ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಲು ಹಿಡಿದು, ತಲೆಹಿಡಿಯುವ ಕೆಲಸ ಮಾಡಿಲ್ಲ: ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ಮತ್ತೆ ಕಿಡಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21: ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಕುರಿತು ಮತ್ತೆ ಹೊತ್ತಿರುವ ಕಿಡಿ ಇನ್ನಷ್ಟು ಜೋರಾಗುವ ಸಾಧ್ಯತೆ ಕಂಡುಬರುತ್ತಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಉತ್ತರ ಕರ್ನಾಟಕದವರೊಬ್ಬರು ಅಧಿಕಾರಕ್ಕೆ ಏರಲಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಉತ್ತರ ಕರ್ನಾಟಕದವರೇ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಗಾದಿಗೆ ಏರುವುದು ಖಚಿತ. ಉತ್ತರ ಕರ್ನಾಟಕದವರನ್ನೇ ಸಿಎಂ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ ಎಂದಿರುವ ಯತ್ನಾಳ್, ತಮ್ಮ ಕ್ಷೇತ್ರಕ್ಕೆ ಬರಬೇಕಾದ ಅನುದಾನವನ್ನು ಯಡಿಯೂರಪ್ಪ ಕಡಿತ ಮಾಡಿದ್ದಾರೆ. ಇದಕ್ಕಾಗಿ ಸಿಎಂ ವಿರುದ್ಧ ತಮ್ಮ ಜಗಳ ಶುರುವಾಗಿದೆ. ಅವರು ಹೆಚ್ಚು ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ಯತ್ನಾಳ್ ಹೇಳಿದ್ದರು.

ಬಿ.ಎಸ್.ಯಡಿಯೂರಪ್ಪ ಇನ್ನೇನು ಹೆಚ್ಚು ದಿನ ಮುಖ್ಯಮಂತ್ರಿ ಆಗಿರುವುದಿಲ್ಲ: ಬಿಜೆಪಿ ಹಿರಿಯ ಶಾಸಕಬಿ.ಎಸ್.ಯಡಿಯೂರಪ್ಪ ಇನ್ನೇನು ಹೆಚ್ಚು ದಿನ ಮುಖ್ಯಮಂತ್ರಿ ಆಗಿರುವುದಿಲ್ಲ: ಬಿಜೆಪಿ ಹಿರಿಯ ಶಾಸಕ

ಯತ್ನಾಳ್ ಅವರ ಹೇಳಿಕೆಗೆ ಪಕ್ಷದ ಅನೇಕ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಪಕ್ಷದ ನಾಯಕತ್ವದಲ್ಲಿ ಬದಲಾವಣೆಮಾಡುವ ಯಾವ ಪ್ರಸ್ತಾಪವೂ ಕೇಂದ್ರದ ನಾಯಕರ ಮುಂದೆ ಇಲ್ಲ. ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅವರೇ ಸಂಪೂರ್ಣ ಅವಧಿಯವರೆಗೆ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದರು. ಇದಕ್ಕೆ ಯತ್ನಾಳ್ ಪುನಃ ತಿರುಗೇಟು ನೀಡಿದ್ದಾರೆ. ಮುಂದೆ ಓದಿ.

ಆತ್ಮಸಾಕ್ಷಿಯಿಂದ ಕೆಲಸ

ಆತ್ಮಸಾಕ್ಷಿಯಿಂದ ಕೆಲಸ

'ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆಯೇ ಹೊರತು ಸಚಿವನಾಗುವುದಕ್ಕೆ ಯಾರದೋ ಕಾಲು ಹಿಡಿದು ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನ ಅಲ್ಲ' ಎಂದು ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ.

ನಿಮ್ಮದೇ ವರ್ಚಸ್ಸು ಕಡಿಮೆಯಾಗೋದು

ನಿಮ್ಮದೇ ವರ್ಚಸ್ಸು ಕಡಿಮೆಯಾಗೋದು

ರಾಜ್ಯದಲ್ಲಿ ಮುಖ್ಯಮಂತ್ರಿ ಸೀಟ್ ಖಾಲಿ ಇಲ್ಲ, ಯತ್ನಾಳ್ ಅವರೇ ನೀವು ಯಡಿಯೂರಪ್ಪ ಅವರನ್ನು ಟೀಕಿಸಿದ ಮಾತ್ರಕ್ಕೆ ಅವರ ವರ್ಚಸ್ಸು ಕಡಿಮೆಯಾಗೊಲ್ಲ, ಬದಲಿಗೆ ನಿಮ್ಮ ವರ್ಚಸ್ಸು ಕಡಿಮೆಯಾಗುತ್ತೆ. ನೀವೊಬ್ಬ ಹಿರಿಯ ನಾಯಕರಾಗಿ ಇಂತಹ ಹೇಳಿಕೆಗಳು ನಿಮಗೆ ಶೋಭೆ ತರುವುದಿಲ್ಲ. ಯಡಿಯೂರಪ್ಪ ಅವರ ನಡೆಯನ್ನು ಬಿಜೆಪಿ ಹೈಕಮಾಂಡ್ ಸಹಿಸಿಕೊಳ್ಳುತ್ತಿಲ್ಲ ಎಂಬುದು ಶುದ್ಧ ಸುಳ್ಳು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ, ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆ.

ಅ.21 ರಂದು ಪ್ರವಾಹ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ: ಸಿಎಂ ಯಡಿಯೂರಪ್ಪಅ.21 ರಂದು ಪ್ರವಾಹ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ: ಸಿಎಂ ಯಡಿಯೂರಪ್ಪ

ಯತ್ನಾಳ್ ಹಗಲುಕನಸು

ಯತ್ನಾಳ್ ಹಗಲುಕನಸು

'ಯತ್ನಾಳ್ ಅವರು ಸ್ವಾರ್ಥಕ್ಕಾಗಿ ಹೇಳಿಕೆ ಕೊಡುತ್ತಿದ್ದಾರೆಯೇ ವಿನಾ ಅದು ಉತ್ತರ ಕರ್ನಾಟಕ ಭಾಗದ ಶಾಸಕರ ಹೇಳಿಕೆ ಅಲ್ಲ. ಅವರು ಮುಖ್ಯಮಂತ್ರಿಯಾಗಲು ಹಗಲುಗನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಅವರು ಆಲದ ಮರದ ಇದ್ದಂತೆ. ಆಲದ ಮರದ ಕೆಳಗೆ ಇದ್ದು ನಾವು ರಾಜಕಾರಣ ಮಾಡಬೇಕು' ಎಂದಿದ್ದಾರೆ.

ಯಡಿಯೂರಪ್ಪ ತಾರತಮ್ಯ ಮಾಡಿಲ್ಲ

ಯಡಿಯೂರಪ್ಪ ತಾರತಮ್ಯ ಮಾಡಿಲ್ಲ

'ಉತ್ತರ ಕರ್ನಾಟಕ ಭಾಗದವರನ್ನು ಸಿಎಂ ಮಾಡುವ ಬಗ್ಗೆ ಚರ್ಚೆಯಾಗಿಲ್ಲ. ಯಾರೇ ಇಂತಹ ಹೇಳಿಕೆ ನೀಡಿದರೂ ಪಕ್ಷ ಸೂಕ್ಷ್ಮವಾಗಿ ಗಮನಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಿದೆ. ಯತ್ನಾಳ್ ಹೇಳಿಕೆಯಲ್ಲಿ ಬಿಜೆಪಿಯ ಯಾವುದೇ ನಾಯಕರ ಪಾತ್ರ ಇಲ್ಲ. ಕರ್ನಾಟಕದಲ್ಲಿ ನಾಯಕತ್ವದ ಬದಲಾವಣೆ ಇಲ್ಲ. ಅಭಿವೃದ್ಧಿಯ ವಿಷಯದಲ್ಲಿ ಯಡಿಯೂರಪ್ಪ ಯಾರಿಗೂ ತಾರತಮ್ಯ ಮಾಡಿಲ್ಲ ಎಂದು ರೇಣುಕಾಚಾರ್ಯ ಸಮರ್ಥಿಸಿಕೊಂಡಿದ್ದಾರೆ.

Recommended Video

ಪರಿಹಾರ ಕೊಡ್ತಾರಾ?? ನೋಡ್ಕೊಂಡು ಸುಮ್ನೆ ಹೋಗ್ತಾರಾ?? | Oneindia Kannada

English summary
Vijayapura MLA Basanagouda Patil Yatnal defended his statement against state BJP leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X