangouda Patil Yatnal: ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ

Basangouda Patil Yatnal: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಹಾಗಾದ್ರೆ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ವಿಜಯಪುರ ಶಾಸಕ ಯತ್ನಾಳ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ವಿರುದ್ಧ ಮೊದಲಿನಿಂದಲೂ ನಾಲಗೆ ಹರಿಬಿಡುತ್ತಲೇ ಇದ್ದಾರೆ. ಅಲ್ಲದೆ, ರಾಜ್ಯಾಧ್ಯಕ್ಷರ ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ ಹಿನ್ನೆಲೆ ಅವರಿಗೆ ನೋಟಿಸ್ ಕೊಡಲಾಗಿತ್ತು. ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್‌ ಪಕ್ಷದಿಂದ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ.

Basanagouda Patil Yatnal Expelled from BJP for 6 Years

ಯತ್ನಾಳ್‌ ಅವರಿಗೆ ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್‌ ನೀಡಿತ್ತು. ನೋಟಿಸ್‌ ನೀಡಿದ್ದರೂ ಕೂಡ ಪದೇ ಪದೇ ಪಕ್ಷ ವಿರೋಧಿ ಚಟುವಟಿಕೆ, ಶಿಸ್ತು ಉಲ್ಲಂಘನೆ ಮಾಡುತ್ತಲೇ ಇದ್ದರು. ಕೊನೆಗೆ 2025 ಫೆಬ್ರವರಿ 10ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು ಈ ನಿರ್ಧಾರವನ್ನು ಕೈಗೊಂಡಿದೆ ಎಂದು ತಿಳಿದುಬಂದಿದೆ.

ಪದೇ ಪದೇ ನೀವು ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಅಲ್ಲದೆ, ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯೇಂದ್ರ ಟ್ವೀಟ್‌: ಬಸನಗೌಡ ಪಾಟೀಲ್ ಯತ್ನಾಳ್‌ ಅವರಿಗೆ ಉಚ್ಛಾಟನೆ ಆದೇಶ ಬರುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟ್ವೀಟ್‌ ಮಾಡಿದ್ದಾರೆ.

ಬಿಜೆಪಿಯು ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಎಂದು ಟ್ವೀಟ್‌ ಮಾಡಿದ್ದಾರೆ.

ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ. ಸದ್ಯ ಬಸನಗೌಡ ಪಾಟೀಲ್‌ ಅವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ.

ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+