BREAKING : ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ ಯತ್ನಾಳ್‌ಗೆ ಹೈಕಮಾಂಡ್‌ನಿಂದ ಬಿಗ್ ಶಾಕ್
ಬೆಂಗಳೂರು, ಫೆಬ್ರವರಿ 10: ಹಲವು ದಿನಗಳಿಂದ ಬಿಜೆಪಿ ಪಾಳಯದಲ್ಲಿ ಬಣ ಬಡಿದಾಟ ಜೋರಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರ ನಡುವೆ ಬಣ ಬಡಿದಾಟ ತೀವ್ರ ತಾರಕಕ್ಕೆರಿದ್ದು, ಇದೀಗ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಹಿನ್ನೆಲೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಶ್ ನೋಟಿಸ್ ಜಾರಿ ಮಾಡಿದೆ.
ಬಿಜೆಪಿಯ ಬಣ ಬಡಿದಾಟಕ್ಕೆ ಮುಂದಾಗಿರುವ ಹೈಕಮಾಂಡ್ ನಾಯಕರು, ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದಕ್ಕೆ ಬ್ರೇಕ್ ಹಾಕಲು ಇದೀಗ ರೆಬಲ್ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ವಿಚಾರವಾಗಿ ಯತ್ನಾಳ್ ಅವರಿಗೆ ಹೈಕಮಾಂಡ್ ನೀಡಿರುವ ಇದು ಎರಡನೇ ನೋಟಿಸ್ ಆಗಿದೆ. ಕಳೆದೆರಡು ತಿಂಗಳ ಹಿಂದೆಯೂ ನೋಟಿಸ್ ನೀಡಲಾಗಿತ್ತು.

ಮೊದಲಿನಿಂದಲೂ ಯತ್ನಾಳ್ ಅವರು ಪಕ್ಷದ ಕೆಲ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಹೀಗಾಗಿ ಬಿಜೆಪಿ ಹೈಕಮಾಂಡ್ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ವಿವರಣೆಯನ್ನ ಹೈಕಮಾಂಡ್ ಕೇಳಲಾಗಿದೆ. ಖುದ್ದು ಹಾಜರಾಗಿ, ವಿವರಣೆ ನೀಡುವಂತೆ ನೋಟಿಸ್‌ನಲ್ಲಿ ಸೂಚನೆ ನೀಡಲಾಗಿದ್ದು, ನೋಟಿಸ್ ನೀಡಿದ 72 ಗಂಟೆಗಳ ಒಳಗೆ ಉತ್ತರ ಕೊಡಬೇಕು ಅಂತ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೂಚನೆ ನೀಡಲಾಗಿದೆ.
ನೋಟಿಸ್ ಕೊಟ್ಟು 72 ಗಂಟೆ ಒಳಗೆ ಕಾರಣ ನೀಡುವಂತೆ ಬಿಜೆಪಿ ಶಿಸ್ತು ಸಮಿತಿ ಸೂಚನೆ ನೀಡಿದೆ. ಅಲ್ಲದೇ ನಿಗದಿತ ಕಾಲಮಿತಿಯೊಳಗೆ ಉತ್ತರ ನೀಡದಿದ್ದಲ್ಲಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಶೋಕಾಸ್ ನೋಟಿಸ್‌ನಲ್ಲಿ ಖಡಕ್ ಸೂಚನೆ ನೀಡಿಲಾಗಿದೆ. ಆದರೆ, ಬಿಜೆಪಿ ಶಿಸ್ತು ಸಮಿತಿ ನೀಡಿರುವ ಶೋಕಾಸ್ ನೋಟಿಸ್ ಇನ್ನೂ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಕೈಸೇರಿಲ್ಲ. ಸದ್ಯ ಯತ್ನಾಳ್ ದೆಹಲಿಯಿಂದ ಹೈದರಾಬಾದ್ ಪ್ರಯಾಣದಲ್ಲಿದ್ದಾರೆ. ಇನ್ನು ವಿಜಯೇಂದ್ರ ದೆಹಲಿಯಲ್ಲಿರುವಾಗಲೇ ಯತ್ನಾಳ್‌ಗೆ ನೋಟಿಸ್ ಜಾರಿ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಈ ಹಿಂದೆಯೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ರು. ಅಲ್ಲದೇ ಬಿ ವೈ ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಟೀಕೆಗಳನ್ನು ಮಾಡುತ್ತ ಬಂದ ಯತ್ನಾಳ್ ಅವರ ವಿರುದ್ಧ ಕಳೆದ ವರ್ಷ ಡಿಸೆಂಬರ್ ನಲ್ಲಿಯೂ ಯತ್ನಾಳ್‌ಗೆ ಶಿಸ್ತುಪಾಲನಾ ಸಮಿತಿ ಮೊದಲ ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು. ಇದೀಗ ಮತ್ತೆ ಬಿಜೆಪಿ ಶಿಸ್ತು ಸಮಿತಿ ಎರಡನೇ ಶೋಕಸ್ ನೋಟಿಸ್ ನೀಡಿದೆ.












Click it and Unblock the Notifications